ಈ ಬಾರಿಯ ಮುಂಗಾರು ಮಳೆಯು ನಿಧಾನವಾಗಿ ತನ್ನ ಪ್ರಬಲವನ್ನು ತೋರಿಸುತ್ತಿದೆ. ಈವರೆಗೆ ಸ್ವಲ್ಪ ಮಟ್ಟದಲ್ಲಿ ತೆಗೆದ ಮಳೆಯಲು ಕಳೆದ ಎರಡು ದಿನಗಳಿಂದ ರಾಜ್ಯದಲ್ಲಿ ಬಹುತೇಕ ಕಡೆ ಬಿಡಿಸಿಕೊಂಡಿದೆ.
ಮುಂಗಾರು ಮಳೆಯು ಹೆಚ್ಚದ ಕಾರಣ ರಾಜ್ಯದ ಕರವಾಳಿ ಪ್ರದೇಶದ ಜಿಲ್ಲೆಗಳಗೆ ರಡ್ ಅಲರ್ಟ್ ಘೋಸಿಸಲಾಗಿದೆ. ಕಳೆದ ಎರಡು ದಿನಗಳಿಂದ ಅತಿ ಹೆಚ್ಚು ಸುರಿಯುತ್ತಿರುವ ಮಳೆಯಿಂದ ಕೊಡಗು, ಚಿಕ್ಕಮಗಳೂರು, ಶಿವಮೊಗ್ಗಕ್ಕೆ ಆರೆಂಜ್ ಅಲರ್ಟ್ ಘೋಸಿಸಲಾಗಿದೆ. ಇನ್ನೂ ಬೆಳಗಾವಿ, ಧಾರವಾಡ, ಹಾವೇರಿ, ಹಾಸನ, ಮೈಸೂರು ಜಿಲ್ಲೆಗಳಗೆ ಯೆಲ್ಲೋ ಅಲರ್ಟ್ ಘೋಸಿಸಲಾಗಿದೆ.
ಕೊಡಗಿನ ಭಾಗಮಂಡಲದ ವ್ಯಾಪಯಲ್ಲಿ ಹೆಚ್ಚು ಮಳೆಯಾದ ಕಾರಣ ತ್ರಿವೇಣಿ ಸಂಗಮವು ಭರ್ತಿಯಾಗಿದೆ.
ಇನ್ನೂ ರಾಜಧಾನಿ ಬೆಂಗಳೂರಿನಲ್ಲಿ ಬಿಡುಗು ಕೊಟ್ಟು ಮಳೆರಾಯ ಅಬ್ಬರಿಸುತ್ತಿದ್ದಾನೆ. ಹಾಗೆಯೇ ಇಂದು ಸಹ ಬೆಳಗ್ಗೆಯಿಂದ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ವೇಳೆಗೆ ನಗರದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ಈಗಾಗಲೇ ಚಿಕ್ಕಮಗಳೂರು, ಕೊಡಗು, ಚಾಮರಾಜನಗರ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದ್ದರೆ, ಇನ್ನೂ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುತ್ತಿದೆ. ಹಾಗೆಯೇ ಇಂದು ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆರಾಯ ಆರ್ಭಟ ಶುರು ಮಾಡುವ ಸಾಧ್ಯತೆಯಿದ್ದು, ಅದರಲ್ಲೂ ಕರಾವಾಳಿ ಭಾಗದಲ್ಲಿ ಮಳೆಯ ಪ್ರಮಾಣ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆಯು ತಿಳಿಸಿದೆ.
ಗುಡುಗು ಸಹಿತ ಭಾರಿ ಮಳೆಯೊಂದಿಗೆ ಗಂಟೆಗೆ 45-55 ಕಿಲೋ ಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಈಗಾಗಲೇ ಮಳೆರಾಯನ ಹಲವೆಡೆ ಅವಾಂತರಗಳನ್ನೇ ಸೃಷ್ಟಿಸಿದ್ದಾನೆ. ಹಾಗೆಯೇ ಮುಂದಿನ ಮೂರು ದಿನಗಳ ಕಾಲ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆಯಿಂದ ಮುನ್ಸೂಚನೆ ಇದೆ.