POCSO case: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನೀಡಿದ ಆರೋಪ ಎದುರಿಸುತ್ತಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್‌ಯಡಿಯೂರಪ್ಪ ಅವರ ವಿರುದ್ಧ ಸಿಐಡಿ ಪೊಲೀಸರು ನ್ಯಾಯಾಲಯಕ್ಕೆ ಸುಮಾರು 750 ಪುಟಗಳಿರುವ ಚಾರ್ಜ್ ಶೀಟ್ ಇದಾಗಿದ್ದು, 75 ಮಂದಿಯನ್ನು ಸಾಕ್ಷಿಗಳಾಗಿ ಇರುವ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.
ಮಾಜಿ ಸಿಎಂ ಯಡಿಯೂರಪ್ಪ ನನ್ನ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಮಾಡಿದ್ದಾರೆ ಎಂದು ಸಂತ್ರಸ್ತ ಬಾಲಕಿಯ ತಾಯಿ ಬೆಂಗಳೂರಿನ ಸದಾಶಿವನಗರದ ಪೊಲೀಸ್ ಠಾಣೆಗೆ ದೂರನ್ನು ನೀಡಿದ್ದರು. ಈ ಹಿನ್ನೆಲೆ ಪೊಲೀಸರು ಬಿಎಸ್ ವೈ ಮೇಲೆ ಪೋಕ್ಸೋ ಪ್ರಕರಣವನ್ನು ದಾಖಲಿಸಿಕೊಂಡರು. ನಂತರ ಸರ್ಕಾರವು ಈ ಪ್ರಕರಣವನ್ನು ಸಿಐಡಿ ಗೆ ವರ್ಗಾಯಿಸಿತು.
ಚಾರ್ಜ್ ಶೀಟ್ ನಲ್ಲಿ ಏನಿದೆ..?
ಯಡಿಯೂರಪ್ಪ ಅವರು ಯಾವುದು ಹಳೇ ಕೇಸ್ ಬಗ್ಗೆ ಮಾತನಾಡುತ್ತಾ ಬಾಲಕಿಯನ್ನು ರೂಮಿಗೆ ಕರೆದುಕೊಂಡು ಹೋಗಿ ಅನುಚಿತವಾಗಿ ವರ್ತಿಸಿರುವುದಾಗಿ ಮತ್ತು ಬಾಲಕಿ ಪ್ರತಿಭಟಿಸಿದಾಗ ಹಣ ನೀಡಿ ಕಳುಹಿಸಿದ್ದಾರೆ ಎಂದು ಚಾಟ್ ಶೀಟ್ ನಲ್ಲಿ ಉಲ್ಲೇಖಿಸಲಾಗಿದೆ.
ಇದು ತಾಯಿಗೆ ಗೊತ್ತಾದ ನಂತರ ತಾಯಿಯು ತನ್ನ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಒಂದನ್ನು ಪೋಸ್ಟ್ ಮಾಡಿ ನನ್ನ ಮಗಳಿಗೆ ಲೈಂಗಿಕ ದೌರ್ಜನ್ಯ ನೀಡಿದ್ದಾರೆ ಎಂದು ಆರೋಪಿಸಿದರು. ನಂತರ ಯಡಿಯೂರಪ್ಪ ಆಪ್ತರಾದ ಮೂರು ಜನರು ಮಹಿಳೆಯನ್ನು ಕರೆತಂದು ವಿಡಿಯೋ ಅನ್ನು ಡಿಲೀಟ್ ಮಾಡಿಸಿದರು ಎಂದು ಆರೋಪಿಸಲಾಗಿದೆ. ಹೀಗಾಗಿ ಪೊಲೀಸರು ಈ ಮೂವರ ವಿರುದ್ಧವೂ ಕೂಡ ಪ್ರಕರಣವನ್ನು ದಾಖಲಿಸಲಾಗಿದೆ.