IND vs SL 3rd ODI: ಭಾರತಕ್ಕೆ ಹೀನಾಯ ಸೋಲು: 27 ವರ್ಷಗಳ ಬಳಿಕ ಭಾರತದ ವಿರುದ್ಧ ಏಕದಿನ ಸರಣಿ ಗೆದ್ದ ಶ್ರೀ ಲಂಕಾ

By Aishwarya

Published On:

Follow Us

IND vs SL 3rd ODI: ಶ್ರೀಲಂಕಾ ವಿರುದ್ಧ ಮೂರನೇ ಏಕದಿನ ಪಂದ್ಯದಲ್ಲಿ ಭಾರತ ತಂಡ 110 ರನ್‌ಗಳ ಭಾರಿ ಅಂತರದಲ್ಲಿ ಸೋಲು ಅನುಭವಿಸಿದೆ. ಲಂಕಾ ನೀಡಿದ 249 ರನ್‌ಗಳ ಸವಾಲನ್ನು ಬೆನ್ನಟ್ಟಿದ ಟೀಂ ಇಂಡಿಯಾ 26.1 ಓವರ್‌ಗಳಲ್ಲಿ 138 ರನ್‌ಗಳಿಗೆ ಆಲೌಟ್‌ ಆಯಿತು. ಈ ಮೂಲಕ ಶ್ರೀಲಂಕಾ ತಂಡ 37 ವರ್ಷಗಳ ಬಳಿಕ ಮೂರು ಏಕದಿನ ಪಂದ್ಯಗಳ ಸರಣಿಯಲ್ಲಿ 2-0 ಗೆಲುವು ಸಾಧಿಸಿತು.

ಆರ್.ಪ್ರೇಮದಾಸ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಸರಣಿಯ ಮೂರನೇ ಮತ್ತು ಕೊನೆಯ ಏಕದಿನ ಪಂದ್ಯದಲ್ಲಿ ಭಾರತ ಮತ್ತೆ ಬ್ಯಾಟಿಂಗ್​ ವೈಫಲ್ಯ ಕಂಡಿತು. ಟಾಸ್​ ಗೆದ್ದು ಮೊದಲು ಬ್ಯಾಟ್​ ಮಾಡಿದ ಶ್ರೀಲಂಕಾ 7 ವಿಕೆಟ್​ಗೆ 248 ರನ್​ ಗಳಿಸಿತು. ಇದಕ್ಕುತ್ತರವಾಗಿ ಭಾರತ 26.1 ಓವರ್​ಗಳಲ್ಲಿ 138 ರನ್​ಗೆ ಆಲೌಟ್​ ಆಗಿ 110 ರನ್​ಗಳಿಂದ ಶ್ರೀ ಲಂಕಾ ಪಡೆಯ ಮುಂದೆ ಮಂಡಿಯೂರಿತು.
ಟಾಸ್ ಗೆದ್ದ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಶ್ರೀಲಂಕಾ, 50 ಓವರ್ ಗಳಲ್ಲಿ 7 ವಿಕೆಟ್ ಕಳೆದುಕೊಂಡು 248 ರನ್ ಕಲೆಹಾಕಿತು. ಆವಿಷ್ಕಾ ಫರ್ನಾಂಡೊ (96) ರನ್ ಗಳಿಸುವ ಮೂಲಕ ಶತಕದಿಂದ ವಂಚಿತವಾದರು. ಕುಸಾಲ್ ಮೆಂಡಿಸ್ (59) ರನ್ ಗಳಿಸಿದರೆ, ಪಾಥುಮ್ ನಿಸಂಕ (45) ರನ್ ಗಳಿಸಿ ಹೆಚ್ಚಿನ ಟಾರ್ಗೆಟ್ ನೀಡಿದರು.

ಭಾರತದ ಪರ ಬೌಲಿಂಗ್ ಮಾಡಿದ ರಿಯಾನ್ ಪರಾಗ್ 3 ವಿಕೆಟ್ ಪಡೆದರು. ಕುಲದೀಪ್ ಯಾದವ್, ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಮೊಹಮ್ಮದ್ ಸಿರಾಜ್ ತಲಾ ಒಂದು ವಿಕೆಟ್ ಪಡೆದರು.

ಸಾಧಾರಣ ಮೊತ್ತದ ಗುರಿ ಬೆನ್ನತ್ತಿದ ಭಾರತ ತಂಡವು 26.1 ಓವರ್‌ಗಳಲ್ಲಿ 138 ರನ್‌ಗಳಿಸಿ ಆಲೌಟ್‌ ಆಗುವ ಮೂಲಕ 110 ರನ್‌ಗಳಿಂದ ಸೋಲು ಕಂಡಿತು. ಚೇಸಿಂಗ್‌ ಆರಂಭಿಸಿದ ಭಾರತ ಆರಂಭದಿಂದಲೇ ಪ್ರಮುಖ ವಿಕೆಟ್‌ಗಳನ್ನು ಕಳೆದುಕೊಳ್ಳಲು ಆರಂಭಿಸಿತು. ಭಾರತದ ಪರ ರೋಹಿತ್‌ ಶರ್ಮಾ (35) ರನ್‌ ವಾಷಿಂಗ್ಟನ್‌ ಸುಂದರ್‌ ಕೊನೆಯಲ್ಲಿ (30) ರನ್‌ ಗಳಿಸಿದ್ದು ಬಿಟ್ಟರೆ, ಉಳಿದ ಯಾರೊಬ್ಬರೂ ಕ್ರೀಸ್‌ನಲ್ಲಿ ಭದ್ರವಾಗಿ ನೆಲೆಯೂರದ ಕಾರಣ ಭಾರತ ತಂಡ ಹೀನಾಯ ಸೋಲಿಗೆ ತುತ್ತಾಯಿತು.

About the Author

ನಮಸ್ತೆ, ಐಶ್ವರ್ಯ ಚಟ್ನಹಳ್ಳಿ, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಎಂ.ಎ ಪದವಿ. ಪ್ರಸ್ತುತ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಆಪ್ರೆಂಟಿಸ್ ಆಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಜೊತೆಜೊತೆಗೆ khnewstimes.com ನಲ್ಲಿ ಕಂಟೆಂಟ್ ರೈಟರ್ ಆಗಿ ಕೆಲಸ ಮಾಡುತಿದ್ದೇನೆ.

For Feedback - feedback@khnewstimes.com

Leave a Comment

Follow