Muda Scam: ಮುಡಾ ಪ್ರಕರಣದಲ್ಲಿ ಸಿಎಂಗೆ ಮತ್ತಷ್ಟು ಸಂಕಷ್ಟ ; ಬದಲಿ ನಿವೇಶನ ಕೋರಿ ಬರೆದ ಪತ್ರ ಎಲ್ಲೆಡೆ ವೈರಲ್

By Aishwarya

Published On:

Follow Us

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಬದಲಿ ನಿವೇಶನ ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಬರೆದಿರುವ ಪತ್ರ ಎನ್ನಲಾದ ಪೋಸ್ಟ್ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಮುಡಾ ಪ್ರಕರಣ (Muda Scam Karnataka)

ಸಾಮಾಜಿಕ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಸಿದ್ದರಾಮಯ್ಯ ಅವರು ಬರೆದಿರುವ ಪತ್ರ ಎನ್ನಲಾದ ಚಿತ್ರವನ್ನು ಪೋಸ್ಟ್ ಮಾಡಿರುವ ಜೆಡಿಎಸ್ ಗುಳಿಗೆ ಸಿದ್ದ ಒಳಗೆ ಮೇಯಿದ ‘ಈ ಮಾತು ನಿಮ್ಮಂಥವರನ್ನು ನೋಡಿಯೇ ಹೇಳಿರಬೇಕು. ನನಗೆ ಒಂದು ನಿವೇಶನವೂ ಇಲ್ಲ. ಯಾವುದೇ ಲೆಟರ್ ಬರೆದಿಲ್ಲ ಎಂದು ಸುಳ್ಳು ಹೇಳುವ ಸಿದ್ದರಾಮಯ್ಯ ಅವರೇ, ಸಮಾಜವಾದಿ ಮುಖವಾಡ ತೊಟ್ಟು ನೀವು ಮಾಡಿರುವ ಅಕ್ರಮಗಳಿಗೆ ಈ ಲೆಟರ್ ಸಾಕ್ಷಿ. ಬದಲಿ ನಿವೇಶನ ಕೋರಿ ನೀವೇ ಸ್ವತಃ ಬರೆದಿರುವ ಪತ್ರ, ನಿಮ್ಮದೇ ಸಹಿ…ಇಷ್ಟು ಸಾಕಲ್ಲವೇ ? ಇದು ನಿಮಗೆ ಕಪ್ಪು ಚುಕ್ಕೆ ಅಲ್ಲವೇ? ಎಂದು ಸಿದ್ದರಾಮಯ್ಯನವರನ್ನು ಪ್ರಶ್ನಿಸಿದೆ.

ಸದ್ಯ ಈ ಪೋಸ್ಟ್ ಸಾಮಾಜಿಕ ಜಾಲತನಗಳಲ್ಲಿ ಸಿಕ್ಕಾಪಟ್ಟೆ ವೈರಲಾಗುತ್ತಿದ್ದು, ಪ್ರತಿಪಕ್ಷಗಳಿಗೆ ದೊಡ್ಡ ಅಸ್ತ್ರವೇ ಸಿಕ್ಕಂತಾಗಿದೆ. ಆದರೆ ಇದು ಸತ್ಯವೋ ಸುಳ್ಳು ಎಂದು ಮುಖ್ಯಮಂತ್ರಿಗಳೇ ಸ್ಪಷ್ಟನೆ ನೀಡಬೇಕಿದೆ.

About the Author

ನಮಸ್ತೆ, ಐಶ್ವರ್ಯ ಚಟ್ನಹಳ್ಳಿ, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಎಂ.ಎ ಪದವಿ. ಪ್ರಸ್ತುತ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಆಪ್ರೆಂಟಿಸ್ ಆಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಜೊತೆಜೊತೆಗೆ khnewstimes.com ನಲ್ಲಿ ಕಂಟೆಂಟ್ ರೈಟರ್ ಆಗಿ ಕೆಲಸ ಮಾಡುತಿದ್ದೇನೆ.

For Feedback - feedback@khnewstimes.com

Leave a Comment

Follow