ರೇಣುಕಾ ಸ್ವಾಮಿ ಕೊಲೆ ಪ್ರಕರಣ; 30ಕ್ಕೂ ಹೆಚ್ಚು ಪ್ರತ್ಯಕ್ಷ ಪರೋಕ್ಷ ಸಾಕ್ಷಿಗಳ ಚಾರ್ಜ್ ಶೀಟ್ ಸಲ್ಲಿಕೆಗೆ ಸಿದ್ಧತೆ

By Aishwarya

Published On:

Follow Us

ನಟ ದರ್ಶನ್ ಮತ್ತು ಸಹಚರದಿಂದ ನಡೆದ ರೇಣುಕಾ ಸ್ವಾಮಿ ಕೊಲೆಯ ಪ್ರಕರಣ(Renuka swamy murder)ದ ತನಿಖೆಯು ತೀವ್ರವಾಗಿ ನಡೆಯುತ್ತಿದೆ. ಕೊಲೆ ಸಂಬಂಧ ಪೊಲೀಸರು ಹಲವು ಆಯಾಮಗಳಲ್ಲಿ ತನಿಖೆ ನಡೆಸಿ ಶೀಘ್ರದಲ್ಲಿಯೇ ಚಾರ್ಜ್ ಶೀಟ್ ಸಲ್ಲಿಕೆಗೆ ಅಂತಿಮ ಹಂತದ ತಯಾರಿಗಳನ್ನು ಪೊಲೀಸರು ನಡೆಸುತ್ತಿದ್ದಾರೆ.

ಸದ್ಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರುವ ನಟ ದರ್ಶನ್ & ಗ್ಯಾಂಗ್ ಜೈಲು ಸೇರಿ ತಿಂಗಳ ಮೇಲಾಗಿದೆ. ಸದ್ಯ ಎಲ್ಲರೂ ನ್ಯಾಯಾಂಗ ಬಂಧನದಲ್ಲಿ ಇದ್ದಾರೆ. ಆದರೆ ಇಂದು ದರ್ಶನ್ ಹಾಗೂ ಅವರ ಗ್ಯಾಂಗ್​ನ 14 ದಿನಗಳ ನ್ಯಾಯಾಂಗ ಬಂಧನದ ಅವಧಿ ಪೂರ್ಣಗೊಳ್ಳಲಿದೆ. ಅವರನ್ನು ಪೊಲೀಸರು ಮತ್ತೆ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ.

ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆಯ ಪ್ರಕರಣದ ತನಿಖೆಯನ್ನು ಕಾಮಾಕ್ಷಿಪಾಳ್ಯದ ಪೊಲೀಸರು ಮತ್ತಷ್ಟು ತೀವ್ರಗೊಳಿಸಿದ್ದು, ನಟ ದರ್ಶನ್ ಮತ್ತು ಸಹಚರರಿಗೆ ಅಸಲಿ ಅಗ್ನಪರೀಕ್ಷೆ ಈಗ ಶುರುವಾಗಿದೆ. ರೇಣುಕಾಸ್ವಾಮಿ ಕೊಲೆಯಾಗಿ 37 ದಿನಗಳು ಕಳೆದಿದೆ ಇದುವರೆಗೂ ಪೊಲೀಸರು ನಟ ದರ್ಶನ್ ಮತ್ತು ಪವಿತ್ರ ಗೌಡ‌ ಸೇರಿ ಹದಿನೇಳು ಆರೋಪಿಗಳನ್ನು ಬಂಧಿಸಿ ವಿಚಾರಣೆಗೆ ಜೈಲಿನಲ್ಲಿ ಇರಿಸಲಾಗಿದೆ. ಸದ್ಯ ಪ್ರಕರಣಕ್ಕೆ ಬೇಕಾದ ಪ್ರತ್ಯಕ್ಷ ಹಾಗೂ ಪರೋಕ್ಷ ಸಾಕ್ಷಿಗಳನ್ನು ದಾಖಲಿಸಿದ್ದು, ಈಗಾಗಲೇ ಕೊಲೆಯ ಬಗ್ಗೆ 30ಕ್ಕೂ ಹೆಚ್ಚು ಮಂದಿ ಹೇಳಿಕೆ ಪಡೆದಿದ್ದಾರೆ. 33 ಸಿಸಿಟಿ ದೃಶ್ಯಗಳು, 180ಕ್ಕೂ ಹೆಚ್ಚು ಸಾಕ್ಷಿಗಳನ್ನು ಕಲೆ ಹಾಕಿ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆಗೆ ಮುಂದಾಗಿದ್ದಾರೆ.

About the Author

ನಮಸ್ತೆ, ಐಶ್ವರ್ಯ ಚಟ್ನಹಳ್ಳಿ, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಎಂ.ಎ ಪದವಿ. ಪ್ರಸ್ತುತ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಆಪ್ರೆಂಟಿಸ್ ಆಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಜೊತೆಜೊತೆಗೆ khnewstimes.com ನಲ್ಲಿ ಕಂಟೆಂಟ್ ರೈಟರ್ ಆಗಿ ಕೆಲಸ ಮಾಡುತಿದ್ದೇನೆ.

For Feedback - feedback@khnewstimes.com

Leave a Comment

Follow