Nikhil Kumaraswamy: ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಕೇಂದ್ರ ಸಚಿವರಾದ ಹಿನ್ನಲೆ ಹೆಚ್.ಡಿ ಕುಮಾರಸ್ವಾಮಿ ಅವರ ರಾಜಿನಾಮೆಯಿಂದ ತೆರವಾಗಿರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ರಾಜ್ಯ ರಾಜಕೀಯದಲ್ಲಿ ಬಿಸಿ ಬಿಸಿ ಚರ್ಚೆ ಶುರುವಾಗಿದೆ. ಒಂದು ಕಡೆ ಡಿಕೆ ಸಹೋದರರು ಚನ್ನಪಟ್ಟಣವನ್ನು ತಮ್ಮ ತೆಕ್ಕೆಗೆ ತೆಗೆದುಕೊಳ್ಳುವಲ್ಲಿ ತಂತ್ರಗಾರಿಕೆ ರೂಪಿಸುತ್ತಿದ್ದರೆ. ಮತ್ತೊಂದೆಡೆ ತಮ್ಮ ಕ್ಷೇತ್ರವನ್ನು ತಾವೇ ಉಳಿಸಿಕೊಳ್ಳಲು ಎಚ್.ಡಿ ಕುಮಾರಸ್ವಾಮಿ ಹೋರಾಟ ಮಾಡುತ್ತಿದ್ದಾರೆ. ಜೆಡಿಎಸ್ ನ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಚನ್ನಪಟ್ಟಣದಿಂದ ಸ್ಪರ್ಧಿಸುತ್ತಾರೆ ಎಂಬ ಮಾತಿಗೆ ಎಚ್ಡಿಕೆ ಪ್ರತಿಕ್ರಿಯಿಸಿದ್ದು ಈ ಗುರುತು ಸ್ಪಷ್ಟನೆ ನೀಡಿದ್ದಾರೆ.
ಚನ್ನಪಟ್ಟಣದಲ್ಲಿ ಆಯೋಜಿಸಲಾಗಿದ್ದ ಬಮೂಲ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಈಗಾಗಲೇ ನಿಖಲ್ ಎರಡು ಬಾರಿ ಸೋತು ಅವನು ಅನುಭವಿಸಿತ್ತಿರುವ ನೋವು ನನಗೆ ಮಾತ್ರ ಗೊತ್ತು. ಹೀಗಾಗಿ ಈ ಉಪಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲಾ ಎಂದು ಸ್ಪಷ್ಟನೆ ನೀಡಿದರು.
ಈ ಚುನಾವಣೆಗೆ ಸಿ.ಪಿ ಯೋಗೇಶ್ವರ್ ಆಗಬಹುದು ಅಥವಾ ಜೆಡಿಎಸ್ ನ ಯಾರೇ ಅಭ್ಯರ್ಥಿ ಅದರೂ ಒಟ್ಟಾಗಿ ಸೇರಿ ಎನ್ ಡಿಎ ಮೈತ್ರಿಕೂಟವನ್ನು ಬೆಂಬಲಸಿ ನಾವು ಒಟ್ಟಾಗಿ ಕೆಲಸ ಮಾಡೋಣ ಎಂದರು.
ಹಾಲು ಉತ್ಪಾದಕರಿಗೆ ದೇಶದಾದ್ಯಂತ ಪ್ರೋತ್ಸಾಹ ಧನ ನೀಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರಗೆ ಮನವಿ ಮಾಡುತ್ತಾನೆ. ಈ ಕುರಿತು ಮೋದಿ ಜೊತೆ ಮಾತನಾಡಿ ಪ್ರತಿ ಲೀಟರ್ ಹಾಲಿಗೆ 2 ರಿಂದ 3 ರೂ ಪ್ರೋತ್ಸಾಹ ಧನ ಕೊಡುವಂತೆ ಮನವೂಲಿಸುತ್ತೇನೆ ಎಂದು ಭರವಸೆ ನೀಡಿದರು.