D. K. Shivakumar: ಹೆಚ್.ಡಿ ಕುಮಾರಸ್ವಾಮಿ ಅವರ ರಾಜಿನಾಮೆಯಿಂದ ತೆರವಾಗಿರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಬೈ ಎಲೆಕ್ಷನ್ ರಾಜ್ಯದ ಉಪ ಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ಸ್ಪರ್ಧಿಸುತ್ತಾರೆ ಎಂಬ ಮಾತು ರಾಜ್ಯ ರಾಜಕಾರಣದಲ್ಲಿ ಚರ್ಚೆ ಆಗುತ್ತಿತ್ತು. ಈ ಕುರಿತು ಡಿಕೆಶಿ ಚುನಾವಣೆಯ ಕುರಿತು ಸ್ಪರ್ಧಿಸುವುದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿ ಗೆಲ್ಲುವ ಮೂಲಕ ಕೇಂದ್ರ ಸಚಿವರಾಗಿರುವ ಎಚ್ ಡಿ ಕುಮಾರಸ್ವಾಮಿ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಹೀಗಾಗಿ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಉಪಚುನಾವಣೆಯು ನಡೆಯಲಿದ್ದು ಬಿಜೆಪಿ ಜೆಡಿಎಸ್ ಮೈತ್ರಿಕೂಟವು ಅಭ್ಯರ್ಥಿಗಳ ಹುಡುಕಾಟದಲ್ಲಿದೆ. ಇದೇ ಸಮಯದಲ್ಲಿ ಚನ್ನಪಟ್ಟಣದ ಕೆಂಗಲ್ ಹನುಮಂತ ರಾಯನ ದೇವಸ್ಥಾನಕ್ಕೆ ತೆರಳಿದ್ದ ಡಿಕೆಶಿ ಅಲ್ಲಲ್ಲಿ ಸಭೆಗಳನ್ನು ನಡೆಸಿದರು. ಇದರಿಂದ ರಾಜ್ಯ ರಾಜಕಾರಣದಲ್ಲಿ ಹೊಸದೊಂದು ಚರ್ಚಿ ಶುರುವಾಗಿದ್ದು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸ್ವತಹ ಡಿಕೆ ಶಿವಕುಮಾರ್ ರವರೇ ಸ್ಪರ್ಧಿಸಲಿದ್ದಾರೆ ಎಂದು ಹೇಳಲಾಗುತ್ತಿತ್ತು.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆಶಿ ನಾನು ಈಗಾಗಲೇ ಕನಕಪುರ ಕ್ಷೇತ್ರದಿಂದ ಗೆದ್ದು ಬಂದಿದ್ದೇನೆ ಚನ್ನಪಟ್ಟಣದ ಉಪಚುನಾವಣೆಯಲ್ಲಿ ನಾನು ಏಕೆ ಸ್ಪರ್ಧ ಮಾಡಬೇಕು ಎಂದರು.
ಎರಡು ದಿನಗಳ ಹಿಂದೆ ಡಿಕೆ ಶಿವಕುಮಾರ್ ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತಾ “ಚನ್ನಪಟ್ಟಣದ ಪ್ರಸಿದ್ದ ಕೆಂಗಲ್ ಹನುಮಂತರಾಯಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದ ಅವರು ನನ್ನ ರಾಜಕೀಯ ಜೀವನದಲ್ಲಿ ಮಹತ್ವದ ಬದಲಾವಣೆ ಚನ್ನಪಟ್ಟಣದಿಂದ ನಡೆದಿದೆ. ನನ್ನ ರಾಜಕೀಯ ಜೀವನದಲ್ಲಿ ಹೊಸ ಅಧ್ಯಾಯ ಆರಂಭಿಸಲು ಕೆಂಗಲ್‌ನ ಆಂಜನೇಯ ದೇವಸ್ಥಾನಕ್ಕೆ ಬಂದಿದ್ದೇನೆ” ಎಂದು ಹೇಳಿದ್ದರು.
ನಾನು ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿ ಈ ಉಪಚುನಾವಣೆಯನ್ನು ಎದುರಿಸುತ್ತೇವೆ. ನಾನು ಇಲ್ಲಿ ಜನರನ್ನು ಕಾಂಗ್ರೆಸ್ ಬೆಂಬಲಿಸುವಂತೆ ಮನವಿ ಮಾಡಿದ್ದೇನೆ ನಾನು ರಾಮನಗರ ಜಿಲ್ಲೆಯವನು ಇಲ್ಲಿನ ಜನ ನನ್ನ ಮೇಲೆ ನಂಬಿಕೆ ಇಟ್ಟಿದ್ದಾರೆ ಖಂಡಿತವಾಗಲೂ ನಮ್ಮಗೆ ಶಕ್ತಿ ನೀಡುತ್ತಾರೆ ಎಂದರು. ಚನ್ನಪಟ್ಟಣದಿಂದ ಸ್ಪರ್ಧೆ ಮಾಡಿದರೆ ಡಿಕೆಶಿ ರಾಜಕೀಯ ಭವಿಷ್ಯ ಅಂತ್ಯವಾಗಲಿದೆ ಎಂಬ ಸಿ.ಪಿ ಯೋಗೇಶ್ವರ್ ಹೇಳಿಕೆಗೆ ಪ್ರತಿಕ್ರಿಸಿದ ಅವರು,ಯೋಗೇಶ್ವರ್ ದೊಡ್ಡವರು. ಅವರ ಮಾತಿಗೆ ಪ್ರತಿಕ್ರಿಯೆ ನೀಡುವಷ್ಟು ಸಮಯ ನನ್ನ ಬಳಿ ಇಲ್ಲ ಎಂದರು.