ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧರ ರಾಜ್ಯಪಾಲರು ಅಭಿಯೋಜನೆ(ಪ್ರಾಸಿಕ್ಯೂಷನ್) ಅನುಮತಿ ನೀಡಿರುವುದರಿಂದ ಕಾನೂನು ಹೋರಾಟಕ್ಕೆ ವೇದಿಕೆ ಸಜ್ಜಾಗಿದೆ. ರಾಜ್ಯಪಾಲರ ಥಾವರ್‌ಚಂದ್ ಗೆಹ್ಲೋಟ್ ಅವರ ತೀರ್ಮಾನವನ್ನು ಪ್ರಶ್ನಿಸಿ ಸಿದ್ದರಾಮಯ್ಯ ಅವರು ಸೋಮವಾರ ಹೈಕೋರ್ಟ್‌ನಲ್ಲಿ ಮೇಲನವಿ ಅರ್ಜಿ ಸಲ್ಲಿಸಲಿದೆ.
ಹೈಕೋರ್ಟ್‌ನಲ್ಲಿ ಸೋಮವಾರ ಸಿಎಂ ಪರವಾಗಿ ಸುಪ್ರೀಂಕೋರ್ಟ್‌ನ ಹಿರಿಯ ವಕೀಲರಾದ ಕಪೀಲ್ ಸಿಬಾಲ್ ಹಾಗೂ ಅಭಿಷೇಕ್ ಮನುಸಿಂಗ್ವಿ ವಾದ ಮಂಡಿಸಲಿದ್ದಾರೆ. ಮೇಲನವಿ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಬೇಕೇ? ಇಲ್ಲವೇ ಹೈಕೋರ್ಟ್‌ನಲ್ಲಿ ಸಲ್ಲಿಸಬೇಕೆ ಎಂಬ ಗೊಂದಲ ಮುಂದುವರೆದಿದೆ.ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲು ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಮತ್ತು ವಕೀಲರ ತಂಡ ಸಿದ್ದತೆಯನ್ನು ನಡೆಸಿದ್ದು, ಸೋಮವಾರ ಏಕಸದಸ್ಯ ಪೀಠಕ್ಕೆ ಮೇಲನವಿ ಸಲ್ಲಿಸಿ ರಾಜ್ಯಪಾಲರ ಆದೇಶಕ್ಕೆ ತಡೆಯಾಜ್ಞೆ ನೀಡಬೇಕು ಎಂದು ಮಧ್ಯಂತರ ಅರ್ಜಿಯಲ್ಲಿ ಮನವಿ ಮಾಡಲಿದ್ದಾರೆ.
ಸಿಎಂ ಮೇಲ್ಮನವಿಗೆ ಕೇವಿಯಟ್ ತಕರಾರು
ರಾಜ್ಯಪಾಲರು ತಮ್ಮ ವಿರುದ್ಧ ನೀಡಿರುವ ಪ್ರಾಸಿಕ್ಯೂಶನ್ ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಿಎಂ ಮೇಲ್ಮಮನಿ ಸಲ್ಲಿಸಿದರೆ, ಹೈ ರ್ಕೋಟ್ ನಲ್ಲಿ ದೂರುದಾರ ಪ್ರದೀಪ್ ಕೇವಿಯಟ್ ಸಲ್ಲಿಸಲು ಸಜ್ಜಾಗಿದ್ದರೆ.
ಯಾವುದೇ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ತಡೆಯಾಜ್ಞೆ ತರಲು ಮೇಲ್ಮನವಿ ಸಲ್ಲಿಸಿದಾಗ ಅದಕ್ಕೆ ಪ್ರತಿಯಾಗಿ ದೂರುದಾರರು ತಮ್ಮ ಮನವಿಯನ್ನು ಸಹ ಪರಿಗಣಿಸಿ ನಂತರವೇ ನ್ಯಾಯಾಲಯ ತೀರ್ಪು ನೀಡಬೇಕು ಎಂದು ಸಲ್ಲಿಸುವ ಅರ್ಜಿಯೇ ಕೇವಿಯಟ್ ಅಗಿದೆ.