ದೇಶದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದ್ದ NEET-UG 2024 ಪರೀಕ್ಷೆಯ ಫಲಿತಾಂಶವನ್ನು ಜುಲೈ 20 ಶನಿವಾರ ಮಧ್ಯಾಹ್ನ 12 ಗಂಟೆ ಒಳಗೆ ವೆಬ್ ಸೈಟಿನಲ್ಲಿ ಪ್ರಕಟಿಸುವಂತೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಗೆ (NTA) ಸುಪ್ರೀಂ ಕೋರ್ಟ್ ಆದೇಶ ನೀಡಿದೆ.
ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ನೇತೃತ್ವದ ತ್ರಿಸದಸ್ಯ ಪೀಠ ಈ ಆದೇಶವನ್ನು ನೀಡಿದೆ. ಯಾವುದೇ ಕಾರಣಕ್ಕೂ ಅಭ್ಯರ್ಥಿಗಳ ಗುರುತನ್ನು ಬಹಿರಂಗಪಡಿಸದೇ ನಗರವಾರು ಮತ್ತು ಕೇಂದ್ರವಾರು ಫಲಿತಾಂಶ ಪ್ರಕಟಿಸುವಂತೆ NTA ಆದೇಶಿಸಿದೆ.
ಪ್ರಶ್ನೆಪತ್ರಿಕೆ ಕೋರಿಕೆ ಹಿನ್ನೆಲೆ ನ್ಯಾಯಾಲಯಕ್ಕೆ ಸಲ್ಲಿಸಿದ 40 ಅರ್ಜಿಗಳ ವಿಚಾರಣೆಯನ್ನು ನಡೆಸಿ ತೀರ್ಪು ನೀಡಲಾಗಿದೆ. ನೀಟ್-ಯುಜಿ 20204 ಪರೀಕ್ಷೆಯಲ್ಲಿ ದೊಡ್ಡ ಪ್ರಮಾಣದಲ್ಲಿ ಅಕ್ರಮ ನಡೆದು ವೈದ್ಯಕೀಯ ಪ್ರವೇಶ ಪರೀಕ್ಷೆಯ ಪಾವಿತ್ರತೆಗೆ ದಕ್ಕೆಯಾಗಿದ್ದರೆ ಮಾತ್ರ ಮರು ಪರೀಕ್ಷೆ ಮರು ಪರೀಕ್ಷೆ ನಡೆಸಬಹುದು ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ.
ದೇಶಾದ್ಯಂತ 571 ನಗರಗಳಲ್ಲಿ ಹಾಗೂ ಹೊರಗಿನ 14 ನಗರಗಳು ಸೇರಿದಂತೆ 4750 ವಿವಿಧ ಕೇಂದ್ರಗಳಲ್ಲಿ 2024ರ ಮೇ 5ರಂದು ನೀಟ್ ಯುಜಿ ಪರೀಕ್ಷೆಯನ್ನು ನಡೆಸಲಾಗಿತ್ತು. ನೀಟ್ ಪರೀಕ್ಷೆಯಲ್ಲಿ ರ‍್ಯಾಂಕ್ ಪಡೆದ 67 ವಿದ್ಯಾರ್ಥಿಗಳಲ್ಲಿ 44 ವಿದ್ಯಾರ್ಥಿಗಳು ಗ್ರೇಸ್ ಮಾರ್ಕ್ಸ್ ಆಧಾರದ ಮೇಲೆ ಟಾಪರ್‌ಗಳಾಗಿದ್ದರು. ಇನ್ನು, ಹರಿಯಾಣದಲ್ಲಿ ಒಂದೇ ಕೇಂದ್ರದಲ್ಲಿ ಪರೀಕ್ಷೆ ಬರೆದ ಆರು ವಿದ್ಯಾರ್ಥಿಗಳು ಜಂಟಿಯಾಗಿ ಟಾಪ್ ಸ್ಥಾನ ಪಡೆದಿದ್ದಾರೆ. ಇದರಿಂದಾಗಿ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ, ಪ್ರಶ್ನೆಪತ್ರಿಕೆ ಸೋರಿಕೆ ಮಾಡಲಾಗಿದೆ ಎಂಬುದಾಗಿ ಕೆಲವು ಪೋಷಕರು ಆರೋಪ ಮಾಡಿದ್ದಾರೆ. ಗ್ರೇಸ್ ಮಾರ್ಕ್ಸ್ ಪಡೆದ 1,500 ವಿದ್ಯಾರ್ಥಿಗಳಿಗೆ ಮರು ಪರೀಕ್ಷೆಯನ್ನೂ ನಡೆಸಲಾಗಿದೆ.