ರಾಜ್ಯ ರಾಜಕಾರಣದಲ್ಲಿ ಕಳೆದ ಒಂದು ವಾರದಿಂದ ಸಿಎಂ ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ ಹುದ್ದೆಗಳ ಬದಲಾವಣೆ ಮತ್ತು ಹೆಚ್ಚುವರಿ ಡಿಸಿಎಂ ಹುದ್ದೆಗಳನ್ನು ವಿಸ್ತರಿಸಲು ಅನೇಕ ಶಾಸಕರು ಹಾಗೂ ಸಚಿವರು ತಮ್ಮ ಪ್ರತಿಕ್ರಿಯೆಗಳನ್ನು ಮಾಧ್ಯಮದ ಮುಂದೆ ವ್ಯಕ್ತಪಡಿಸುತ್ತಿದ್ದಾರೆ. ಈ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಕಾಂಗ್ರೆಸ್ಸಿನ ಹೈಕಮಾಂಡ್ ವರಿಷ್ಠರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡುವ ಸಮಯದಲ್ಲೇ ರಾಹುಲ್ ಗಾಂಧಿಯವರನ್ನು ಭೇಟಿ ಮಾಡಿ ರಾಜ್ಯ ರಾಜಕಾರಣದಲ್ಲಿ ಚರ್ಚೆಯಾಗುತ್ತಿರುವ ಬದಲಾವಣೆ ವಿಷಯಗಳನ್ನು ಕುರಿತು ಚರ್ಚೆ ನಡೆಸಿದ್ದಾರೆ ಎನ್ನಲಾಗುತ್ತಿದೆ. ಕಳೆದ ಶನಿವಾರದಿಂದ ದೆಹಲಿಯಲ್ಲಿ ಉಳಿದುಕೊಂಡಿರುವ ಡಿ.ಕೆ ಶಿವಕುಮಾರ್ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಸುಧೀರ್ಘವಾಗಿ ಮಾತುಕತೆ ನಡೆಸಿದ್ದಾರೆ.
ಇಬ್ಬರು ನಾಯಕರೂ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದ್ದು, ರಾಜ್ಯ ರಾಜಕೀಯದಲ್ಲಿನ ಇತ್ತೀಚಿನ ಬೆಳವಣಿಗೆ ಕುರಿತು ಚರ್ಚೆ ನಡೆಸಿದ್ದಾರೆ.
ಈ ಮೂಲಕ ಹೆಚ್ಚುವರಿ ಡಿಸಿಎಂ ಹುದ್ದೆಗಳು, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರ ಕಾಂಗ್ರೆಸ್ಸಿನ ಹೈಕಮಾಂಡ್ ಅಂಗಳ ತಲುಪಿದೆ.
ಸಿದ್ದರಾಮಯ್ಯನವರ ಆಪ್ತ ಬಣದಲ್ಲಿರುವ ಸಚಿವರು ಹೆಚ್ಚುವರಿ ಡಿಸಿಎಂ ಹುದ್ದೆಗಳ ಕುರಿತು ಆಗಾಗ ಪ್ರಸ್ತಾಪಿಸುತ್ತಿದ್ದರು. ನೋಟಿಸು ನೀಡಿ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ಕೊಟ್ಟರು ಸಚಿವ ಕೆ.ಎನ್ ರಾಜಣ್ಣ ಮಾತನಾಡುತ್ತಿದ್ದಾರೆ.
ಇದರಿಂದ ಪಕ್ಷದಲ್ಲಿ ಗೊಂದಲ ಉಂಟಾಗಿ ಪಕ್ಷದ ಸಂಘಟಯ ಹಿತದೃಷ್ಟಿಯಿಂದ ಒಳ್ಳೆಯದಲ್ಲ ಹೀಗಾಗಿ ಹೆಚ್ಚುವರಿ ಡಿಸಿಎಂ ಹುದ್ದೆಗಳ ಕುರಿತು ಚರ್ಚೆ ನಡೆಯುತ್ತಿರುವುದನ್ನು ನಿಲ್ಲಿಸಬೇಕು ಎಂದು ಡಿ.ಕೆ ಶಿವಕುಮಾರ್ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮನವಿ ಮಾಡಿಕೊಂಡಿದ್ದಾರೆ.
ಸದ್ಯ ರಾಜ್ಯದಲ್ಲಿ ಮೂರು ವಿಧಾನಸಭೆಗಳಗೆ ಉಪಚುನಾವಣೆ ನಡೆಯಲಿದ್ದು ಮತ್ತು ಬಿಬಿಎಂಪಿ ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗಳು ನಡೆಯಬೇಕಿದೆ ಹಾಗಾಗಿ ಪಕ್ಷದಲ್ಲಿ ಯಾವುದೇ ಬದಲಾವಣೆಗಳು ಸಾಧ್ಯವಿಲ್ಲ ಎಂದು ಮಲ್ಲಿಕಾರ್ಜುನ ಖರ್ಗೆ ರಾಜ್ಯದ ಕಾಂಗ್ರೆಸ್ ನಾಯಕರಿಗೆ ಮನವರಿಕೆ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.