ಶಾಲೆಗೆ ಬರುವಾಗ ಎರಡು ಜಡೆ ಹಾಕಿಕೊಂಡು ಬಂದಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ಶಿಕ್ಷಕರು ವಿದ್ಯಾರ್ಥಿನಿಯ ಕೂದಲು ಕತ್ತರಿಸಿರುವ ಘಟನೆ ನಡೆದಿದೆ.
ಚನ್ನಪಟ್ಟಣ ತಾಲೂಕಿನ ಅರಳಾಳುಸಂದ್ರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಈ ಘಟನೆ ನಡೆದಿದ್ದು, ಜಡೆ ಹಾಕಿ ಬಾರದ್ದಕ್ಕೆ ಎಂಟನೇ ತರಗತಿಯಲ್ಲಿ ಓದುತ್ತಿರುವ ಅಮೂಲ್ಯ, ಅನುಷಾ, ಭಾವನ ಕೂದಲು ಕಟ್ ಮಾಡಿಸಿಕೊಂಡು ಶಿಕ್ಷಕರಿಂದ ಶಿಕ್ಷೆ ಅನುಭವಿಸುತ್ತಿದ್ದಾರೆ.
ಶಿಕ್ಷಕಿ ಪವಿತ್ರ ವಿದ್ಯಾರ್ಥಿನಿಯರ ಜಡೆ ಕಟ್ ಮಾಡಿದ್ದಾರೆ ಎಂದು ಶಾಲೆಯ ಮುಖ್ಯ ಶಿಕ್ಷಕ ಶಿವಕುಮಾರ್ ಹೇಳಿದ್ದಾರೆ ಹೇಳಿದ್ದಾರೆ. ವಿದ್ಯಾರ್ಥಿನಿಯರು ಶಾಲೆಯಿಂದ ಮನೆಗೆ ಹೋದಾಗ ಪೋಷಕರು ಈ ಘಟನೆಯನ್ನು ಗಮನಿಸಿದ್ದಾರೆ. ವಿಷಯ ತಿಳಿದ ಪೋಷಕರು ಶಾಲೆಯ ಬಳಿ ಶಿಕ್ಷಕರ ವಿರುದ್ಧ ಗಲಾಟೆ ಮಾಡಿದ್ದಾರೆ. ಗಲಾಟೆ ವಿಕೋಪಕ್ಕೆ ತಿರುಗಿದ ಹಿನ್ನೆಲೆ ಚನ್ನಪಟ್ಟಣ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.