ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ(ICC) ಹೊಸ ಏಕದಿನ ರ‍್ಯಾಂಕಿಂಗ್ ಬಿಡುಗಡೆ ಮಾಡಿದೆ. ಈ ರ‍್ಯಾಂಕಿಂಗ್ ಪಟ್ಟಿಯ ಟಾಪ್-5 ರಲ್ಲಿ ಮೂವರು ಭಾರತದ ಬ್ಯಾಟರ್ ಸ್ಥಾನ ಗಳಿಸಿಕೊಂಡಿದ್ದಾರೆ.
ಏಕದಿನ ಶ್ರೇಯಾಂಕ ಪಟ್ಟಿಯಲ್ಲಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮ ಇದೇ ಮೊದಲ ಬಾರಿಗೆ ಏಕದಿನ ಬ್ಯಾಟರ್‌ಗಳ ಪಟ್ಟಿಯಲ್ಲಿ ದ್ವಿತೀಯ ಸ್ಥಾನಕ್ಕೇರಿದ್ದಾರೆ. ಪಾಕಿಸ್ತಾನ್ ತಂಡದ ನಾಯಕ ಬಾಬರ್ ಆಝಂ ಅಗ್ರಸ್ಥಾನದಲ್ಲಿದ್ದಾರೆ.
ICC Odi Rankings List 2024
ಭಾರತ ತಂಡದ ಉಪನಾಯಕ ಶುಭ್ಮನ್ ಗಿಲ್ ಏಕದಿನ ಬ್ಯಾಟರ್‌ಗಳ ಶ್ರೇಯಾಂಕದಲ್ಲಿ ಮೂರನೇ ಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ. ವಿರಾಟ್ ಕೊಹ್ಲಿ ನಾಲ್ಕನೇ ಸ್ಥಾನದಲ್ಲಿ ಮುಂದುವರಿದಿದ್ದಾರೆ. ಪಾಕಿಸ್ತಾನದ ಬಾಬರ್ ಅಜಮ್ 824 ರೇಟಿಂಗ್ ಪಾಯಿಂಟ್‌ಗಳೊಂದಿಗೆ ಅಗ್ರ ಸ್ಥಾನದಲ್ಲಿದ್ದರೆ.
ಟಾಪ್-20ರೊಳಗೆ ಭಾರತದ ಬ್ಯಾಟರ್‌ಗಳ ಹೆಸರನ್ನು ನೋಡುವುದಾದರೆ, ಶ್ರೇಯಸ್ ಅಯ್ಯರ್ 16ನೇ ಸ್ಥಾನದಲ್ಲಿದ್ದರೆ, ಶ್ರೀಲಂಕಾ ವಿರುದ್ಧ ನಿರಾಶಾದಾಯಕ ಪ್ರದರ್ಶನ ನೀಡಿದ ಕೆಎಲ್ ರಾಹುಲ್ ಒಂದು ಸ್ಥಾನ ಕುಸಿದು 21ನೇ ಸ್ಥಾನ ತಲುಪಿದ್ದಾರೆ.
ಬೌಲಿಂಗ್ ವಿಭಾಗ
ಇನ್ನೂ ಐಸಿಸಿ ಬೌಲಿಂಗ್ ರ‍್ಯಾಂಕಿಂಗ್‌ನಲ್ಲಿ ಭಾರತ ಏಕೈಕ ಬೌಲರ್ ಟಾಪ್-5 ರಲ್ಲಿ ಸ್ಥಾನ ಪಡೆದುಕೊಂಡರೆ, ಕುಲದೀಪ್ ಯಾದವ್ ಬೌಲಿಂಗ್ ಶ್ರೇಯಾಂಕದಲ್ಲಿ ನಾಲ್ಕನೇ ಸ್ಥಾನದಲ್ಲಿ ಮುಂದುವರಿದಿದ್ದಾರೆ. ಇದಲ್ಲದೇ ದಕ್ಷಿಣ ಆಫ್ರಿಕಾದ ಕೇಶವ್ ಮಹಾರಾಜ್ ಅಗ್ರ ಸ್ಥಾನದಲ್ಲಿದ್ದಾರೆ. ಆಸ್ಟ್ರೇಲಿಯದ ವೇಗದ ಬೌಲರ್ ಜೋಶ್ ಹೇಜಲ್ ವುಡ್ ಎರಡನೇ ಸ್ಥಾನದಲ್ಲಿದ್ದು, ಲೆಗ್ ಸ್ಪಿನ್ನರ್ ಆಡಮ್ ಝಂಪಾ ಮೂರನೇ ಸ್ಥಾನ ಹೊಂದಿದ್ದಾರೆ.
ಆಲ್‌ರೌಂಡರ್ ವಿಭಾಗ
ಐಸಿಸಿ ಬಿಡುಗಡೆ ಮಾಡಿರುವ ಏಕದಿನ ಆಲ್‌ರೌಂಡರ್ ರ‍್ಯಾಂಕಿಂಗ್ ಟಾಪ್ 10ರಲ ಪಟ್ಟಿಯಲ್ಲಿ ಭಾರತದ ಒಬ್ಬ ಆಟಗಾರನಿಲ್ಲ. ರವೀಂದ್ರ ಜಡೇಜಾ ಅವರು 16ನೇ ಸ್ಥಾನದ್ದಲಿದ್ದರೆ, ಹಾರ್ದಿಕ್ ಪಾಂಡ್ಯ ನಾಲ್ಕು ಸ್ಥಾನ ಕುಸಿದು 26ನೇ ಸ್ಥಾನಕ್ಕೆ ಕುಸಿದಿದ್ದಾರೆ.