Mann Ki Baat: ಏಕ್ ಪೇಡೆ ಮಾ ಕೆ ನಾಮ್ (ಅಮ್ಮನ ಹೆಸರಿನಲ್ಲಿ ಒಂದು ಗಿಡ) ನೆಟ್ಟು ಪರಿಸರ ದಿನವನ್ನು ಆಚರಿಸಿ ಎಂದು ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ಕರೆ ಕೊಟ್ಟಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರ ಜನಪ್ರಿಯ ಕಾರ್ಯಕ್ರಮದ ಮನ್ ಕಿ ಬಾತ್ ಸರಣಿಯ 111ನೇ ಆವೃತ್ತಿ ಕಾರ್ಯಕ್ರಮವು ಭಾನುವಾರ ನಡೆಯಿತು. ದೇಶದ ಜನತೆಯನ್ನು ಉದ್ದೇಶಿಸಿ ಹಲವಾರು ವಿಚಾರಗಳನ್ನು ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿಯವರು ಮಾತನಾಡಿದರು.
“ನಾನು ನನ್ನ ಅಮ್ಮನ ಹೆಸರಿನಲ್ಲಿ ಗಿಡ ನೆಟ್ಟಿದ್ದೇನೆ. ಅಮ್ಮನ ಋಣ ತೀರಿಸಲು ಯಾರಿಂದಲೂ ಸಾಧ್ಯವಿಲ್ಲ, ಹಾಗೆಯೇ ಈ ಭೂಮಿಗಾಗಿ ಏನಾದರೂ ಒಳಿತು ಮಾಡಬೇಕು ಅದಕ್ಕಾಗಿ ಅಮ್ಮನ ಹೆಸರಿನಲ್ಲಿ ಗಿಡ ನೆಟ್ಟು ಪರಿಸರ ದಿನವನ್ನು ಆಚರಿಸಿ” ಎಂದು ಪ್ರಧಾನಿ ಮೋದಿ ಗಮನ ಸೆಳೆದಿದ್ದಾರೆ.
“ಪ್ಲಾಂಟ್ ಫಾರ್ ಮದರ್” ಎನ್ನುವ ಹ್ಯಾಶ್ ಟ್ಯಾಗ್ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಸಂದೇಶ ಹಂಚಿ ಅಭಿಯಾನ ಮುಂದುವರಿಸಿ ಎಂದು ತಿಳಿಸಿದರು.
ಇದೇ ಜೂನ್ 6 ರಂದು ವಿಶ್ವ ಪರಿಸರ ದಿನದಂದು ಪ್ರಧಾನಿ ನರೇಂದ್ರ ಮೋದಿ ದೆಹಲಿಯ ಬುದ್ಧ ಜಯಂತಿ ಪಾರ್ಕ್ ನಲ್ಲಿ ಅಮ್ಮನ ಹೆಸರಿನಲ್ಲಿ ಗಿಡ ನೀಡುವ ಮೂಲಕ ಅಭಿಯಾನವನ್ನು ಪ್ರಾರಂಭಿಸಿದರು.
ನಂತರ ಮಾತನಾಡುತ್ತಾ ಪ್ಯಾರಿಸ್ ನಲ್ಲಿ ಒಲಂಪಿಕ್ಸ್ ಶೀಘ್ರದಲ್ಲೇ ಆರಂಭವಾಗಲಿದೆ. ಭಾರತೀಯ ಕ್ರೀಡಾಪಟುಗಳನ್ನು ಹುರಿದುಂಬಿಸಲು ನೀವೆಲ್ಲರೂ ಸಿದ್ಧರಿದ್ದೀರಿ ಎಂದು ಭಾವಿಸುತ್ತೇನೆ. ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಭಾಗವಹಿಸುತ್ತಿರುವ ಎಲ್ಲಾ ಭಾರತೀಯ ಕ್ರೀಡಾಪಟುಗಳಿಗೆ ಆಲ್ ದಿ ಬೆಸ್ಟ್ ಎಂದು ಶುಭ ಹಾರೈಸಿದರು.
ಕಳೆದ ಯೋಗ ದಿನಾಚರಣೆ ದಿನದಂದು ದೊಡ್ಡ ಮಟ್ಟದಲ್ಲಿ ಭಾಗಿಯಾಗಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದ್ದಕ್ಕೆ ಮೋದಿ ಸಂತಸ ಪಟ್ಟರು. ಯೋಗ ಒಂದು ದಿನದ ಆಚರಣೆಯಾಗದೇ ಯೋಗವು ಜೀವದನ ಭಾಗವಾಗಲಿ ಎಂದು ತಿಳಿಸಿದರು.