ಕಾಶಿಯಲ್ಲಿ ನಡೆಯುವ ಗಂಗಾರತಿ ಮಾದರಿಯಲ್ಲಿಯೇ ಮುಂದಿನ ದಿನಗಳಲ್ಲಿ ಕಾವೇರಿ ಆರತಿ ಕಾರ್ಯಕ್ರಮ ಆರಂಭಿಸಲಾಗುವುದು ಎಂದು ಉಪ ಮುಖ್ಯಮಂತ್ರಿಯ ಡಿ.ಕೆ ಶಿವಕುಮಾರ್ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕಾವೇರಿ ಆರತಿ ಕಾರ್ಯಕ್ರಮ ಪ್ರಾರಂಭಿಸುವ ಆಲೋಚನೆ ಇದೆ. ಕೊಡಗು, ಮೈಸೂರು ಹಾಗೂ ಕಾವೇರಿ ಪ್ರದೇಶದ ಶಾಸಕರು ಹಾಗೂ ಅಧಿಕಾರಿಗಳು ಸೇರಿದ 20 ಜನರ ಸಮಿತಿ ರಚನೆ ಮಾಡಿ, ವಾರಣಾಸಿಯಲ್ಲಿ ನಡೆಯುವ ಗಂಗಾ ಆರತಿ ಹೇಗೆ ನಡೆಯುತ್ತದೆ ಎಂಬುದನ್ನು ಅಧ್ಯಯನ ನಡೆಸಲಾಗುತ್ತದೆ. ಅಲ್ಲಿಂದ ಒಂದು ತಂಡ ಕರೆದುಕೊಂಡು ಯಾವ ಜಾಗದಲ್ಲಿ ಆರತಿ ನಡೆಸಬಹುದು ಎಂದು ಜಾಗ ಗುರುತಿಸಲಾಗುವುದು. ಒಂದು ತಿಂಗಳ ಒಳಗಾಗಿ ಈ ಕಾರ್ಯಕ್ರಮ ಮಾಡಲಾಗುವುದು ಎಂದು ತಿಳಿಸಿದರು.
ಈ ಕಾರ್ಯಕ್ರಮವನ್ನು ಧಾರ್ಮಿಕ ದತ್ತಿ ಇಲಾಖೆ, ಕಾವೇರಿ ನೀರಾವರಿ ನಿಗಮ ಹಾಗೂ ಇತರ ಇಲಾಖೆಗಳ ಜಂಟಿಯಾಗಿ ಕಾರ್ಯಕ್ರಮವನ್ನು ರೂಪಿಸುತ್ತೇವೆ. ಕಾವೇರಿ ಬೃಂದಾವನ ಅಮ್ಯೂಸ್ ಮೆಂಟ್ ಉದ್ಯಾನಕ್ಕೆ ಹೊಸ ರೂಪ ನೀಡಲಾಗುವುದು. ಪಿಪಿಪಿ ಮಾದರಿಯಲ್ಲಿ ಇದರ ಅಭಿವೃದ್ಧಿ ಮಾಡಲಾಗುವುದು ಇದರ ಕುರಿತು ಸಚಿವ ಸಂಪುಟದ ಮುಂದೆ ಚರ್ಚೆ ನಡೆಸಿ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು.
ಜುಲೈ 27ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೆಆರ್‌ಎಸ್‌ಗೆ ಬಾಗಿನ ಅರ್ಪಿಸುವುದು ಕಷ್ಟವಾಗಲಿದೆ. ಅಧಿವೇಶನದ ಬಳಿಕ ಶುಭಮೂರ್ತ ನೋಡಿ ದಿನಾಂಕ ನಿಗದಿ ಮಾಡಲಾಗುವುದು ಎಂದು ಮಾಹಿತಿ ನೀಡಿದರು.