ಟಿ20 ವಿಶ್ವಕಪ್ ಫೈನಲ್ ನಲ್ಲಿ ಗೆಲುವು ಸಾಧಿಸಿದ ಕಾರಣ ಬಿಸಿಸಿಐ ಕಾರ್ಯದರ್ಶಿ ಬರೋಬ್ಬರಿ 125 ಕೋಟಿ ರೂಪಾಯಿ ಬಹುಮಾನ(Team India Prize Money)ವನ್ನು ಭಾರತೀಯ ಕ್ರಿಕೆಟ್ ತಂಡಕ್ಕೆ ಘೋಷಣೆ ಮಾಡಿದ್ದಾರೆ.
ಈ ಬಹುಮಾನದ ಹಣದಲ್ಲಿ ಆಟಗಾರರು, ಕೋಚಿಂಗ್ ಸಿಬ್ಬಂದಿ ಮತ್ತು ಅಮೂಲ್ಯ ಸಹಾಯಕ ಸಿಬ್ಬಂದಿ ಸೇರಿದಂತೆ ಇಡೀ ತಂಡಕ್ಕೆ 125 ಕೋಟಿ ರೂಪಾಯಿಗಳನ್ನು ವಿತರಿಸಲಾಗುತ್ತದೆ. ಟಿ20 ವಿಶ್ವಕಪ್ ಗೆದ್ದ ಭಾರತ ತಂಡಕ್ಕೆ ಭಾರತೀಯ ಕ್ರಿಕೆಟ್ ಮಂಡಳಿ ಪ್ರತ್ಯೇಕ 125 ಕೋಟಿ ಬಹುಮಾನ ಘೋಷಿಸಿದೆ. ಇದು ಅನೇಕರನ್ನು ಆಶ್ಚರ್ಯಗೊಳಿಸಿತು. ಗೆಲುವಿನ ಸಂಭ್ರಮದಲ್ಲಿರುವ ಭಾರತ ತಂಡದ ಆಟಗಾರರಿಗೆ ಜಾಕ್‌ಪಾಟ್ ಹೊಡೆದಿದೆ.
ಈ ಬಾರಿಯ ಟಿ20 ವಿಶ್ವಕಪ್‌ನಲ್ಲಿ ಭಾರತದ ಪ್ರಮುಖ ತಂಡದಲ್ಲಿ 15 ಮಂದಿ, ಮೀಸಲು ತಂಡದಲ್ಲಿ 4 ಮಂದಿ (2 ಜನರನ್ನು ದೇಶಕ್ಕೆ ವಾಪಸ್ ಕಳುಹಿಸಲಾಗಿದೆ), ತರಬೇತುದಾರರು ಮತ್ತು ಸಹಾಯಕ ಸಿಬ್ಬಂದಿ, ತಂಡದ ಕೋಚ್ ಗಳು ಸೇರಿದಂತೆ ಒಟ್ಟು 8 ಜನರು, ಜೊತೆಗೆ 5 ಆಯ್ಕೆಗಾರರಿದ್ದರು. ಈ ಬಹುಮಾನದ ಹಣವನ್ನು ಸಮಾನವಾಗಿ ಹಂಚಲಾಗುತ್ತದೆ. 125 ಕೋಟಿಯನ್ನು 32 ಜನರಿಗೆ ಹಂಚಿದರೆ ಎಲ್ಲರಿಗೂ 3 ಕೋಟಿ 90 ಲಕ್ಷಕ್ಕಿಂತ ಸ್ವಲ್ಪ ಹೆಚ್ಚು ಸಿಗುತ್ತದೆ. ಮತ್ತು ಮೀಸಲು ಆಟಗಾರರನ್ನು ಹೊರಗಿಟ್ಟರೆ, ಎಲ್ಲರಿಗೂ 4 ಕೋಟಿ ರೂಪಾಯಿಗಳಿಗಿಂತ ಹೆಚ್ಚು ಸಿಗುತ್ತದೆ.
ಟೀಮ್ ಇಂಡಿಯಾದಲ್ಲಿ ಕಾಣಿಸಿಕೊಂಡ 15 ಪ್ರಮುಖ ಆಟಗಾರರಿಗೆ ತಲಾ 5 ಕೋಟಿ ರೂ. ಸಿಗಲಿದೆ. ಮೀಸಲು ಆಟಗಾರರಾಗಿದ್ದ ರಿಂಕು ಸಿಂಗ್, ಶುಭಮನ್ ಗಿಲ್, ಅವೇಶ್ ಖಾನ್ ಮತ್ತು ಖಲೀಲ್ ಅಹ್ಮದ್ ತಲಾ 1 ಕೋಟಿ ರೂ ಬಹುಮಾನದ ಹಣವನ್ನು ನೀಡಲಾಗುತ್ತದೆ.ಇನ್ನೂ ಭಾರತ ತಂಡದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ಗೆ 5 ಕೋಟಿ ರೂ ದೊರೆಯುತ್ತದೆ. ವಿಶ್ವಕಪ್ ಗೆದ್ದ ಭಾರತ ತಂಡಕ್ಕೆ ಐಸಿಸಿಯು 20.42 ಕೋಟಿ ರೂಪಾಯಿಗಳನ್ನು ನೀಡುತ್ತದೆ. ಅದರ ಜೊತೆ ಈಗ ಬಿಸಿಸಿಐ 125 ಕೋಟಿ ಬಹುಮಾನ ಘೋಷಣೆ ಮಾಡಿದೆ.