ನಾಳೆ ಕನ್ನಡಿಗರ ಉದ್ಯೋಗ ಮೀಸಲಾತಿಗಾಗಿ ವಿಧಾನಸೌಧಕ್ಕೆ ಮುತ್ತಿಗೆ ಹಾಕುತ್ತೇವೆ – ವಾಟಾಳ್ ನಾಗರಾಜ್

By Aishwarya

Published On:

Follow Us

ಕನ್ನಡಿಗರಿಗೆ ಖಾಸಗಿ ವಲಯದಲ್ಲೂ ಉದ್ಯೋಗ ಮೀಸಲಾತಿ ನಿರ್ಧಾರದಿಂದ ರಾಜ್ಯ ಸರ್ಕಾರ ಹಿಂದೆ ಸರಿದಂತೆ ಕಾಣುತ್ತಿದ್ದು. ರಾಜ್ಯ ಸರ್ಕಾರದ ಈ ನಿರ್ಧಾರದ ವಿರುದ್ಧ ವಾಟಾಳ್ ನಾಗರಾಜ್(Vatal Nagaraj) ಸಿಡಿದೆದ್ದಿದ್ದಾರೆ. ಈ ನೀತಿಯನ್ನು ಖಂಡಿಸಿ ನಾಳೆ ವಿಧಾನಸೌಧಕ್ಕೆ ಮುತ್ತಿಗೆ ಹಾಕುವ ಎಚ್ಚರಿಕೆಯನ್ನು ನೀಡಿದ್ದಾರೆ.

ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುವ ಕನ್ನಡ ಒಕ್ಕೂಟದ ವಾಟಾಳ್ ನಾಗರಾಜ್ ಅವರು, ಕನ್ನಡಿಗರಿಗೆ ಉದ್ಯೋಗ ಮಸೂದೆ ಮಂಡಿಸಲೇಬೇಕೆಂದು ನಾಳೆ (ಜುಲೈ 25) ವಿಧಾನಸೌಧಕ್ಕೆ ಮುತ್ತಿಗೆ ಹಾಕುತ್ತೇವೆ ಎಂದು ತಿಳಿಸಿದ್ದಾರೆ. ಕನ್ನಡ ಒಕ್ಕೂಟದ ಅಧ್ಯಕ್ಷರಾದಂತ ನನ್ನ ನೇತೃತ್ವದಲ್ಲಿ ನಾಳೆ ಮಧ್ಯಾಹ್ನ 12 ಗಂಟೆಗೆ ವಿಧಾನಸೌಧಕ್ಕೆ ಮುತ್ತಿಗೆ ಹಾಕಲಾಗುತ್ತದೆ. ಕನ್ನಡಿಗರಿಗೆ ಉದ್ಯೋಗ ಮೀಸಲಾತಿಗೆ ಆಗ್ರಹಿಸಿದಂತ ಈ ಪ್ರತಿಭಟನೆಯಲ್ಲಿ ಡಾ.ರಾಜ್ ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷರಾದಂತ ಸಾರಾ ಗೋವಿಂದು ಭಾಗಿಯಾಗಲಿದ್ದಾರೆ ಎಂದಿದ್ದಾರೆ.

ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ವಿಧೇಯಕವನ್ನು ಕೂಡಲೇ ವಿಧಾನಸಭೆಯಲ್ಲಿ ಮಂಡಿಸಬೇಕು. ಕನ್ನಡಿಗರ ಭವಿಷ್ಯದ ಪ್ರಶ್ನೆಯ ಮಸೂದೆಯನ್ನು ಮಂಡಿಸುವುದಾಗಿ ಭರವಸೆ ನೀಡಿ, ಮಸೂದೆಯನ್ನು ಹಿಂದಕ್ಕೆ ಪಡೆದಿರುವುದು ಸರಿಯಲ್ಲ. ಸದನ ಮುಗಿಯುವುದರೊಳಗಾಗಿ ಮಸೂದೆಯನ್ನು ಮಂಡಿಸಬೇಕು ಅಂತ ಒತ್ತಾಯಿಸಿದ್ದಾರೆ. ಕನ್ನಡ ಸೇನೆಯ ರಾಜ್ಯಾಧ್ಯಕ್ಷರಾದ ಕೆ ಆರ್ ಕುಮಾರ್, ಕರವೇ ರಾಜ್ಯಾಧ್ಯಕ್ಷ ಶಿವರಾಮೇಗೌಡ, ಪ್ರವೀಣ್ ಕುಮಾರ್ ಶೆಟ್ಟಿ, ಕನ್ನಡ ಜಾಗೃತಿ ವೇದಿಕೆಯ ರಾಜ್ಯಾಧ್ಯಕ್ಷ ಮಂಜುನಾಥ್ ದೇವ್, ಹೆಚ್.ವಿ ಗಿರೀಶ್ ಗೌಡ ಹಾಗೂ ಇತರೆ ಕನ್ನಡಪರ ಸಂಘಟನೆಯ ಮುಖಂಡರು ಭಾಗಿಯಾಗುವುದಾಗಿ ಮಾಹಿತಿ ನೀಡಿದ್ದಾರೆ.

About the Author

ನಮಸ್ತೆ, ಐಶ್ವರ್ಯ ಚಟ್ನಹಳ್ಳಿ, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಎಂ.ಎ ಪದವಿ. ಪ್ರಸ್ತುತ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಆಪ್ರೆಂಟಿಸ್ ಆಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಜೊತೆಜೊತೆಗೆ khnewstimes.com ನಲ್ಲಿ ಕಂಟೆಂಟ್ ರೈಟರ್ ಆಗಿ ಕೆಲಸ ಮಾಡುತಿದ್ದೇನೆ.

For Feedback - feedback@khnewstimes.com

Leave a Comment

Follow