B. S. Yediyurappa: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ಕಿರುಕುಳ ನೀಡಿದ ಆರೋಪದಾ ಅಡಿಯಲ್ಲಿ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮತ್ತು ಇತರೆ ಮೂರು ಆರೋಪಿಗಳ ಮೇಲೆ ಪೋಕ್ಸೋ ಪ್ರಕರಣ ದಾಖಲಾಗಿದ್ದು, ಆರೋಪಿಗಳಿಗೆ ನಗರ ವಿಶೇಷ ನ್ಯಾಯಾಲಯ ಇದೀಗ ಸಮನ್ಸ್ ಜಾರಿ ಮಾಡಿದೆ.
ಈ ಪ್ರಕರಣದ ಕುರಿತು ನಗರದ 51ನೇ ಸಿವಿಲ್ ಮತ್ತು ಪೋಕ್ಸೋ ಪ್ರಕರಣಗಳ ವಿಚಾರಣೆ ನಡೆಸುವ ವಿಶೇಷ ನ್ಯಾಯಾಲಯ-1 ನ್ಯಾಯಾಧೀಶ ಎನ್.ಎಂ ರಮೇಶ್ ಸಮನ್ಸ್ ಜಾರಿಗೊಳಿಸಿ ಆರೋಪಿಗಳು ಇದೇ ಜುಲೈ 15ರಂದು ವಿಚಾರಣೆಗೆ ಹಾಜರಾಗುವಂತೆ ಆದೇಶ ನೀಡಿದರು.
ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡವು ಸಲ್ಲಿಸಿರುವ ಆರೋಪ ಪಟ್ಟಿಯಲ್ಲಿ ” ಯಡಿಯೂರಪ್ಪ ಅವರು ತಮ್ಮ ಧವಳಗಿರಿ ನಿವಾಸದಲ್ಲಿ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ” ಎಂಬ ಆರೋಪವನ್ನು ಮಾಡಲಾದ ಹಿನ್ನೆಲೆ ಈ ಪ್ರಕರಣದ ಕುರಿತು ವಿಶೇಷ ತನಿಖಾ ತಂಡವನ್ನು ಸರ್ಕಾರ ರಚಿಸಿತ್ತು. ಸುದೀರ್ಘ ತನಿಖೆ ನಡೆಸಿದ ಸಿಐಡಿ ಕಳೆದ ವಾರವಷ್ಟೇ 750 ಪುಟಗಳಷ್ಟು ದೋಷಾರೋಪಣೆ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿತು.
ಈ ಮುಂಚೆ ಈ ಪ್ರಕರಣದಲ್ಲಿ ಮೊದಲ ಬಾರಿ ವಿಚಾರಣೆಗೆ ಹಾಜರಾಗಿದ್ದ ಬಿಎಸ್ ವೈ ವಾಯ್ಸ್ ಸ್ಯಾಂಪಲ್ ಕೊಟ್ಟು ಹೋಗಿದ್ದ ಬಿಎಸ್ ಯಡಿಯೂರಪ್ಪ, ನಂತರ ಎರಡನೇ ಬಾರಿ ಹಾಜರಾಗಿದ್ದರು. ಬಿಎಸ್ ಯಡಿಯೂರಪ್ಪ ವಿರುದ್ಧ ಮಾರ್ಚ್ 14 ರಂದು ಸದಾಶಿವ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ನಂತರ ಹೈಕೋರ್ಟ್ ನಲ್ಲಿ ಇತ್ತೀಚೆಗೆ, ಬಿಎಸ್ ವೈ ಅವರನ್ನು ಬಂಧಿಸಬಾರದು ಎಂಬ ಆದೇಶ ಬಂದಿತ್ತು.