C. P. Yogeshwara: ಚನ್ನಪಟ್ಟಣ ಉಪಚುನಾವಣೆ; ಮೈತ್ರಿ ಅಭ್ಯರ್ಥಿಯಾಗಿ ಸಿ.ಪಿ ಯೋಗೇಶ್ವರ್ ಹೆಸರು ಫೈನಲ್..?

By Aishwarya

Published On:

Follow Us

C. P. Yogeshwara: ಕಳೆದ ಲೋಕಸಭಾ ಚುನಾವಣೆಯ ಅಂಗವಾಗಿ‌ ರಾಜ್ಯದ ‌ಮೂರು‌ ವಿಧಾನಸಭಾ ಕ್ಷೇತ್ರದ ಶಾಸರು ಸ್ಪರ್ಧೆ ಮಾಡಿದ್ದರು ಈ ಕಾರಣ ಮೂರು ಕ್ಷೇತ್ರಗಳಲ್ಲಿ ಉಪಚುನಾವಣೆ‌ ನಡೆಯಲಿದ್ದು, ಇದರಲ್ಲಿ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರವು ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಆಡಳಿತರೂಢ ಕಾಂಗ್ರೆಸ್ ಪಕ್ಷವು ಅಭ್ಯರ್ಥಿಯ ಹುಡುಕಾಟದಲ್ಲಿದ್ದರೆ, ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿಯಾಗಿ ಸಿ ಪಿ ಯೋಗೇಶ್ವರ್ ಅವರ ಹೆಸರು ಫೈನಲ್ ಆಗಿದೆ ಎಂದು ಸ್ವತಹ ಟಿಕೆಟ್ ಆಕಾಂಕ್ಷಿ ಯೋಗೇಶ್ವರ್ ರವರು ತಿಳಿಸಿದ್ದಾರೆ.

ರಾಮನಗರದಲ್ಲಿ ಸುದ್ದಿಗಾರರ ಜೊತೆ ಅವರು ಮಾತನಾಡಿ, “ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಕುಮಾರಸ್ವಾಮಿ ಅವರು ನನ್ನನ್ನೇ ನಿಲ್ಲುವಂತೆ ಹೇಳಿದ್ದಾರೆ. ಅದಕ್ಕೆ ಅಧಿಕೃತ ಅನುಮೋದನೆ ಅವರೇ ಕೊಡಬೇಕು. ಮೈತ್ರಿ ಪಕ್ಷದ ವರಿಷ್ಠರು ಅಧಿಕೃತ ಘೋಷಣೆ ಮಾಡಬೇಕು. ಹಾಗಾಗಿ ನೀವೇ ಬಂದು ಹೆಸರು ಘೋಷಣೆ ಮಾಡಿ ಎಂದು ಅವರನ್ನೇ ಕೇಳಿದ್ದೇನೆ. ಮೈತ್ರಿ ಪಕ್ಷದಿಂದ ನಾನೇ ಅಭ್ಯರ್ಥಿ ಎಂದು ಹೇಳಿದರು.

ನಂತರ ಮಾತನಾಡುತ್ತಾ “ಕಳೆದ ವಾರ ಡಿಸಿಎಂ ಡಿ ಕೆ ಶಿವಕುಮಾರ್‌ ಚನ್ನಪಟ್ಟಣದಲ್ಲಿ ನಡೆಸಿದ ಮೂರು ದಿನಗಳ ಜನಸ್ಪಂದನಾ ಕಾರ್ಯಕ್ರಮ ಜನಸ್ಪಂದನವಲ್ಲ, ಅದು ಸರ್ಕಾರಿ ಸಂತೆ, ಅಧಿಕಾರಿಗಳನ್ನು ಚನ್ನಪಟ್ಟಣಕ್ಕೆ ಕರೆತಂದು ಹೆದರಿಸಿ ಜನರಿಗೆ ಆಸೆ ತೋರಿಸುವ ಕೆಲಸ ನಡೆದಿದೆ. ಕಳೆದ ಒಂದು ಕಾಲು ವರ್ಷದ ಅವಧಿಯಲ್ಲಿ ಸರ್ಕಾರ ಸಾರ್ವಜನಿಕರಿಗೆ ಯಾವುದೇ ಕಾರ್ಯಕ್ರಮ ಹಮ್ಮಿಕೊಂಡಿಲ್ಲ ಎಂದು ಕಾಂಗ್ರೆಸ್ ವಿರುದ್ಧ ಟೀಕಿಸಿದರು.

ಸರ್ಕಾರ ಬಂದಾಗಿನಿಂದಲೂ ಚನ್ನಪಟ್ಟಣಕ್ಕೆ ಡಿ ಕೆ ಶಿವಕುಮಾರ್ ಬಂದಿರಲಿಲ್ಲ. ಈಗ ಚನ್ನಪಟ್ಟಣ ಖಾಲಿ ಇದೆ. ಬಂದಿದ್ದೇನೆ ಅಂತ ಸುಳ್ಳು ಹೇ‌ಳಿದ್ದಾರೆ. ಜನರಿಗೆ ಮನೆ ಕೊಡುವೆ, ಸೈಟ್ ಕೊಡುವೆ ಅಂತ ಸುಳ್ಳು ಆಶ್ವಾಸನೆ ಕೊಡ್ತಿದ್ದಾರೆ. ಟೌನ್ ವ್ಯಾಪ್ತಿ ಬಿಟ್ಟರೆ ಬಹುತೇಕ ತಾಲೂಕಿನ ಜನತೆಗೆ ಮನೆ ಸಮಸ್ಯೆ ಇಲ್ಲ, ಸರ್ಕಾರದ ನಿಯಮಗಳನ್ನ ಗಾಳಿಗೆ ತೂರಿ ಒನ್ ಮ್ಯಾನ್ ಶೋ ಮಾಡಿದ್ದಾರೆ. ಎಂಪಿಗೆ ಆಹ್ವಾನ ನೀಡಿಲ್ಲ, ನನಗೆ ಆಹ್ವಾನ ನೀಡಿಲ್ಲ. ಸರ್ಕಾರದ ಪ್ರೋಟೋಕಾಲ್ ಸರಿಯಾಗಿ ಫಾಲೋ ಮಾಡದೇ ಕಾರ್ಯಕ್ರಮ ಮಾಡಿದ್ದಾರೆ. ಇದು ಕೇವಲ ಚುನಾವಣಾ ತಂತ್ರ ಎಂದು ಹೇಳಿದರು.

About the Author

ನಮಸ್ತೆ, ಐಶ್ವರ್ಯ ಚಟ್ನಹಳ್ಳಿ, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಎಂ.ಎ ಪದವಿ. ಪ್ರಸ್ತುತ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಆಪ್ರೆಂಟಿಸ್ ಆಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಜೊತೆಜೊತೆಗೆ khnewstimes.com ನಲ್ಲಿ ಕಂಟೆಂಟ್ ರೈಟರ್ ಆಗಿ ಕೆಲಸ ಮಾಡುತಿದ್ದೇನೆ.

For Feedback - feedback@khnewstimes.com

Leave a Comment

Follow