Prajwal Revanna News: ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸಿಲುಕಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯವು ವಜಾ ಮಾಡಲಾಗಿದೆ.
ಪ್ರಜ್ವಲ್ ವಿರುದ್ಧ ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರದ ಪ್ರಕರಣವನ್ನು ಹೊಳೆನರಸೀಪುರ ಪೋಲಿಸ್ ಠಾಣೆಯಲ್ಲಿ ದಾಖಲಿಸಲಾಗಿತ್ತು. ಬುಧವಾರ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ. ಪ್ರಜ್ವಲ್ ರೇವಣ್ಣ ಈಗ ಹೈಕೋರ್ಟ್ ಮೊರೆ ಹೋಗುವುದು ಅನಿವಾರ್ಯವಾಗಿದೆ.
ನ್ಯಾಯಾಂಗ ಬಂಧನದಲ್ಲಿರುವ ಪ್ರಜ್ವಲ್ ರೇವಣ್ಣ ಅವರನ್ನು ಮೂರನೇ ಪ್ರಕರಣದಲ್ಲಿ ಇಂದು ಎಸ್ಐಟಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದು, ಅವರನ್ನು ಹೊಳೆನರಸೀಪುರಕ್ಕೆ ಕರೆದೊಯ್ದು ಅವರ ತಂದೆ ಹಾಗೂ ಮಾಜಿ ಸಚಿವ ಎಚ್ ಡಿ ರೇವಣ್ಣ ಅವರ ನಿವಾಸದಲ್ಲಿ ಸ್ಥಳ ಮಹಜರು ಮಾಡಿದ್ದಾರೆ.
ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮುಂದೆ ಜಾಮೀನು ಅರ್ಜಿ ವಿಚಾರಣೆ ನಡೆಯಿತು. ಪ್ರಜ್ವಲ್ ಅವರ ಪರವಾಗಿ ಹಿರಿಯ ವಕೀಲ ಸಿ.ವಿ.ನಾಗೇಶ್ ವಾದ ವಾದ ಮಂಡಿಸಿದ್ದರು. ನಮ್ಮ ಕಕ್ಷಿದಾರರು ಎಸ್ಐಟಿಯ ಎಲ್ಲಾ ವಿಚಾರಣೆಗೆ ಸಹಕಾರಿಸಿದ್ದಾರೆ ಮುಂದೆಯೂ ಕೂಡಾ ಸಹಾಕರಿಸಲಿದ್ದಾರೆ ಜಮೀನು ನೀಡಬಹುದಾದ ಪ್ರಕರಣವಾಗಿರುವುದರಿಂದ ಸಹಕರಿಸಬೇಕು ಎಂದು ವಾದ ಮಂಡಿಸಿದರು.
ಇದಕ್ಕೆ ಪ್ರತಿವಾದವಾಗಿ ಸರ್ಕಾರದ ಪರ ಅಭಿಯೋಜಕರು, ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದರು. ಆರೋಪಿ ಪ್ರಭಾವಿ ಆಗಿರುವುದರಿಂದ ಸಾಕ್ಷಿ ನಾಶಪಡಿಸುವ ಎಲ್ಲಾ ಸಾಧ್ಯತೆಯಿರುವುದರಿಂದ ಜಾಮೀನು ಮಂಜೂರು ಮಾಡುವುದು ಬೇಡ ಎಂದು ಕೋರಿದರು.