BS Yeddyurappa be arrested?: ಪೊಕ್ಸೋ ಪ್ರಕರಣ ಸಂಬಂಧ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್ ಯಡಿಯೂರಪ್ಪ ವಿರುದ್ಧ ಜಾಮೀನು ರಹಿತ ಬಂಧನ ವಾರೆಂಟ್ ಜಾರಿಯಾಗಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಯಡಿಯೂರಪ್ಪರವರನ್ನು ಯಾವುದೇ ಸಮಯದಲ್ಲಾದರೂ ಬಂಧನ ಮಾಡಲು ಸಿ ಐ ಡಿ ತಂಡ ಸಿದ್ಧತೆಗಳನ್ನು ನಡೆಸುತ್ತಿದೆ ಎಂದು ವರದಿಗಳು ಕೇಳಿಬಂದಿವೆ.
ಪ್ರಕರಣದಲ್ಲಿ ಹಿನ್ನೆಲೆ : ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಬೆಂಗಳೂರಿನ ಸದಾಶಿವನಗರದ ಪೊಲೀಸ್ ಠಾಣೆಯಲ್ಲಿ ಮಹಿಳೆಯೊಬ್ಬರು ಪ್ರಕರಣ ದಾಖಲಿಸಿದ್ದರು. ಇದನ್ನು ಸದ್ಯ ಕೇಂದ್ರ ತನಿಖಾ ದಳ (ಸಿಐಡಿ) ಪ್ರಕರಣವನ್ನು ವರ್ಗಾಯಿಸಲಾಗಿದ್ದು ಯಡಿಯೂರಪ್ಪ ಅವರಿಗೆ ನೋಟಿಸ್ ನೀಡಲಾಗಿದೆ.
ಈಗಾಗಲೇ ಬಿ.ಎಸ್ ಯಡಿಯೂರಪ್ಪ ಅವರನ್ನು ವಿಚಾರಣೆಗೆ ಹಾಜರಾಗುವಂತೆ ಸಿಐಡಿ ನೋಟಿಸ್ ನೀಡಿದ್ದು, ಇದರ ಮುಂದುವರಿದ ಭಾಗವಾಗಿ ನ್ಯಾಯಾಲಯವು ಜಾಮೀನು ರಹಿತ ವಾರೆಂಟ್ ಹೊರಡಿಸಿದೆ.
ಈ ಹಿಂದೆ ಮಹಿಳೆ ಒಬ್ಬರು ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಮಾರ್ಚ್ 14ರಂದು ದೂರು ನೀಡಲಾಗಿತ್ತು. ಅದಾದ ಬಳಿಕ ಪೊಲೀಸರ ಮುಂದೆ ಬಿಎಸ್ ಯಡಿಯೂರಪ್ಪ ಅವರು ವಿಚಾರಣೆಗೆ ಹಾಜರಾಗಿದ್ದರು. ಈ ಪ್ರಕರಣದ ಉನ್ನತ ತನಿಖೆಗಾಗಿ ಕರ್ನಾಟಕ ಸರ್ಕಾರವು ಸಿಐಡಿ ವಹಿಸಲಾಗಿತ್ತು. ಹೀಗಾಗಿ ತನಿಖೆ ನಡೆಸಿದ ಸಿಐಡಿ ತಂಡವು ವಾರೆಂಟ್ ನೀಡಿದ್ದು ಯಾವುದೇ ಕ್ಷಣದಲ್ಲಾದರೂ ಯಡಿಯೂರಪ್ಪ ಅವರನ್ನು ಬಂಧಿಸಲು ಸಿದ್ಧರಿದ್ದಾರೆ ಎಂದು ವರದಿಯಾಗಿದೆ.