ಕಲಬುರಗಿ: ಗುಲ್ಬರ್ಗ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ವತಿಯಿಂದ ಪತ್ರಿಕಾ ದಿನಾಚರಣೆಯು ಜು.9ರಂದು ಬೆಳಗ್ಗೆ 11.30ಕ್ಕೆ ಪತ್ರಿಕೋದ್ಯಮ ವಿಭಾಗದಲ್ಲಿ ಜರುಗಲಿದೆ.
ಕುಲಪತಿ ಪ್ರೊ. ಹೂವಿನಬಾವಿ ಬಾಬಣ್ಣ ಉದ್ಘಾಟಿಸುವರು. ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ ಭವಾನಿ ಸಿಂಗ್, ಗು.ವಿವಿಯ ಕುಲಸಚಿವ ಚಂದ್ರಕಾಂತ ಯಾತನೂರ, ಸಿಂಡಿಕೇಟ್ ಸದಸ್ಯ ಉದಯಕಾಂತ ಪಾಟೀಲ ಮುಖ್ಯ ಅಥಿತಿಗಳಾಗಿ ಭಾಗವಹಿಸಲಿದ್ದಾರೆ ಎಂದು ವಿಭಾಗದ ಸಂಯೋಜನಾಧಿಕಾರಿ ಡಾ. ಸುರೇಶ ಜಂಗೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.