ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದು ವಿರೋಧಿಸಿ ಎಲ್ಲಾ ಜಿಲ್ಲಾ ಕೇಂದ್ರಗಳಲು ಪ್ರತಿಭಟನೆ ಮಾಡಿಲು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಆಗ್ರಹ ಮಾಡಿದೆ.
ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದರ ವಿರುದ್ದ ರಾಜ್ಯ ಕಾಂಗ್ರೆಸ್ ಘಟಕವು ಎಲ್ಲಾ ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲಿ ಪ್ರತಿಭಟನೆ ಮಾಡಲು ಜಿಲ್ಲಾ ಅಧ್ಯಕ್ಷರುಗಳಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಪತ್ರ ಬರೆದಿದ್ದಾರೆ.
ಆಗಸ್ಟ್ 19ರಂದು ಬೆಳಗ್ಗೆ 11 ಗಂಟೆಗೆ ಪ್ರತಿಭಟನೆ ಮಾಡಬೇಕು. ಪ್ರತಿಭಟನೆಯಲ್ಲಿ ಆಯಾ ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು, ಮಾಜಿ ಶಾಸಕರು, ಪದಾಧಿಕಾರಿಗಳು ಕಡ್ಡಾಯವಾಗಿ ಭಾಗಿಯಾಗುವಂತೆ ಕಾಂಗ್ರೆಸ್ ಅಧ್ಯಕ್ಷರು ಕಟ್ಟಪ್ಪಣೆ ವಿಧಿಸಿದ್ದಾರೆ. ಪ್ರತಿಭಟನೆ ನಡೆಸುವ ಸ್ಥಳದಿಂದ ಕನಿಷ್ಟ ಅರ್ಧ ಕಿಲೋ ಮೀಟರ್ ದೂರದಿಂದ ಪಾದಯಾತ್ರೆ ಮಾಡಿಕೊಂಡು ಹೋಗುವಂತೆ ಸಲಹೆ ನೀಡಲಾಗಿದೆ.
ಪ್ರಾಸಿಕ್ಯೂಷನ್ ಸಂಬಂಧ ಎಐಸಿಸಿ ನಾಯಕರು ಕೂಡ ಸಿಎಂ ಸಿದ್ದರಾಮಯ್ಯಗೆ ದೂರವಾಣಿ ಕರೆ ಮಾಡಿದ್ದಾರೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್, ಉಸ್ತುವಾರಿ ಸುರ್ಜೇವಾಲ ಕರೆ ಮಾಡಿದ್ದು, ಸಿಎಂ ಸಿದ್ದರಾಮಯ್ಯಗೆ ಅಭಯ ನೀಡಿದ್ದಾರೆ. ನಿಮ್ಮ ಜತೆ ನಾವಿದ್ದೇವೆ, ಧೈರ್ಯವಾಗಿರಿ. ಏನೇ ಆದರೂ ಕಾನೂನು ಹೋರಾಟ ನಡೆಸೋಣ ಅಂತ ಹೇಳೋ ಮೂಲಕ ರಾಜ್ಯವ್ಯಾಪಿ ಸಮರಕ್ಕೆ ರಣಕಹಳೆ ಮೊಳಗಿಸುವಂತೆ ಸೂಚನೆ ಕೊಟ್ಟಿದ್ದಾರೆ.