TB Dam Gate Work: ತುಂಗಭದ್ರಾ ಜಲಾಶಯದ ಸ್ಟಾಪ್ ಗೇಟ್ ಅಳವಡಿಕೆ ಯಶಸ್ವಿ, ರೈತರಲ್ಲಿ ಸಂಭ್ರಮ

By Aishwarya

Published On:

Follow Us

ಸತತ ಎರಡು ದಿನಗಳ ಕಾರ್ಯಾಚರಣೆ ಬಳಿಕ ತುಂಗಾ ತುಂಗಭದ್ರಾ ಜಲಾಶಯದ ಸ್ಟಾಪ್ ಗೇಟ್ ಅಳವಡಿಕೆ ಕಾರ್ಯ ಯಶಸ್ವಿ ಆಗಿದೆ. ಈ ಕಾರಣ ಜಲಾಶಯದ ಅಧಿಕಾರಿಗಳು ಸಿಹಿ ಹಂಚಿ ಸಂಭ್ರಮಿಸಲಾಗಿದೆ.

TB Dam Gate Work

ಅಡ್ಡಿಯಾಗಿದ್ದ ಸ್ಕೈವಾಕ್​ ತೆರವು ಮಾಡಿದ ಬೆನ್ನಲ್ಲೇ ಮೊದಲ ಹಂತದ ಸ್ಟಾಪ್ ಗೇಟ್ ಅಳವಡಿಕೆ ಯಶಸ್ವಿಯಾಗಿದೆ. ಇದರಿಂದ ಸಚಿವ ಶಿವರಾಜ್ ತಂಗಡಗಿ ಹಾಗೂ ಶಾಸಕರು, ಸಂಸದರು ಸಿಬ್ಬಂದಿ, ಅಧಿಕಾರಿಗಳಿಗೆ ಸಿಹಿ ಹಂಚಿ ಸಂಭ್ರಮಿಸಿದ್ದಾರೆ.

ಸ್ಟಾಪ್​ ಲಾಗ್ ಗೇಟ್ ನ ಒಟ್ಟು ಐದು ಎಲಿಮೆಂಟ್ ಗಳ ಪೈಕಿ ಒಂದು ಎಲಿಮೆಂಟ್ ಅನ್ನು ಇಂದು ಅಳವಡಿಸಲಾಗಿದ್ದು, ಇನ್ನೂ 4 ಎಲಿಮೆಂಟ್ ಗಳನ್ನು ಅಳವಡಿಸಬೇಕಿದೆ. ನಾಳೆ ಬಾಕಿ ಇರುವ ಎಲಿಮೆಂಟ್ ಗಳನ್ನು ಅಳವಡಿಸಲಾಗುತ್ತದೆ ಎಂದು ಹೇಳಲಾಗಿದೆ. ಈ ಕಾರ್ಯಕ್ಕೆ ಅಡ್ಡಿಯಾಗಿದ್ದ ಸ್ಕೈವಾಕ್​ ತೆರವುಗೊಳಿಸಿ ಬಳಿಕ ಸ್ಟಾಪ್ ಲಾಗ್ ಗೇಟ್​ ಅನ್ನು ಯಶಸ್ವಿಯಾಗಿ ಅವಳಡಿಸಲಾಗಿದೆ.

ಈ ಕುರಿತು ಮಾತನಾಡಿದ ಸಚಿವ ಶಿವರಾಜ್ ತಂಗಡಗಿ ಮೊದಲ ‌ಎಲಿಮೆಂಟ್ ಅಳವಡಿಕೆ ‌ಸಕ್ಸಸ್ ಆಗಿದೆ. ಹರಿಯೋ ನೀರಲ್ಲಿ ಎಲಿಮೆಂಟ್ ಅಳವಡಿಸೋದು ದೊಡ್ಡ ಸವಾಲಾಗಿತ್ತು. ಆದ್ರೆ ಕಾರ್ಮಿಕರು ‌ಯಶಸ್ವಿಯಾಗಿ ಅಳವಡಿಸಲು ಯಶಸ್ವಿಯಾಗಿದ್ದಾರೆ. ಹೀಗಾಗಿ ಕನ್ನಯ್ಯ ನಾಯ್ಡು ಸೇರಿದಂತೆ ಎಲ್ಲಾ ಸಿಬ್ಬಂದಿ ಗೆ ಧನ್ಯವಾದಗಳು ಎಂದು ಸಂತಸ ವ್ಯಕ್ತಪಡಿಸಿದರು.

ಸಿಎಂ ಮತ್ತು ಡಿಸಿಎಂ ಕೂಡಾ ಕಾರ್ಯಾಚರಣೆಯನ್ನು ಲೈವ್ ಆಗಿ ನೋಡಿದ್ದಾರೆ. ನಾಳೆ( ಆಗಸ್ಟ್ 17) ಸಂಜೆವರಗೆ ಉಳಿದ ಎಲಿಮೆಂಟ್ ಗಳನ್ನು ಅಳವಡಿಸಲಾಗುತ್ತದೆ. ರೈತರ ಬೆಳೆಗೆ ನೀರು ಕೊಡುವ ಕೆಲಸ ಮಾಡುತ್ತೇವೆ ಎಂದು ಸಚಿವ ಶಿವರಾಜ್ ತಂಗಡಗಿ ಭರವಸೆ ನೀಡಿದರು.

ಸ್ಟಾಪ್​ ಲಾಗ್ ಗೇಟ್ ನ ಮೊದಲ ಎಲಿಮೆಂಟ್ ಅಳವಡಿಕೆ ಸಕ್ಸಸ್ ಆಗಿದ್ದರಿಂದ ಇದರಿಂದ ಅಧಿಕಾರಿಗಳು, ಸಿಬ್ಬಂದಿ, ಜನಪ್ರತಿನಿಧಿಗಳು ಹೆಚ್ಚಾಗಿ ರೈತರು ನಿಟ್ಟುಸಿರುಬಿಡುವಂತಾಗಿದೆ. ಮೊದಲ ಗೇಟ್ ಅಳವಡಿಕೆ ಯಶಸ್ವಿಗೆ ಶ್ರಮಿಸಿದ ತಜ್ಞರು, ಇಂಜಿನಿಯರ್ ಹಾಗೂ ಸಿಬ್ಬಂದಿಗೆ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಿಗೆ ಸಂಸದ ರಾಜಶೇಖರ್ ಹಿಟ್ನಾಳ ಅವರು ಸಿಹಿ ತಿನಿಸಿ ಸಂಭ್ರಮಿಸಿದರು.

About the Author

ನಮಸ್ತೆ, ಐಶ್ವರ್ಯ ಚಟ್ನಹಳ್ಳಿ, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಎಂ.ಎ ಪದವಿ. ಪ್ರಸ್ತುತ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಆಪ್ರೆಂಟಿಸ್ ಆಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಜೊತೆಜೊತೆಗೆ khnewstimes.com ನಲ್ಲಿ ಕಂಟೆಂಟ್ ರೈಟರ್ ಆಗಿ ಕೆಲಸ ಮಾಡುತಿದ್ದೇನೆ.

For Feedback - feedback@khnewstimes.com

Leave a Comment

Follow