ಚನ್ನಪಟ್ಟಣ ಉಪ ಚುನಾವಣೆ ನಾನೇ ಅಭ್ಯರ್ಥಿ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿಕೆ ನೀಡಿದ್ದಾರೆ. ಸದ್ಯ ಈ ಹೇಳಿಕೆಯು ರಾಜ್ಯ ರಾಜಕೀಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.
ನೆಲಮಂಗಲದ ವೀರಭದ್ರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು ನಾನು ರಾಮನಗರದಲ್ಲೂ 5 ವರ್ಷ ಧ್ವಜಾರೋಹಣ ಮಾಡಿದ್ದೇನೆ, ಅಧಿಕಾರಿಗಳನ್ನ ಕೇಳಿದ್ದೆ, ಅವರು ಬಂದಿಲ್ಲ ಅಂದರು, ನಮ್ಮ ಕೆಲಸ ನಾವು ಮಾಡಿದ್ದೇವೆ. ಜೊತೆಗೆ ಚನ್ನಪಟ್ಟಣ ಉಪ ಚುನಾವಣೆಗೆ ನಾನೇ ಅಭ್ಯರ್ಥಿ ಎಂದರು.
ಪ್ರಯತ್ನಕ್ಕಿಂತ ಪ್ರಾರ್ಥನೆ ಫಲ ನೀಡುತ್ತದೆ ಎಂದು ನನಗೆ ನಂಬಿಕೆ ಇದೆ. ದೇಶಕ್ಕೆ ಮತ್ತು ರಾಜ್ಯಕ್ಕೆ ಒಳ್ಳೆಯ ಮಳೆ ಬಂದಿದೆ. ಈ ಹಿನ್ನೆಲೆಯಲ್ಲಿ ಸಾಕಷ್ಟು ಇತಿಹಾಸವಿರುವ ವೀರಭದ್ರ ಹಾಗೂ ರುದ್ರೇಶ್ವರ ಸ್ವಾಮಿಗೆ ಪೂಜೆ ಸಲ್ಲಿಸಿದ್ದೇನೆ. ಈ ದೇವಸ್ಥಾನಕ್ಕೆ ಬರಬೇಕು ಎಂದು ತುಂಬಾ ದಿನಗಳ ಹಿಂದೆ ಅಂದುಕೊಂಡಿದ್ದೆ, ಇದು ಇತಿಹಾಸವಿರುವ ಜಾಗ, ಹಾಗಾಗಿ ಬಂದು ಪೂಜೆ ಮಾಡಿದ್ದು, ಆ ಸೌಭಾಗ್ಯ ಸಿಕ್ಕಿದೆ ಎಂದರು.
ಗ್ಯಾರಂಟಿಗಳಲ್ಲಿ ಯಾವುದೇ ಬದಲಾವಣೆಯಿಲ್ಲ
ಗ್ಯಾರೆಂಟಿ ಯೋಜನೆಗಳ ಪರಿಷ್ಕರಣೆ ಕುರಿತು ಮಾತನಾಡಿದ ಡಿಕೆಶಿ ಗ್ಯಾರೆಂಟ್ ಯೋಜನೆಗಳನ್ನು ನಿಲ್ಲಿಸುವ ಬಗ್ಗೆ ಯಾವ ಸಚಿವರು ಮಾತನಾಡಿಲ್ಲ, ಅದರೆ ಅನುಕೂಲ ಇರುವವರು ಬೇಡ ಎಂದು ಹೇಳುತ್ತಿದ್ದರೆ. ಇದರಬಗ್ಗೆ ಆನಂತರ ಯೋಚನೆ ಮಾಡುತ್ತೇವೆ, ಗ್ಯಾರಂಟಿಗಳಲ್ಲಿ ಯಾವುದೇ ಬದಲಾವಣೆಯಿಲ್ಲ” ಎಂದು ಸ್ಪಷ್ಟ ಪಡಿಸಿದರು.