Divya Vasantha Arrest: ವೈದ್ಯರು ಹಾಗೂ ಸ್ಪಾ ಮಾಲೀಕರನ್ನು ಬ್ಲಾಕ್ ಮೇಲ್ ಮಾಡಿ ಹಣ ವಸೂಲಿ ಮಾಡುತ್ತಿದ್ದ ಖಾಸಗಿ ಸುದ್ದಿ ವಾಹಿನಿಯ ನಿರೂಪಕಿ ದಿವ್ಯ ವಸಂತ ಅವರನ್ನು ಕೇರಳದಲ್ಲಿ ಪೊಲೀಸರು ಬಂಧಿಸಿದ್ದಾರೆ.
ರಾಜ್ ನ್ಯೂಸ್ ಸಿಇಒ ವೆಂಕಟೇಶ್ ಸೇರಿದಂತೆ ಮೂವರನ್ನು ಪೊಲೀಸರು ಈಗಾಗಲೇ ಬಂಧಿಸಿದ್ದು, ಪ್ರಕರಣ ಹೊರಗೆ ಬರುತ್ತಿದ್ದಂತೆ ತಲೆಮರೆಸಿಕೊಂಡಿದ್ದ ದಿವ್ಯಾ ವಸಂತ ಅವರನ್ನು ಕೇರಳದಲ್ಲಿ ಬಂಧಿಸಿದ್ದಾರೆ.
ಬೆಂಗಳೂರಿನ ಇಂದಿರಾನಗರದ ಸ್ಪಾ ಮಾಲೀಕರಿಗೆ ವೇಶ್ಯಾವಾಟಿಕೆ ನಡೆಸುತ್ತಿದ್ದೀರಾ ಇಂದು ಸುದ್ದಿ ಪ್ರಸಾರ ಮಾಡುವುದಾಗಿ ಬೆದರಿಕೆ ಹಾಕಿದ್ದ ವೆಂಕಟೇಶ್ ಹಾಗೂ ಸಹಚರರು 15 ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದರು. ಅಲ್ಲದೇ 5 ಲಕ್ಷ ರೂ. ಕೂಡಲೇ ನೀಡಬೇಕು ಎಂದು ಬೆದರಿಕೆ ಹಾಕಿದ್ದರು.
ಪ್ರಕರಣದಲ್ಲಿ ದಿವ್ಯಾ ವಸಂತ ಬಂಧನದೊಂದಿಗೆ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 4ಕ್ಕೇರಿದೆ. ದಿವ್ಯಾ ವಸಂತ ರಾಜ್ ನ್ಯೂಸ್ ನ ಮಾಜಿ ನಿರೂಪಕಿ ಆಗಿದ್ದು, ನಂತರ ಬಿಟಿವಿ ಯಲ್ಲಿ ನಿರೂಪಕಿಯಾಗಿ ಕೆಲಸ ಮಾಡುತ್ತಿದ್ದು, ತಮಿಳುನಾಡು, ಕೇರಳ ಸೇರಿದಂತೆ ನಾನಾ ಕಡೆ ಸಂಚರಿಸುತ್ತಾ ತಲೆಮರೆಸಿಕೊಂಡಿದ್ದ ದಿವ್ಯಾ ವಸಂತಳನ್ನು ಜೀವನ್ ಭೀಮಾನಗರದ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.