ರೇಣುಕಾ ಸ್ವಾಮಿ ಕೊಲೆ ಪ್ರಕರಣ ಬೆಚ್ಚಿ ಬೀಳಿಸುವಂತಿದೆ ಮರಣೋತ್ತರ ಪರೀಕ್ಷೆಯ ವರದಿ

By Aishwarya

Published On:

Follow Us

Renuka Swamy murder: ನಟ ದರ್ಶನ್ ಗೆಳತಿ ಪವಿತ್ರ ಗೌಡಗೆ ಅಶ್ಲೀಲ ಮೆಸೇಜ್ ಮಾಡಿದ್ದ ಕಾರಣ ಚಿತ್ರದುರ್ಗದ ರೇಣುಕಾ ಸ್ವಾಮಿಯನ್ನು ಬೆಂಗಳೂರಿನಲ್ಲಿ ಚಿತ್ರ ಹಿಂಸೆ ಕೊಟ್ಟು ದರ್ಶನ್ ಮತ್ತು ಗ್ಯಾಂಗ್ ಕೊಲೆ ಮಾಡಲಾಗಿದೆ. ಸದ್ಯ ಈ ಪ್ರಕರಣ ರಾಜ್ಯ ವಿಡಿ ಸುದ್ದಿಯಾಗಿದ್ದು ಇದುವರೆಗೂ 19 ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಆರೋಪಿಗಳ ಜೊತೆ ಪೊಲೀಸರು ತೀವ್ರವಾಗಿ ಸತತವಾಗಿ ಸ್ಥಳ ಮಹಜರು ತನಿಖೆ ವಿಚಾರಣೆ ಮಾಡುತ್ತಿದ್ದಾರೆ. ಇದೀಗ, ಕೊಲೆಯಾದ ರೇಣುಕಾಸ್ವಾಮಿ ಅವರ ಮರಣೋತ್ತರ ಪರೀಕ್ಷಾ ವರದಿ ಬಹಿರಂಗಗೊಂಡಿದ್ದು, “ಭೀಕರ ಹಲ್ಲೆಯ ಪರಿಣಾಮ, ರೇಣುಕಾಸ್ವಾಮಿಯ ಸಾವು ಸಂಭವಿಸಿದೆ” ಎಂಬ ಅಂಶ ಮರಣೋತ್ತರ ಪರೀಕ್ಷಾ ವರದಿಯಲ್ಲಿ ಬಯಲಾಗಿದೆ.

ರೇಣುಕಾ ಸ್ವಾಮಿ ಮೃತ ದೇಹದ ಪರೀಕ್ಷೆ ನಡೆಸಿದ ವೈದ್ಯರು ಸಾವಿನ ಕಾರಣವನ್ನು ದೃಢೀಕರಿಸಿದ್ದಾರೆ. ಕರೆಂಟ್ ಶಾಕ್ ಹಾಗೂ ಬಲವಾದ ಹೊಡೆತಗಳಿಂದ ತೀವ್ರ ರಕ್ತಸ್ರಾವ ಆದ ಕಾರಣ ಸಾವು ಸಂಭವಿಸಿದೆ ಎಂದು ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ವೈದ್ಯರು ತಿಳಿಸಿದ್ದಾರೆ.

ರೇಣುಕಾ ಸ್ವಾಮಿಯ ದೇಹದ ಮೇಲೆ 15 ಗಾಯಗಳು ಕಂಡುಬಂದಿದ್ದು, ತಲೆ,ಎದೆ ಹೊಟ್ಟೆ‌ ಮತ್ತು ಇತರ ಭಾಗಗಳಲ್ಲಿ ಗಾಯದ ಗುರುತುಗಳು ಇವೆ. ಈ ಗುರುತುಗಳು ಮರದ ಕೋಲು ಚರ್ಮದ ಬೆಲ್ಟ್ ಹಾಗೂ ಹಗ್ಗದಿಂದ ಹೊಡೆದ ಗುರುತುಗಳಾಗಿವೆ ಎಂದು ಮರಣೋತ್ತರ ಪರೀಕ್ಷೆಯಲ್ಲಿ ಹೇಳಲಾಗಿದೆ.

ರೇಣುಕಾ ಸ್ವಾಮಿಗೆ ತೀವ್ರವಾಗಿ ಹಲ್ಲೆ ನಡೆಸಿ ಕೊಲೆ ಮಾಡಲಾಗಿದ್ದು, ಪಟ್ಟಣಗೆರೆ ಶೆಡ್ ನಲ್ಲಿ ಕೊಲೆಗೆ ಬಳಸಲಾಗಿದ್ದ ಎಲ್ಲಾ ವಸ್ತುಗಳನ್ನು ಪೊಲೀಸರು ಸ್ಥಳ ಮಹಜರು ನಡೆಸಿ ಈಗಾಗಲೇ ವಶಪಡಿಸಿಕೊಂಡಿದ್ದಾರೆ.

ನಾಳೆಗೆ (ಜೂನ್ 20ಕ್ಕೆ) ದರ್ಶನ್ ಹಾಗೂ ಇನ್ನಿತರ ಆರೋಪಿಗಳ ವಿಚಾರಣಾ ಅವಧಿಯು ಅಂತ್ಯವಾಗಲಿದ್ದು ಪೊಲೀಸರು ನಾಳೆ ನ್ಯಾಯಾಲಯಕ್ಕೆ ಒಪ್ಪಿಸಲು ಸಕಲ ಸಿದ್ಧತೆಗಳನ್ನು ನಡೆಸುತ್ತಿದ್ದಾರೆ.

ಒಟ್ಟಾರೆಯಾಗಿ ಈ ಪ್ರಕರಣದ ತನಿಖೆಯು ಅಂತಿಮಂತದಲ್ಲಿದ್ದು, ಆರೋಪಿಗಳಿಗೆ ಶಿಕ್ಷೆಯನ್ನು ಕುಡಿಸಲು ಪೊಲೀಸರು ತೀವ್ರ ವಿಚಾರಣೆಯನ್ನು ನಡೆಸುತ್ತಿದ್ದಾರೆ. ಇನ್ನು ಆರೋಪದ ಆರೋಪದ ಅಡಿಯಲ್ಲಿ ಅನೇಕರನ್ನು ವಿಚಾರಣೆ ನಡೆಸಲಾಗಿದೆ.

ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

About the Author

ನಮಸ್ತೆ, ಐಶ್ವರ್ಯ ಚಟ್ನಹಳ್ಳಿ, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಎಂ.ಎ ಪದವಿ. ಪ್ರಸ್ತುತ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಆಪ್ರೆಂಟಿಸ್ ಆಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಜೊತೆಜೊತೆಗೆ khnewstimes.com ನಲ್ಲಿ ಕಂಟೆಂಟ್ ರೈಟರ್ ಆಗಿ ಕೆಲಸ ಮಾಡುತಿದ್ದೇನೆ.

For Feedback - feedback@khnewstimes.com

Leave a Comment

Follow