India Cricket New Head Coach: ಭಾರತ ತಂಡದ ಮುಖ್ಯ ಕೋಚ್ ಆಗಿ ಗೌತಮ್ ಗಂಭೀರ್(Gautam Gambhir) ಅವರನ್ನು ಬಿಸಿಸಿಐ ಆಯ್ಕೆ ಮಾಡಿದೆ. ಟಿ20 ವಿಶ್ವಕಪ್ ಮುಕ್ತಾಯದ ಬೆನ್ನಲ್ಲೇ ರಾಹುಲ್ ದ್ರಾವಿಡ್ ಅವರ ಕಾರ್ಯಾವಧಿ ಮುಗಿದಿದ್ದು, ಇದೀಗ ನೂತನ ಕೋಚ್ ಆಗಿ ಟೀಮ್ ಇಂಡಿಯಾದ ಮಾಜಿ ಎಡಗೈ ದಾಂಡಿಗ ಆಯ್ಕೆಯಾಗಿದ್ದಾರೆ.
ಭಾರತ ಮಹಿಳಾ ತಂಡದ ಮಾಜಿ ಕೋಚ್ ಡಬ್ಲ್ಯೂವಿ ರಾಮನ್ ಅವರ ಉಪಸ್ಥಿತಿಯೊಂದಿಗೆ ಮುಖ್ಯ ಕೋಚ್ ಹುದ್ದೆಗೆ ಸ್ಪರ್ಧೆಯನ್ನು ಹೊಂದಿದ್ದರೂ, ಗೌತಮ್ ಗಂಭೀರ್ ಅವರು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯ (ಬಿಸಿಸಿಐ) ಕ್ರಿಕೆಟ್ ಸಲಹಾ ಸಮಿತಿ (ಸಿಎಸಿ) ಯನ್ನು ಮೆಚ್ಚಿಸಿದ್ದಾರೆ.
ಗೌತಮ್ ಗಂಭೀರ್, ವಾಸ್ತವವಾಗಿ ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ನಡೆದ ‘ವಿದಾಯ ಶೂಟ್’ನಲ್ಲಿ ಭಾಗವಹಿಸಿದ್ದಾರೆ. ಇದು ಗೌತಮ್ ಗಂಭೀರ್ ಭಾರತ ತಂಡದ ಮುಂದಿನ ಮುಖ್ಯ ಕೋಚ್ ಆಗಲಿದ್ದಾರೆ ಎಂಬುದನ್ನು ಖಚಿತಪಡಿಸಲಾಗಿತ್ತು.
ಈ ಬಗ್ಗೆ ಟ್ವಿಟರ್‌ನಲ್ಲಿ ಬರೆದುಕೊಂಡಿರುವ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ, ಗೌತಮ್ ಗಂಭೀರ್ ಅವರನ್ನು ಭಾರತ ತಂಡದ ಮುಖ್ಯ ಕೋಚ್ ಆಗಿ ನೇಮಕ ಮಾಡುವುದಕ್ಕೆ ಅಪಾರ ಸಂತಸವಾಗುತ್ತಿದೆ. ಆಧುನಿಕ ಕ್ರಿಕೆಟ್ ತ್ವರಿತವಾಗಿ ವಿಕಸಿತವಾಗುತ್ತಿದ್ದು, ಗೌತಮ್ ಅವರು ಇದನ್ನು ಉನ್ನತ ಹಂತದಲ್ಲಿ ಬದಲಿಸುವಲ್ಲಿ ಪ್ರಮುಖ ಕಾರಣಕರ್ತರಾಗಿದ್ದಾರೆ. ಅವರು ತಮ್ಮ ವೃತ್ತಿಯುದ್ದಕ್ಕೂ ಹೋರಾಟದ ಹಾದಿಯೊಂದಿಗೆ ಹಲವು ಮೈಲಿಗಲ್ಲು ಸಾಧಿಸಿದ್ದಾರೆ. ಭಾರತ ಕ್ರಿಕೆಟ್ ತಂಡ ಬೆಳವಣಿಗೆ ಸಾಧಿಸಲು ಗೌತಮ್ ಒಬ್ಬ ಆದರ್ಶ ವ್ಯಕ್ತಿಯಾಗುತ್ತಾರೆ ಎಂಬ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ.