Darshan: ಚಿತ್ರದುರ್ಗದ ರೇಣುಕಾ ಸ್ವಾಮಿ ಪ್ರಕರಣದಲ್ಲಿ ಸಿಲುಕಿಕೊಂಡಿರುವ ನಟ ದರ್ಶನ್ ಮತ್ತು ಗ್ಯಾಂಗ್ ಗೆ ನ್ಯಾಯಾಲಯವು 12 ದಿನಗಳ ನ್ಯಾಯಾಂಗ ಬಂಧನವನ್ನು ವಿಧಿಸಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೂ ಪೊಲೀಸ್ ಕಸ್ಟಡಿಯಲ್ಲಿ ದರ್ಶನ್, ವಿನಯ್, ಪ್ರದೋಶ್ ಹಾಗೂ ಧನರಾಜ್ ಇದ್ದರು. ಈಗ ಈ ನಾಲ್ವರಿಗೂ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಜುಲೈ 4ರವರೆಗೂ ನಾಲ್ವರಿಗೂ ಪರಪ್ಪನ ಅಗ್ರಹಾರ ಜೇಲಿನಲ್ಲಿ ನ್ಯಾಯಾಂಗ ಬಂಧನಕ್ಕೆ ಸೂಚಿಸಲಾಗಿದೆ.
ಗೆಳತಿ ಪವಿತ್ರ ಗೌಡಗೆ ಅಶ್ಲೀಲ ಮೆಸೇಜ್ ಕಳುಹಿಸಿದ್ದಾರೆ ರೇಣುಕಾ ಸ್ವಾಮಿಯನ್ನು ತೀವ್ರವಾಗಿ ಹಲ್ಲೆ ನಡೆಸಿ ಕೊಲೆ ಮಾಡಿರುವ ಆರೋಪದ ಅಡಿಯಲ್ಲಿ ದರ್ಶನ್ ಮತ್ತು ಗ್ಯಾಂಗ್‌ಗೆ ತೀವ್ರ ವಿಚಾರಣೆ ನಡೆಸಿ ಇದೀಗ ಪೊಲೀಸ್ ಕಸ್ಟಡೆಯಿಂದ ನ್ಯಾಯಾಂಗ ಬಂಧನಕ್ಕೆ 24ನೇ ಎಸಿಎಂಎಂ ನ್ಯಾಯಾಲಯವು ಆದೇಶಿಸಿದೆ.
ನ್ಯಾಯಾಲಯದ ಮುಂದೆ ಹಾಜರುಪಡಿಸಿ ಗುರುವಾರ ದರ್ಶನ್ ಸೇರಿದಂತೆ ನಾಲ್ವರನ್ನು ಹಾಜರುಪಡಿಸಿ ಕಸ್ಟಡಿಗೆ ಪಡೆದಿದ್ದ ಪೊಲೀಸರು. ಈ ಅವಧಿ ಮುಕ್ತಾಯವಾದ ಹಿನ್ನೆಲೆ ಅವರನ್ನು ಮತ್ತೆ ನ್ಯಾಯಾಲಯಕ್ಕೆ ಹಾಜಾರುಪಡಿಸಲಾಗಿತ್ತು.ಈಗಾಗಲೇ ಇದೇ ಪ್ರಕರಣದಲ್ಲಿ ಬಂಧಿತರಾಗಿದ್ದ ದರ್ಶನ್ ಗೆಳತಿ ಪವಿತ್ರಾಗೌಡ ಸೇರಿದಂತೆ 13 ಆರೋಪಿಗಳು ಸೆರೆಮನೆ ವಾಸ ಶುರುವಾಗಿದೆ. ಹೀಗಾಗಿ ಬಾಕಿ ಉಳಿದಿರುವ ದರ್ಶನ್ ಸೇರಿ ನಾಲ್ವರು ಆರೋಪಿಗಳನ್ನು ಮೂರು ದಿನಗಳ ಕಾಲ ವಿಚಾರಣೆ ನಡೆಸಿ ಇದೀಗ ನ್ಯಾಯಕ್ಕೆ ಒಪ್ಪಿಸಲಾಗಿತ್ತು.
ನಟ ದರ್ಶನ್ ಮತ್ತು ಉಳಿದ ನಾಲ್ಕು ಆರೋಪಿಗಳನ್ನು ನ್ಯಾಯಾಧೀಶರ ಮುಂದೆ ಕರೆಸಲಾಗಿತ್ತು ವಾದ ಮತ್ತು ಪ್ರತಿವಾದಗಳನ್ನು ಆಲಿಸಿದ ನ್ಯಾಯಾಧೀಶರು ಆರೋಪಿಗಳನ್ನು ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನಕ್ಕೆ ಸೂಚಿಸಿದರು. 2011ರಲ್ಲಿ ಪತ್ನಿ ವಿಜಯಲಕ್ಷ್ಮಿ ಮೇಲೆ ಹಲ್ಲೆ ನಡೆಸಿ ಜೈಲುವಾಸ ಅನುಭವಿಸಿದ್ದ ದರ್ಶನಗೆ 13 ವರ್ಷಗಳ ಬಳಿಕ ಮತ್ತೆ ಪರಪ್ಪನ ಅಗ್ರಹಾರ ಜೈಲುವಾಸ ಅನುಭವಿಸಲಿದ್ದಾರೆ.
ಈ ಪ್ರಕರಣದಲ್ಲಿ ತೀವ್ರವಾಗಿ ತನಿಖೆ ನಡೆಸುತ್ತಿರುವ ಪೊಲೀಸ ಅಧಿಕಾರಿಗಳು ಎಲ್ಲ ಸಾಕ್ಷಿಗಳನ್ನು ಕಲೆ ಹಾಕುವಲ್ಲಿ ಯಶಸ್ವಿಯಾಗಿದ್ದಾರೆ. ನಟ ದರ್ಶನ್ ತಾವು ಮಾಡಿರುವ ಆರೋಪವನ್ನು ಮುಚ್ಚಿ ಹಾಕುವ ನಿಟ್ಟಿನಲ್ಲಿ ಅನೇಕರಿಗೆ ಹಣವನ್ನು ನೀಡಿದ್ದರೂ ಎಂಬುದು ಕೂಡ ಬೆಳಕಿಗೆ ಬಂದಿದೆ.