ಲೈಂಗಿಕ ಪ್ರಕರಣದ ಆರೋಪಿಯಾಗಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಆದೇಶ ಹೊರಡಿಸಿದೆ.
ಇಂದು ಎಸ್ಐಟಿ ಕಸ್ಟಡಿ ಅಂತ್ಯಗೊಂಡ ಹಿನ್ನಲೆ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಈ ವೇಳೆ ವಿಚಾರಣೆ ನಡೆಸಿದ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯವು ಮತ್ತೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ.
ವಿಚಾರಣೆಯ ವೇಳೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ನ್ಯಾಯಾಧೀಶರ ಎದುರು ಅಳಲು ತೋಡಿಕೊಂಡಿದ್ದಾರೆ. ಎಸ್ಐಟಿ ಪೊಲೀಸರು ನನ್ನ ಬಗ್ಗೆ ಕಾಳಜಿ ವಹಿಸದೆ ನನ್ನ ಆರೋಗ್ಯದ ಬಗ್ಗೆ ನಿರ್ಲಕ್ಷ ವಹಿಸಿದ್ದಾರೆ ಎಂದ ಪ್ರಜ್ವಲ್ ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಆಗ ನ್ಯಾಯಾಧೀಶರು ವೈದ್ಯಕೀಯ ಪರೀಕ್ಷೆಯನ್ನು ಯಾಕೆ ಮಾಡಿಲ್ಲ ಎಂದು ಎಸ್ಐಟಿ ತಂಡಕ್ಕೆ ಪ್ರಶ್ನೆಸಿದರು. ವಾದ ಮತ್ತು ಪ್ರತಿವಾದಗಳನ್ನು ಆಲಿಸಿದ ನಂತರ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಸೂಚಿಸಲಾಗಿದೆ.
ಮತ್ತೆ ಮತ್ತೆ ಪರೀಕ್ಷೆ ಮಾಡಿಸಲು ಮುಜುಗರ ಆಗುತ್ತೆ
ನ್ಯಾಯಾಧೀಶರ ವಿಚಾರಣೆ ವೇಳೆಯಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ನಾನು ಈಗಾಗಲೇ ಎರಡು ಬಾರಿ ಮೆಡಿಕಲ್ ಟೆಸ್ಟ್ ಉಪಿ ಮಾಡಿಸಿಕೊಂಡಿದ್ದೇನೆ. ಈಗ ಎಸ್ಐಟಿ ಅಧಿಕಾರಿಗಳು ಮತ್ತೆ ಟೆಸ್ಟ್ ಮಾಡಿಸಲು ಹೇಳುತ್ತಿದ್ದಾರೆ, ಪದೇಪದೇ ಪುರುಷತ್ವ ಟೆಸ್ಟ್ ಮಾಡಿಸಲು ನನಗೆ ಮುಜುಗರವಾಗುತ್ತಿದೆ ಎಂದು ಮಾಜಿ ಸಂಸದ ಪ್ರಜ್ವಲ್ ರೇವಣ್ಣ ನ್ಯಾಯಾಧೀಶರ ಮುಂದೆ ತಮ್ಮ ಅಳಿಲು ತೋರಿಸಿಕೊಂಡರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಾಧೀಶರು ಅಗತ್ಯ ವೈದ್ಯಕೀಯ ಪರೀಕ್ಷೆಗಳನ್ನು ಮಾತ್ರ ಮಾಡಿಸುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದರು.
ಹಾಸನದಲ್ಲಿ ವೈರಲ್ ಆದ ಅಶ್ಲೀಲ ವಿಡಿಯೋ ಹಾಗೂ ಅತ್ಯಾಚಾರ ಆರೋಪದಲ್ಲಿ ಪ್ರಜ್ವಲ್ ರೇವಣ್ಣ ಜೈಲು ಪಾಲಾಗಿದ್ದಾರೆ. ಅತ್ಯಾಚಾರ ಆರೋಪ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಅವರ ನ್ಯಾಯಾಂಗ ಬಂಧನ ಅವಧಿ ಇಂದಿಗೆ ಅಂತ್ಯವಾಗಿದ ಕಾರಣ ವಿಚಾರಣೆಗೆ ಹಾಜರುಪಡಿಸಿಲಾಗಿತ್ತು.
ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ