ರಾಜ್ಯ ರಾಜಕೀಯದಲ್ಲಿ ರಾಜಕೀಯ ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಾನೂನು ಕ್ರಮ ಜರುಗಿಸಲು ಅನುಮತಿ ನೀಡುವ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅನುಮತಿ ನೀಡಿದ್ದು, ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿದೆ.
ಈ ಹಿನ್ನಲೆ ಆ.19ರಂದು ‘ಮೈಸೂರು ಬಂದ್’ ನಡೆಸಲು ಶೋಷಿತ ಸಮುದಾಯದ ನಾಯಕರು, ಅಹಿಂದ ಮುಖಂಡರು ಮತ್ತು ಸಿದ್ದರಾಮಯ್ಯ ಅಭಿಮಾನಿಗಳ ಸಭೆಯಲ್ಲಿ ನಿರ್ಧರಿಸಲಾಯಿತು.
ಮೈಸೂರಿನಲ್ಲಿ ಸಭೆ ನಡೆಸಿದ ಪ್ರಗತಿಪರ ಸಂಘಟನೆ, ಸಿದ್ದರಾಮಯ್ಯ ಅಭಿಮಾನಿಗಳು ರಾಜ್ಯಪಾಲರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಬಿಜೆಪಿಯು ರಾಜ್ಯಪಾಲರನ್ನು ಕೈಗೊಂಬೆ ಮಾಡಿಕೊಂಡಿದೆ. ಮುಡಾ ಹಗರಣದಲ್ಲಿ ನೇರ ಆರೋಪಿಯಲ್ಲದ ಸಿಎಂ ಸಿದ್ದರಾಮಯ್ಯ ಅವರನ್ನು ಉದ್ದೇಶಪೂರ್ವಕವಾಗಿ ಪ್ರಕರಣದಲ್ಲಿ ಸಿಲುಕಿಸಿ ಅವರ ರಾಜಕೀಯ ಜೀವನವನ್ನು ಮುಗಿಸಲು ಹೊರಟಿದ್ದು ಇದನ್ನು ಖಂಡಿಸಿ ಆಗಸ್ಟ್ 19 ರಂದು ಮೈಸೂರು ಬಂದ್ ಮಾಡಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದರೆ.