ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ನಾಯಕರ ಭೇಟಿಗೆ ತೆರಳಲ್ಲಿದ್ದಾರೆ.
ರಾಜ್ಯ ಸಚಿವ ಸಂಪುಟ ಪುನರ್ ರಚನೆ ಹತ್ತಿರವಾಗುತ್ತಿದ್ದು, ಸಚಿವ ಸಂಪುಟವನ್ನು ಪುನರ್ ರಚಿಸುವ ಬಗ್ಗೆ ಚರ್ಚೆ ನಡೆಸಲು ಸಿಎಂ ಮತ್ತು ಡಿಸಿಎಂ ದೆಹಲಿಗೆ ತೆರಳಿದ್ದಾರೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿವೆ. ರಾಜ್ಯ ವಿಧಾನ ಮಂಡಲ ಅಧಿವೇಶನ ಮುಗಿಯುತಿದ್ದಂತೆ ರಾಜ್ಯ ಸಚಿವ ಸಂಪುಟ ಪುನರ್ ರಚನೆ ಚರ್ಚೆ ಮುನ್ನಲೆಗೆ ಬಂದಿದೆ. ಕಳೆದ ಲೋಕಸಭೆ ಚುನಾವಣೆಯ ನಂತರ ಸಚಿವ ಸಂಪುಟ ಪುನಾರಚನೆ ಆಗಬೇಕು ಎಂಬ ಮಾತುಗಳು ಕಾಂಗ್ರೆಸ್ ನಲ್ಲಿ ಪ್ರಬಲವಾಗಿ ಕೇಳಿ ಬಂದಿತ್ತು. ವಿಧಾನಸಭಾ ಅಧಿವೇಶನೆ ಮುಗಿಯುವರೆಗೂ ಈ ಚರ್ಚೆ ಬೇಡ ಎಂದು ಹೈಕಮಾಂಡ್ ಸೂಚನೆ ಮೇಲೆ ಕಾಂಗ್ರೆಸ್ ನಾಯಕರು ಈ ಚರ್ಚೆಯನ್ನು ತಣ್ಣಗಾಗಿಸಿದ್ದರು.
ಲೋಕಸಭೆ ಚುನಾವಣೆ ಫಲಿತಾಂಶದ ಬೆನ್ನಲ್ಲೇ ಕೆಲವು ಸಚಿವರ ತಲೆದಂಡವಾಗುವ ಸಾಧ್ಯತೆ ಇದೆ ಎನ್ನಲಾಗಿತ್ತು. ಆದರೆ, ನಂತರ ಅಷ್ಟೊಂದು ರಾಜಕೀಯ ಬೆಳವಣಿಗೆಗಳು ನಡೆದಿರಲಿಲ್ಲ. ಆದರೆ, ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣದಲ್ಲಿ ನಾಗೇಂದ್ರ ರಾಜೀನಾಮೆ ನೀಡಬೇಕಾಯಿತು. ಅದಾದ ನಂತರ ಮುಡಾ ಸೇರಿದಂತೆ ಸಾಲು ಹಗರಣಗಳ ಆರೋಪ ಕಾಂಗ್ರೆಸ್ ಸರ್ಕಾರದ ಮೇಲೆ ಕೇಳಿಬಂದಿರುವುದು ಹೈಕಮಾಂಡ್ ಚರ್ಚೆಗೆ ಕರೆಸಿಕೊಂಡಿದ್ದಾರೆ ಎನ್ನಲಾಗಿದೆ.