ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ನೋಟಿಸ್ ಜಾರಿಯಾಗಿದ್ದು, ಈ ಕುರಿತು ಕ್ಯಾಬಿನೆಟ್ ಸಚಿವರ ಎಲ್ಲಾ ಸೇರಿ ಸಚಿವ ಸಂಪುಟ ಸಭೆಯನ್ನು ನಡೆಸಲಾಯಿತು.
ಮೈಸೂರು ನಗರ ಅಭಿವೃದ್ಧಿ ಪ್ರಾಧಿಕಾರ(MUDA) ಅಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಕೋರಿ ಸಲ್ಲಿಸಿರುವ ಅರ್ಜಿಗೆ ವಿವರಣೆ ನೀಡುವಂತೆ ರಾಜ್ಯಪಾಲರು ಸಿದ್ದರಾಮಯ್ಯನವರಿಗೆ ನೋಟಿಸ್ ನೀಡಲಾಗಿತ್ತು. ಈ ಹಿನ್ನೆಲೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ರವರ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಸಿ ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳಲಾಯಿತು.
ಮೂಡ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರ ಕಚೇರಿಯಿಂದ ಮುಖ್ಯಮಂತ್ರಿಗಳಿಗೆ ಸೋ ಕೇಸ್ ನೋಟಿಸ್ ಜಾರಿಯಾದ ಹಿನ್ನೆಲೆ ರಾಜ್ಯಪಾಲರನ್ನು ನೋಟಿಸ್ ವಾಪಸ್ ಪಡೆಯುವಂತೆ ಒತ್ತಾಯಿಸಿ ಸಚಿವ ಸಂಪುಟದಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.
ಸಿಎಂ ಸಿದ್ದರಾಮಯ್ಯ ಅವರಿಗೆ ನೊಟೀಸ್ ನಲ್ಲಿ ಬಳಸಿದ ಪದ ಮತ್ತು ಒಕ್ಕಣಿಕೆಗೆ ಆಕ್ಷೇಪ ವ್ಯಕ್ತಪಡಿಸಲಾಗಿದೆ. ರಾಜ್ಯಪಾಲರ ಸ್ಥಾನ ರಾಜಕೀಯ ದುರುಪಯೋಗದ ಹಾದಿಯಲ್ಲಿ ಸಾಗಿತ್ತಿದೆ ಎಂಬ ಬಗ್ಗೆ ಅನುಮಾನ ಮೂಡಿಬಂದಿದೆ ಎಂದು ಸಚಿವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿಯೂ ಚರ್ಚೆ ಮಾಡಲಾಗಿದ್ದು, ಪದ ಮತ್ತು ಒಕ್ಕಣಿಕೆ ಸಹಿತ ನೊಟೀಸ್ ವಾಪಸ್ ಪಡೆಯಲು ಸಂಪುಟ ನಿರ್ಣಯ ಕೈಗೊಳ್ಳಲಾಗಿದೆ. ಒಂದು ವೇಳೆ ನೊಟೀಸ್ ವಾಪಸ್ ಪಡೆಯದಿದ್ದರೆ ಕಾನೂನು ಹೋರಾಟ ನಡೆಸಲು ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ ಎಂಬ ಮಾಹಿತಿ ತಿಳಿದುಬಂದಿದೆ.