Rahul Gandhi: ಲೋಕಸಭೆಯ ವಿರೋಧ ಪಕ್ಷ ನಾಯಕರಾಗಿ ರಾಹುಲ್ ಗಾಂಧಿಯನ್ನು ಆಯ್ಕೆ ಮಾಡಲಾಗಿದೆ ಎಂದು ಕಾಂಗ್ರೆಸ್ ನ ಪ್ರಾಧನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ತಿಳಿಸಿದರು.
ಇಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ನಡೆದ ಐಎನ್‌ಡಿಐಎ ಬ್ಲಾಕ್‌ನ ಫ್ಲೋರ್ ನಾಯಕರ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಕಳೆದ ಎರಡು ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಕಡಿಮೆ ಬಹುಮತ ಬಂದ ಕಾರಣ ವಿರೋಧಪಕ್ಷದ ನಾಯಕ ಸ್ಥಾನ ಪಡೆಯಲು ಕನಿಷ್ಟ 54 ಸ್ಥಾನಗಳ ಅವಶ್ಯಕತೆ ಇದ್ದು, ಈ ಬಾರಿ ಕಾಂಗ್ರೆಸ್ 99 ಸ್ಥಾನಗಳನ್ನು ಗೆದ್ದಿದ್ದು, INDIA ಮೈತ್ರಿಕೂಟವು ಒಮ್ಮತದಿಂದ ರಾಹುಲ್ ಗಾಂಧಿಯವರನ್ನು ವಿರೋಧಪಕ್ಷದ ನಾಯಕರಾಗಿ ನೇಮಕ ಮಾಡಲಾಗಿದೆ.
ರಾಯಬರೇಲಿ ಮತ್ತು ವಯನಾಡು ಕ್ಷೇತ್ರದಿಂದ ಸ್ಪರ್ಧಿಸಿದ್ದ ರಾಹುಲ್ ಗಾಂಧಿ, ಎರಡರಲ್ಲಿಯೂ ಗೆಲುವು ಸಾಧಿಸಿದ್ದರು. ವಯನಾಡು ಕ್ಷೇತ್ರ ತ್ಯಜಿಸಿರುವ ರಾಹುಲ್ ಗಾಂಧಿ ರಾಯಬರೇಲಿ ಉಳಿಸಿಕೊಂಡಿದ್ದಾರೆ. ಕೇರಳದ ವಯನಾಡು ಲೋಕಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಪ್ರಿಯಾಂಕಾ ಗಾಂಧಿ ಅವರು ಸ್ಪರ್ಧೆ ಮಾಡಲಿದ್ದಾರೆ.
ಕಾಂಗ್ರೆಸ್‌ನ ಸಂಸದೀಯ ಪಕ್ಷದ ನಾಯಕಿ ಸೋನಿಯಾ ಗಾಂಧಿಯವರು ವಿ.ಪಕ್ಷ ನಾಯಕರ ನೇಮಕ ಕುರಿತು ಲೋಕಸಭಾ ಹಂಗಾಮಿ ಸ್ಪೀಕರ್‌ಗೆ ಪತ್ರ ಬರೆದಿದ್ದಾರೆ.