ಮೂಡಗರಣ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಭಾರಿ ರಾಜಕೀಯ ತಿರುವು ಪಡೆದುಕೊಂಡಿದೆ. ಈ ಬಾರಿಯ ಸದನದಲ್ಲಿ ಆಡಳಿತ ಮತ್ತು ವಿರೋಧ ಪಕ್ಷಗಳಿಗೆ ವಾಕ್ಸಮರಕ್ಕೆ ಕಾರಣವಾಗಿತ್ತು. ವಿಧಾನಸಭಾ ಅಧಿವೇಶನ ಮುಗಿದ ಬಳಿಕ ಬಿಜೆಪಿ ಮತ್ತು ಜೆಡಿಎಸ್ ಸೋಮವಾರದಂದು ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ನಡೆಸಲು ತಯಾರಿ ಮಾಡುತ್ತಿದೆ. ಇದಕ್ಕೆ ಟಕ್ಕರ್ ಕೊಡಲು ಕಾಂಗ್ರೆಸ್ ಮೈಸೂರಿನಿಂದ ಬೆಂಗಳೂರಿಗೆ ಪಾದಯಾತ್ರೆ ನಡೆಸಲು ತೀರ್ಮಾನ ನಡೆಸಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಾಕ್ಸಮರಕ್ಕೆ ಮಾಡಾ ಪ್ರಕರಣವನ್ನು ಬಳಸಿಕೊಳ್ಳಲು ಬಿಜೆಪಿ ಜೆಡಿಎಸ್ ಮುಂದಾಗಿತ್ತು. ಆದರೆ ಇದಕ್ಕೆ ಕಾಂಗ್ರೆಸ್ ಆಸ್ಪದ ನೀಡದೆ, ನಿಳುವಳಿ ಸೂಚನೆಯನ್ನೇ ಮಂಡಿಸದ ರೀತಿಯಲ್ಲಿ ನಡೆದುಕೊಂಡಿದೆ. ಆದುದರಿಂದ ಬಿಜೆಪಿ ಮತ್ತು ಜೆಡಿಎಸ್ ಶಾಸಕರು ಕಳೆದ ಎರಡು ದಿನಗಳಿಂದ ವಿಧಾನಸೌಧದ ಬಾವಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ.
ಸಿಎಂ ಸಿದ್ದರಾಮಯ್ಯ ರಾಜಿನಾಮೆಗೆ ಆಗ್ರಹಿಸಿ ಮೈಸೂರಿನಿಂದ ಬೆಂಗಳೂರಿಗೆ ಬಿಜೆಪಿಗರು ಪಾದಯಾತ್ರೆ ನಡೆಸಲು ಬುಧುವಾರ ಸಭೆಯಲ್ಲಿ ಚರ್ಚೆ ನಡೆಸಿದರು. ಆದರೆ ಪಾದಯಾತ್ರೆ ದಿನಾಂಕವನ್ನು ಎಚ್.ಡಿ ಕುಮಾರಸ್ವಾಮಿ ಅವರನ್ನು ಕೇಳಿ ನಿರ್ಧರಿಸಲಾಗುತ್ತದೆ ಎನ್ನಲಾಗುತ್ತಿದೆ. ಇದೇ ವಿಚಾರವಾಗಿ ಜುಲೈ 28ರಂದು ಕೇಂದ್ರ ಸಚಿವರಾದ ಕುಮಾರಸ್ವಾಮಿ ಅವರನ್ನು ಬಿಜೆಪಿ ನಾಯಕರು ಭೇಟಿಯಾಗಲಿದ್ದಾರೆ.
ಇನ್ನೊಂದು ಕಡೆ ಬಿಜೆಪಿಗೆ ಟಕ್ಕರ್ ಕೊಡಲು ಕಾಂಗ್ರೆಸ್ ಕೂಡ ಸಿದ್ಧತೆ ನಡೆಸಲಾಗಿದ್ದು, ಬಿಜೆಪಿಯವರು ಬೆಂಗಳೂರಿನಿಂದ ಪಾದಯಾತ್ರೆ ಆರಂಭಿಸಿದ ದಿನವೇ ಮೈಸೂರು ಕಾಂಗ್ರೆಸ್ ವತಿಯಿಂದ ಮೈಸೂರು ಬೆಂಗಳೂರು ಪಾದಯಾತ್ರೆ ನಡೆಸಲು ತೀರ್ಮಾನಿಸಲಾಗಿದೆ. ಬಿಜೆಪಿ ಅವಧಿಯಲ್ಲಿ ನಡೆದ 23 ಹಗರಣಗಳ ತನಿಖೆ ನಡೆಸಿ ಒಂದು ತಿಂಗಳ ಒಳಗೆ ವರದಿ ನೀಡಬೇಕೆಂದು ಸರ್ಕಾರಕ್ಕೆ ಆಗ್ರಹಿಸಲಿದ್ದಾರೆ. ಈ ಪಾದಯಾತ್ರೆಯಲ್ಲಿ ಕಾಂಗ್ರೆಸ್ ನಾಯಕರು, ಪ್ರಗತಿಪರ ಸಂಘಟನೆಗಳು, ದಲಿತ ಸಂಘಟನೆಗಳು ಭಾಗವಹಿಸಲಿವೆ ಎಂದು ಮೈಸೂರಿನ ಎಂ.ಲಕ್ಷ್ಮಣ್ ಮಾಹಿತಿ ನೀಡಿದ್ದಾರೆ.