Siddharth Mallya: ಖ್ಯಾತ ಉದ್ಯಮಿ ವಿಜಯ್ ಮಲ್ಯ ಅವರ ಪುತ್ರ ಸಿದ್ಧಾರ್ಥ್ ಮಲ್ಯ ತಮ್ಮ ಬಾಲ್ಯದ ಗೆಳತಿ ಜೊತೆಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
ಈ ಜೋಡಿಯು ಲಂಡನ್ ನಲ್ಲಿ ಅಪ್ತರ ಸಮ್ಮುಖದಲ್ಲಿ ಹಸೆಮಣೆ ಏರಿದ್ದಾರೆ. ತಮ್ಮ ಬಾಲ್ಯದ ಗೆಳತಿ ಜಾಸ್ಮಿನ್ ಗೆ 2023ರಲ್ಲಿ ತಮ್ಮ ಪ್ರೀತಿಯ ಬಗ್ಗೆ ತಿಳಿಸಿದ್ದರು ಇದಕ್ಕೆ ಗ್ರೀನ್ ಸಿಗ್ನಲ್ ನೀಡಿದ್ದ ಜಾಸ್ಮಿನ್ ಕೆಳೆದ ವರ್ಷ ನಿಶ್ಚಿತಾರ್ಥ ಮಾಡಿಕೊಂಡಿದ್ದರು.
ವಿವಾಹದ ಕುರಿತು ಕೆಲವು ಪೋಟೋಗಳನ್ನು ತಮ್ಮ ಸಮಾಜಿಕ ಜಾಲತಾಣದಲ್ಲಿ ದಂಪತಿಗಳಿಬ್ಬರು ಹಂಚಿಕೊಂಡಿದ್ದಾರೆ.ಮಾಡಲ್ ಹಾಗೂ ನಟರಾಗಿರುವ ಸಿದ್ದಾಥ್೯ ಮಲ್ಯ, ಕ್ಯಾಲಿಫೋರ್ನಿಯಾದಲ್ಲಿ ವಾಸವಿದ್ದಾರೆ.
ನಟಿ ದೀಪಿಕಾ ಜೊತೆ ಪ್ರೀತಿಯಲ್ಲಿ ಬಿದ್ದಿದ್ದ ಸಿದ್ಧಾರ್ಥ್
ಕೆಲವು ವರ್ಷಗಳ ಹಿಂದೆ ಬಾಲಿವುಡ್ ನಟಿ ಕನ್ನಡತಿ ದೀಪಿಕಾ ಪಡುಕೋಣೆ ಮತ್ತು ಸಿದ್ಧಾರ್ಥ್ ಮಲ್ಯ ಡೇಟಿಂಗ್ ನಡೆಸುತ್ತಿದ್ದರು. ಇವರು ಐಪಿಎಲ್ ಪಂದ್ಯಗಳಿಗೆ ಜತೆಯಾಗಿ ತೆರಳುತ್ತಿದ್ದರು. ಒಮ್ಮ ಇಬ್ಬರು ಪಂದ್ಯ ವೀಕ್ಷಿಸುತ್ತಿರುವಾಗಲೇ ಪರಸ್ಪರ ಚುಂಬಿಸಿ ಸದ್ದು ಮಾಡಿದ್ದರು. ಆರಂಭದಲ್ಲಿ ದೀಪಿಕಾ ಕಿಂಗ್ ಫಿಷರ್ ಕ್ಯಾಲಂಡರ್‌ಗೆ ಮಾಡೆಲ್ ಆಗಿದ್ದರು. ಆ ವೇಳೆ ಸಿದ್ಧಾರ್ಥ್‌ನ ಪರಿಚಯವಾಗಿತ್ತು. ಬಳಿಕ ಇಬ್ಬರು ಜತೆಗೆ ಹಲವು ಕಡೆ ಸುತ್ತಾಡುತ್ತಾ ಗಾಸಿಪ್‌ಗೆ ಕಾರಣವಾಗಿದ್ದರು. ಕಾರಣಾಂತರಗಳಿಂದ ಈ ಜೋಡಿ ಬೇರ್ಪಟ್ಟಿತ್ತು. ಆದರೆ ಇದೀಗ ಬಾಲ್ಯದ ಗೆಳತಿ ಜಾಸ್ಮಿನ್ ಜೊತೆ ಕ್ರಿಶ್ಚಿಯನ್ ಸಂಪ್ರದಾಯದಂತೆ ವಿವಾಹವಾಗಿದ್ದು ಮಲ್ಯ ಮನೆಯಲ್ಲಿ ಸಂಭ್ರಮ ಮನೆ ಮಾಡಿದೆ.