ಮುಡಾ ಪ್ರಕರಣದಲ್ಲಿ ತನ್ನ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಹೈಕೋರ್ಟ್ ನಲ್ಲಿ ರಿಟ್ ಅರ್ಜಿ ಸಲ್ಲಿಸಲಾಗಿದ್ದು, ಕರ್ನಾಟಕ ಹೈಕೋರ್ಟ್‌ಗೆ ಸಲ್ಲಿಸಿದ ಅರ್ಜಿ ವಿಚಾರಣೆಯನ್ನು ಆಗಸ್ಟ್ 29ರವರೆಗೆ ಮುಂದೂಡಿಕೆ ಮಾಡಿದೆ.
Muda Scam
ಸಿಎಂ ರಿಟ್ ಅರ್ಜಿ ವಿಚಾರಣೆಯನ್ನು ನ್ಯಾಯಮೂರ್ತಿ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಕೈಗೆತ್ತಿಕೊಳ್ಳುತ್ತಿದ್ದಂತೆ ರಾಜ್ಯಪಾಲರ ಪರ ವಕೀಲ ತುಷಾರ್ ಮೆಹ್ತಾ ವಿಚಾರಣೆ ಮುಂದೂಡುವಂತೆ ಮನವಿ ಮಾಡಿದ್ದರು.
ಮುಡಾ ಅಕ್ರಮದ ಆರೋಪದ ಕುರಿತು ಕಾನೂನು ಹೋರಾಟಕ್ಕೆ ಸಜ್ಜಾಗಿರುವ ಸಿಎಂ ಸಿದ್ದರಾಮಯ್ಯ ಅವರು ಅಗತ್ಯ ದಾಖಲೆಗಳನ್ನ ಸಿದ್ದಪಡಿಸಿಕೊಂಡಿದ್ದು, ಪ್ರಬಲ ವಾದ ಮಂಡಿಸಲು ನುರಿತ ಹಿರಿಯ ವಕೀಲರನ್ನು ನೇಮಕ ಮಾಡಲಾಗಿದೆ.
ಇನ್ನು ಈ ರಿಟ್ ಅರ್ಜಿ ಪ್ರತಿ ಇಂದು ಬೆಳಿಗ್ಗೆಯಷ್ಟೆ ಲಭ್ಯವಾದ ಕಾರಣ ವಾದ ಮಂಡಿಸಲು ಹೆಚ್ಚಿನ ಕಾಲಾವಕಾಶ ಬೇಕು. ಆದ್ದರಿಂದಾಗಿ ವಿಚಾರಣೆಯನ್ನು ಮುಂದೂಡಬೇಕು ಎಂದು ರಾಜ್ಯಪಾಲರ ಪರ ವಕೀಲರು ಪ್ರಕರಣದ ಆರಂಭದಲ್ಲಿಯೇ ಮನವಿ ಮಾಡಿದ್ದಾರೆ. ಹಾಗೆಯೇ ರಾಜ್ಯಪಾಲರ ಆದೇಶಕ್ಕೆ ತಡೆಯಾಜ್ಞೆ ನೀಡಬೇಡಿ ಎಂದೂ ಸಾಲಿಟರಲ್ ಜನರಲ್ ತುಷಾರ್ ಮೆಹ್ತಾ ಮನವಿ ಮಾಡಿದ್ದಾರೆ.