ವಿಧಾನ ಪರಿಷತ್ ಗೆ ಆಯ್ಕೆಯಾದ ನೂತನ 17 ಸದಸ್ಯರು ಪ್ರಮಾಣ ವಚನ ಸ್ವೀಕಾರ

By Aishwarya

Published On:

Follow Us

ರಾಜ್ಯದಲ್ಲಿ ನೂತನವಾಗಿ ವಿಧಾನ ಪರಿಷತ್ ಗೆ ಆಯ್ಕೆಯಾದ 17 ಸಚಿವರು ಇಂದು (ಜೂನ್ 24) ತಮ್ಮ ಪ್ರಮಾಣವಚವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮುಖದಲ್ಲಿ ಸ್ವೀಕರಿಸಿದರು.

ನೂತನ ಸದಸ್ಯರಿಗೆ ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅವರು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಪ್ರಮಾಣವಚನವನ್ನು ಬೋಧಿಸಿದರು.

ವಿಧಾನಸಭೆಯಿಂದ ಆಯ್ಕೆಯಾದ 11 ಹಾಗೂ ಪದವೀಧರರ, ಶಿಕ್ಷಕರ ಕ್ಷೇತ್ರಗಳಿಂದ 6 ಜನ ಸೇರಿ ಒಟ್ಟಿಗೆ 17 ಜನ ವಿಧಾನಪರಿಷತ್ ನ ನೂತನ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದರು.

ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಆಯ್ಕೆಯಾಗಿರುವ 11 ಸದಸ್ಯರಲ್ಲಿ ಕಾಂಗ್ರೆಸ್‌ನಿಂದ ಐವನ್ ಡಿಸೋಜಾ, ಕೆ ಗೋವಿಂದರಾಜು, ಜಗದೇವ್ ಗುತ್ತೆದಾರ್,ಬಲ್ಕಿಸ್ ಬಾನು, ಎನ್ ಎಸ್ ಭೋಸರಾಜ್, ಯತೀಂದ್ರ ಸಿದ್ದರಾಮಯ್ಯ, ಎ ವಸಂತ ಕುಮಾರ್, ಬಿಜೆಪಿಯಿಂದ ಎನ್ ರವಿಕುಮಾರ್, ಸಿಟಿ ರವಿ, ಮುಳೆ ಮಾರುತಿರಾವ್, ಜೆಡಿಎಸ್‌ನಿಂದ ಜವರಾಯಿಗೌಡ ಪ್ರಮಾಣ ವಚನ ಸ್ವೀಕರಿಸಿದರು.

ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್‌ಗೆ ಆಯ್ಕೆಯಾದ 6 ಸದಸ್ಯರಲ್ಲಿ ಈಶಾನ್ಯ ಪದವೀಧರ ಕ್ಷೇತ್ರದಲ್ಲಿ ಕಾಂಗ್ರೆಸ್​ನಿಂದ ಗೆದ್ದ ಚಂದ್ರಶೇಖರ್ ಬಸವರಾಜ್ ಪಾಟೀಲ್, ಬೆಂಗಳೂರು ಪದವೀಧರ ಕ್ಷೇತ್ರದಲ್ಲಿ ಕಾಂಗ್ರೆಸ್​​ನಿಂದ ರಾಮೋಜಿಗೌಡ, ಆಗ್ನೆಯ ಶಿಕ್ಷಕರ ಕ್ಷೇತ್ರದಲ್ಲಿ ಕಾಂಗ್ರೆಸ್​​​ನಿಂದ ಡಿ ಟಿ ಶ್ರೀನಿವಾಸ್, ನೈರುತ್ಯ ಪದವೀಧರ ಕ್ಷೇತ್ರದಲ್ಲಿ ಬಿಜೆಪಿಯಿಂದ ಗೆದ್ದ ಡಾ. ಧನಂಜಯ ಸರ್ಜಿ, ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ ಜೆಡಿಎಸ್​ನಿಂದ ಎಸ್​ಎಲ್ ಭೋಜೇಗೌಡ ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಜೆಡಿಎಸ್‌ನ ಕೆ ವಿವೇಕಾನಂದ ಪ್ರಮಾಣ ವಚನ ಸ್ವೀಕರಿಸಿದರು.

About the Author

ನಮಸ್ತೆ, ಐಶ್ವರ್ಯ ಚಟ್ನಹಳ್ಳಿ, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಎಂ.ಎ ಪದವಿ. ಪ್ರಸ್ತುತ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಆಪ್ರೆಂಟಿಸ್ ಆಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಜೊತೆಜೊತೆಗೆ khnewstimes.com ನಲ್ಲಿ ಕಂಟೆಂಟ್ ರೈಟರ್ ಆಗಿ ಕೆಲಸ ಮಾಡುತಿದ್ದೇನೆ.

For Feedback - feedback@khnewstimes.com

Leave a Comment

Follow