ಸಿದ್ದರಾಮಯ್ಯನವರೇ ದಯವಿಟ್ಟು ಡಿ.ಕೆ ಶಿವಕುಮಾರ್ ಅವರಿಗೆ ಸಿಎಂ ಸ್ಥಾನ ಬಿಟ್ಟುಕೊಡಿ ಎಂದು ಬಹಿರಂಗವಾಗಿ ಒಕ್ಕಲಿಗ ಮಹಾಸಂಸ್ಥಾನ ಮಠದ ಚಂದ್ರಶೇಖರಶ್ರೀ ಅವರು ವೇದಿಕೆಯ ಮೇಲೆ ಹೇಳುವ ಮೂಲಕ ರಾಜ್ಯ ರಾಜಕಾರಣದಲ್ಲಿ ಮತ್ತೊಂದು ಸಂಚಲನಕ್ಕೆ ಕಾರಣವಾಗಿದೆ.
ಇಂದು ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ನಡೆದ ಕೆಂಪೇಗೌಡರ ಜಯಂತಿ ಕಾರ್ಯಕ್ರಮದಲ್ಲಿ ಸಿಎಂ ಮತ್ತು ಡಿ ಸಿಎಂ ಸೇರಿದಂತೆ ಅನೇಕ ಸಚಿವರು, ರಾಜಕೀಯ ಮುಖಂಡರು, ವಿವಿಧ ಮಠಾಧೀಶರು ಕಾರ್ಯಕ್ರಮದಲ್ಲಿ ಹಾಜರಿದ್ದರು. ಈ ವೇಳೆಯಲ್ಲಿ ಒಕ್ಕಲಿಗ ಮಹಾ ಸಂಸ್ಥಾನ ಮಠದ ಚಂದ್ರಶೇಖರ ಶ್ರೀ ಅವರು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡುತ್ತಾ ಸಿದ್ದರಾಮಯ್ಯನವರೇ ದಯವಿಟ್ಟು ಡಿಕೆ ಶಿವಕುಮಾರ್ ಅವರಿಗೆ ಸಿಎಂ ಸ್ಥಾನ ಬಿಟ್ಟುಕೊಡಿ, ನಿಮಗೆ ಈಗಾಗಲೇ ಮುಖ್ಯಮಂತ್ರಿ ಸ್ಥಾನದ ಅನುಭವವಿದೆ. ಈಗ ಶಿವಕುಮಾರ್ ರವರಿಗೆ ಒಂದು ಅವಕಾಶ ಮಾಡಿಕೊಡಿ ಇದು ನಿಮ್ಮಿಂದ ಮಾತ್ರ ಸಾಧ್ಯ ಹಾಗಾಗಿ ನಿಮ್ಮಲ್ಲಿ ಮನವಿ ಮಾಡುತ್ತೇನೆ ಡಿಕೆ ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಮಾಡಿ ಎಂದು ಬಹಿರಂಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಮಾಡಿದರು.
ಶ್ರೀಗಳ ಮಾತಿಗೆ ವೇದಿಕೆಯಲ್ಲೇ ಪ್ರತಿಕ್ರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಎಲ್ಲಾ ನಿರ್ಧಾರಗಳನ್ನು ಹೈಕಮಾಂಡ್ ತೀರ್ಮಾನಿಸಲಿದೆ. ಹೈಕಮಾಂಡ್ ತೀರ್ಮಾನದಂತೆ ನಾವು ನಡೆದುಕೊಳ್ಳುತ್ತೇವೆ ಎಂದರು.
ಇನ್ನು ಶ್ರೀಗಳ ಹೇಳಿಕೆ ಕುರಿತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಪ್ರತಿಕ್ರಿಯೆ ನೀಡಲು ನಿರಾಕರಿಸಿದರು.
ರಾಜ್ಯ ರಾಜಕಾರಣದಲ್ಲಿ ಈಗಾಗಲೇ ಹೆಚ್ಚುವರಿ ಡಿಸಿಎಂ ಹುದ್ದೆಗಳಿಗೆ ಚರ್ಚೆ ಆಗುತ್ತಿದ್ದು ಮತ್ತೊಂದೆ ಶ್ರೀಗಳ ಹೇಳಿಕೆಯು ಕಾಂಗ್ರೆಸ್ ಪಾಳ್ಯದಲ್ಲಿ ಸಂಚಲನ ಸೃಷ್ಟಿಸಿದೆ.