Modi 3.0 Budget: ಮೋದಿ 3.0 ಬಜೆಟ್ ನ ಪ್ರಮುಖ ಅಂಶಗಳು; ಉದ್ಯೋಗ, ಕೈಗಾರಿಕೆ, ವಿದ್ಯಾರ್ಥಿಗಳಿಗೆ ಬಂಪರ್ ಕೊಡುಗೆ

By Aishwarya

Published On:

Follow Us

NDA ಮೈತ್ರಿಕೂಟದ ಮೊಟ್ಟ ಮೊದಲ ಬಜೆಟ್ ಇಂದು ಮಂಡನೆಯಾಗಿದೆ. ಮೋದಿ 3.0 ಸರ್ಕಾರದ ಬಜೆಟ್ ಮೇಲೆ ಸಾರ್ವಜನಿಕರು ಸಾಕಷ್ಟು ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದರು.

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡನೆ ಮಾಡುತ್ತಿದ್ದು, ಉದ್ಯೋಗ, ಕೈಗಾರಿಕೆ, ಯುವಕರು ಮತ್ತು ವಿದ್ಯಾರ್ಥಿಗಳಿಗೆ ಈ ಬಜೆಟ್ ನಲ್ಲಿ ಬಂಪರ್ ಕೊಡುಗೆಯನ್ನೇ ನೀಡಲಾಗಿದೆ. ಉದ್ಯೋಗ ಸೃಷ್ಟಿ ಕುರಿತು ಹೆಚ್ಚಿನ ಒತ್ತು ನೀಡಲಾಗಿದ್ದು, ಯುವಕರ ಕೌಶಲ್ಯ ಅಭಿವೃದ್ಧಿಗೆ ಅನೇಕ ಯೋಜನೆಗಳನ್ನು ಬಜೆಟ್ ನಲ್ಲಿ ಘೋಷಿಸಲಾಗಿದೆ. ಕೃಷಿಗೆ ಸಂಬಂಧಿಸಿದಂತೆ ಅನೇಕ ಯೋಜನೆಗಳನ್ನು ಘೋಷಣೆ ಮಾಡಲಾಗಿದ್ದು ರೈತರ ಅಭಿವೃದ್ಧಿಗೆ ಕೇಂದ್ರ ಸರ್ಕಾರ ವಿನೂತನ ಯೋಜನೆಗಳನ್ನು ಘೋಷಿಸಿದೆ. ಈ ಬಾರಿಯ ಕೇಂದ್ರ ಬಜೆಟ್ ಒಂದಿಷ್ಟು ಪ್ರಮುಖ ಘೋಷಣೆಗಳ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ.

ಮೂರು ಕೋಟಿ ಮನೆ ನಿರ್ಮಾಣಕ್ಕೆ ಗುರಿ

ಪಿಎಂ ಆವಾಸ್ ಯೋಜನೆಯ ಅಡಿಯಲ್ಲಿ ಈಗಾಗಲೇ ದೇಶದ ಸಾರ್ವಜನಿಕರಿಗೆ ಮನೆ ನಿರ್ಮಾಣ ಮಾಡಲಾಗುವುದು, ಈ ಯೋಜನೆಯನ್ನು ಮುಂದುವರೆದಂತೆ 3 ಕೋಟಿ ಮನೆಗಳ ನಿರ್ಮಾಣ ಗುರಿ. ನಗರ, ಗ್ರಾಮಾಂತರ ಪ್ರದೇಶದಲ್ಲಿ 3 ಕೋಟಿ ಮನೆಗಳ ನಿರ್ಮಾಣದ ಘೋಷಣೆ ಮಾಡಲಾಗಿದೆ.

ಕೃಷಿ ಕ್ಷೇತ್ರಕ್ಕೆ‌ 1.5 ಲಕ್ಷ ಕೋಟಿ ಮೀಸಲು

ರೈತರು ಮತ್ತು ಕೃಷಿ ಕ್ಷೇತ್ರಕ್ಕೆ ಬಜೆಟ್‌ನಲ್ಲಿ 1.52 ಲಕ್ಷ ಕೋಟಿ ರೂ. ಘೋಷಣೆ ಮಾಡಲಾಗಿದೆ. ಈ ನಿಧಿಯ ಸಹಾಯದಿಂದ ರೈತರ ಬೆಳೆ ವಿಮೆ, ತರಕಾರಿ ಬೆಳೆಗಳ ಸಂರಕ್ಷಣೆ ಮತ್ತು ಪ್ರೋತ್ಸಾಹಕ್ಕೆ ಹೆಚ್ಚಿನ ಆದ್ಯತೆ ನೀಡುವುದು, ದೇಶದ 100 ಜಿಲ್ಲೆಗಳಲ್ಲಿ ಡಿಜಿಟಲ್ ಬೆಳೆ ಸರ್ವೆ ನಡೆಸಲು ಯೋಜನೆ, ಕಿಸಾನ್ ಕ್ರೆಡಿಟ್ ಕಾರ್ಡ್‌ಗಳನ್ನ 5 ರಾಜ್ಯಗಳಲ್ಲಿ ನೀಡಲು ಕೇಂದ್ರ ಸಿದ್ದತೆ 1.52 ಲಕ್ಷ ಕೋಟಿ ರೂ. ಹಣ ಕೃಷಿ ವಲಯಕ್ಕೆ ಮೀಸಲು ನೀಡಲಾಗುವುದು. ಸಹಜ ಕೃಷಿಗೆ ಆದ್ಯತೆ ನೀಡಲು ಸರ್ಕಾರದ ಸರ್ವ ಕ್ರಮ ವಹಿಸಲಾಗುತ್ತದೆ. ಕೃಷಿ ಕ್ಷೇತ್ರದಲ್ಲಿ ಉತ್ಪಾದನೆ ಹೆಚ್ಚಳಕ್ಕೆ ಹೆಚ್ಚಿನ ಆದ್ಯತೆ ನೀಡಿ ದೇಶದ ಆರ್ಥಿಕತೆಗೆ ಸಹಾಯ ಮಾಡಲಾಗುತ್ತದೆ. ತರಕಾರಿ ಬೆಳೆಗಳ ಉತ್ಪಾದನೆ, ಸಂಗ್ರಹ ಉತ್ತೇಜನಕ್ಕಾಗಿ ರೈತರಿಗೆ ನೆರವು ನೀಡಲಾಗುವುದು. ಗ್ರಾಮೀಣ ಭಾಗದ ಆರ್ಥಿಕತೆ ವೃದ್ದಿಗೆ ಆದ್ಯತೆ ನೀಡಿ ಗ್ರಾಮೀಣ ಭಾಗದಲ್ಲಿ ಯುವಕರಿಗೆ ಕೃಷಿಯನ್ನು ಉತ್ತೇಜಿಸುವುದು. ಎಣ್ಣೆ ಕಾಳುಗಳ ಉತ್ಪಾದನೆ, ಶೇಖರಣೆ ಹಾಗೂ ಮಾರಾಟಕ್ಕೆ ಹೆಚ್ಚಿಸಿ ಎಣ್ಣೆ ಕಾಳುಗಳ ಉತ್ಪಾದನೆಗೆ ಉತ್ತೇಜಿಸಲಾಗುವುದು ಎಂದು ಕೃಷಿಗೆ ಸಂಬಂಧಿಸಿದಂತೆ ಬಜೆಟ್ ನಲ್ಲಿ ವಿಶೇಷ ಯೋಜನೆಗಳನ್ನು ಘೋಷಿಸಲಾಯಿತು.

ಉದ್ಯೋಗ ಹುಡುಕುವ ಯುವಕ ಯುವತಿಯರಿಗೆ ಕೇಂದ್ರ ಸರ್ಕಾರದ ಗುಡ್ ನ್ಯೂಸ್

ಸರ್ಕಾರದ 9 ಪ್ರಮುಖ ಆದ್ಯತೆಗಳಲ್ಲಿ ಒಂದು ಉದ್ಯೋಗ ಮತ್ತು ಕೌಶಲ್ಯ ಅಭಿವೃದ್ಧಿಯಾಗಿದ್ದು, ಇದರಡಿಯಲ್ಲಿ, ಮೊದಲ ಬಾರಿಗೆ ಉದ್ಯೋಗಾಕಾಂಕ್ಷಿಗಳಾಗಿರುವವರಿಗೆ ತುಂಬಾ ಸಹಾಯ ಆಗಲಿದೆ. ಔಪಚಾರಿಕ ವಲಯದಲ್ಲಿ ಮೊದಲ ಬಾರಿಗೆ ಉದ್ಯೋಗ ಆರಂಭಿಸುವವರಿಗೆ ಒಂದು ತಿಂಗಳ ವೇತನವನ್ನು ಸರ್ಕಾರದ ವತಿಯಿಂದ ನೀಡಲಾಗುವುದು.

ಇನ್ನು ಈ ವೇತನವನ್ನು ನೇರ ನಗದು ವರ್ಗಾವಣೆ ಮೂಲಕ ಮೂರು ಕಂತುಗಳಲ್ಲಿ ಬಿಡುಗಡೆ ಮಾಡಲಾಗುತ್ತದೆ. ಇದರ ಗರಿಷ್ಠ ಮೊತ್ತ 15,000 ರೂಪಾಯಿ ಇಪಿಎಫ್​ಒನಲ್ಲಿ ನೋಂದಾಯಿಸಲ್ಪಟ್ಟವರು ಈ ಭತ್ಯೆ ಪಡೆಯಲಿದ್ದು, ಇದರಿಂದ 2.10 ಕೋಟಿ ಯುವಕರಿಗೆ ಅನುಕೂಲ ಆಗಲಿದೆ ಎಂದರು.

ಪ್ರಧಾನ ಮಂತ್ರಿ ಸೂರ್ಯಘರ್ ಉಚಿತ ವಿದ್ಯುತ್ ಯೋಜನೆ

ಸೌರ ವಿದ್ಯುತ್ ಸಮರ್ಪಕ ಬಳಕೆಗಾಗಿ ಕೇಂದ್ರ ಸರ್ಕಾರವು ‘ಪ್ರಧಾನ ಮಂತ್ರಿ ಸೂರ್ಯಘರ್ ಉಚಿತ ವಿದ್ಯುತ್ ಯೋಜನೆ’ಯನ್ನು ಪ್ರಾರಂಭಿಸಲಾಗಿದೆ. ಇದರ ಅಡಿಯಲ್ಲಿ ಮೇಲ್ಛಾವಣಿಯ ಮೇಲೆ ಸೌರ ಫಲಕಗಳನ್ನು ಅಳವಡಿಸಲಾಗುವುದು. ಇದರಿಂದಾಗಿ 1 ಕೋಟಿ ಕುಟುಂಬಗಳು 300 ಯೂನಿಟ್​​​ಗಳನ್ನು ಪಡೆಯಲು ಸಾಧ್ಯವಾಗಲಿದೆ ಎಂದರು.

ಮುದ್ರಾ ಯೋಜನೆಯ ಸಾಲದ ಮಿತಿ ಏರಿಕೆ

ಪ್ರಧಾನಮಂತ್ರಿ ಮುದ್ರಾ ಯೋಜನೆ’ಯ ಸಾಲದ ಮಿತಿಯನ್ನು 20 ಲಕ್ಷಕ್ಕೆ ಏರಿಕೆ ಮಾಡಲಾಗುತ್ತದೆ ಎಂದು ಘೋಷಣೆ ಮಾಡಿದರು. ಸದ್ಯ ಯೋಜನೆಯಡಿ 10 ಲಕ್ಷ ರೂ. ತನಕ ಸಾಲ ಪಡೆಯಲು ಬಜೆಟ್ ನಲ್ಲಿ ಘೋಷಣೆ ಮಾಡಲಾಗಿದೆ.

ಹೈದರಾಬಾದ್ – ಬೆಂಗಳೂರು ಕೈಗಾರಿಕಾ ಕಾರಿಡಾರ್ ನಿರ್ಮಾಣ

ವಿಶಾಖಪಟ್ಟಣ-ಚೆನ್ನೈ ಕೈಗಾರಿಕಾ ಕಾರಿಡಾರ್, ಹೈದರಾಬಾದ್ -ಬೆಂಗಳೂರು ಕೈಗಾರಿಕಾ ಕಾರಿಡಾರ್ ನಿರ್ಮಾಣ ಮಾಡಲಾಗುವುದು.26 ಸಾವಿರ ಕೋಟಿ ವೆಚ್ಚದಲ್ಲಿ ರೈಲು ಯೋಜನೆಗಳು ಅರಂಭವಾಗಲಿವೆ. ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡಲಾಗುವುದು ಇಂದು ಬಜೆಟ್ ನಲ್ಲಿ ಘೋಷಿಸಲಾಯಿತು.

ದೇಶಾದ್ಯಂತ ಮಹಿಳಾ ಹಾಸ್ಟೆಲ್

ಉದ್ಯೋಗ ಕ್ಷೇತ್ರದಲ್ಲಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಉತ್ತೇಜಿಸುವ ನಿಟ್ಟಿನಲ್ಲಿ ದೇಶಾದ್ಯಂತ ಮಹಿಳೆಯರಿಗಾಗಿ ಮಹಿಳಾ ಹಾಸ್ಟೆಲ್‌ ಗಳನ್ನು ನಿರ್ಮಾಣ ಮಾಡುವುದಾಗಿ ನಿರ್ಮಲಾ ಸೀತಾರಾಮನ್‌ ಹೇಳಿದರು.

ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಾಲ

ದೇಶೀಯ ಶಿಕ್ಷಣ ಸಂಸ್ಥೆಗಳಲ್ಲಿ ಉನ್ನತ ಶಿಕ್ಷಣ ಪಡೆಯಲು ವಿದ್ಯಾರ್ಥಿಗಳಿಗೆ 10 ಲಕ್ಷ ರೂ.ವರೆಗೆ ಸಾಲ ಸೌಲಭ್ಯ ನೀಡಲಾಗುತ್ತದೆ. ಪ್ರತಿ ವರ್ಷ 1 ಲಕ್ಷ ವಿದ್ಯಾರ್ಥಿಗಳಿಗೆ ಸಾಲ ಸೌಲಭ್ಯ ದೊರೆಯಲಿದೆ ಎಂದು ಘೋಷಿಸಲಾಯಿತು.

ಇತರೆ ಪ್ರಮುಖ ಘೋಷಣೆಗಳು

  • ದೇಶದ 100 ಜಿಲ್ಲೆಗಳಲ್ಲಿ ಡಿಜಿಟಲ್ ಬೆಳೆ ಸರ್ವೆ ನಡೆಸಲು ವಿಶೇಷ ಯೋಜನೆ ಘೋಷಣೆ.
  • ಐದು ರಾಜ್ಯಗಳಲ್ಲಿ ಕಿಸಾನ್ ಕ್ರೆಡಿಟ್ ಯೋಜನೆ ಜಾರಿ ಮಾಡಲು ಘೋಷಣೆ.
  • ರೈತರ ತರಕಾರಿ ಬೆಳೆಗಳ ಉತ್ಪಾದನೆ, ಸಂಗ್ರಹ ಉತ್ತೇಜನಕ್ಕಾಗಿ ರೈತರಿಗೆ ನೆರವು
  • ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಯೋಜನೆ ಮುಂದಿನ 5 ವರ್ಷಕ್ಕೆ ವಿಸ್ತರಣೆ
  • ಉದ್ಯೋಗ, ಎಂಎಸ್‌ಎಂಇ ಹಾಗೂ ಮಧ್ಯಮ ವರ್ಗದವರನ್ನು ಗುರಿಯಾಗಿಸಿ ಹಲವು ಯೋಜನೆ
  • ಶಿಕ್ಷಣ, ಉದ್ಯೋಗ, ಕೌಶಲ್ಯಾಭಿವೃದ್ಧಿಗೆ 1.48 ಲಕ್ಷ ಕೋಟಿ ಮೀಸಲು
  • ಕೇಂದ್ರ ಬಜೆಟ್‌ನಲ್ಲಿ ಒಟ್ಟು 9 ಅಂಶಗಳಿಗೆ ಹೆಚ್ಚಿನ ಆದ್ಯತೆ ಅದರಲ್ಲಿ ಕೃಷಿ, ಉದ್ಯೋಗ, ಸಾಮಾಜಿಕ ನ್ಯಾಯ, ಸೇವೆ, ನಗರ ಅಭಿವೃದ್ಧಿ, ಇಂಧನ ಹಾಗೂ ಸಂಶೋಧನೆಗೆ ಆದ್ಯತೆ
  • 26 ಸಾವಿರ ಕೋಟಿ ರೂ. ವೆಚ್ಚದಲ್ಲಿ ದೇಶಾದ್ಯಂ ತ ರೈಲ್ವೆ ಯೋಜನೆಗಳು
  • ಬಿಹಾರ ಹಾಗೂ ಆಂಧ್ರ ಪ್ರದೇಶ ರಾಜ್ಯಗಳಿಗೆ ವಿಶೇಷ ಅನುದಾನದ ಭರವಸೆ
  • ಆಂಧ್ರ ಪ್ರದೇಶಕ್ಕೆ ಪುನರ್ ನಿರ್ಮಾಣ ಮನವಿಗೆ ಕೇಂದ್ರದ ಅಸ್ತು
About the Author

ನಮಸ್ತೆ, ಐಶ್ವರ್ಯ ಚಟ್ನಹಳ್ಳಿ, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಎಂ.ಎ ಪದವಿ. ಪ್ರಸ್ತುತ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಆಪ್ರೆಂಟಿಸ್ ಆಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಜೊತೆಜೊತೆಗೆ khnewstimes.com ನಲ್ಲಿ ಕಂಟೆಂಟ್ ರೈಟರ್ ಆಗಿ ಕೆಲಸ ಮಾಡುತಿದ್ದೇನೆ.

For Feedback - feedback@khnewstimes.com

1 thought on “Modi 3.0 Budget: ಮೋದಿ 3.0 ಬಜೆಟ್ ನ ಪ್ರಮುಖ ಅಂಶಗಳು; ಉದ್ಯೋಗ, ಕೈಗಾರಿಕೆ, ವಿದ್ಯಾರ್ಥಿಗಳಿಗೆ ಬಂಪರ್ ಕೊಡುಗೆ”

Leave a Comment

Follow