India Women vs Sri Lanka Women: ಇಂದು ನಡೆಯುವ 9ನೇ ಆವೃತ್ತಿಯ ಮಹಿಳಾ ಏಷ್ಯಾಕಪ್ ಫೈನಲ್ ಪಂದ್ಯದಲ್ಲಿ ಆತಿಥೇಯ ಶ್ರೀಲಂಕಾ ಮತ್ತು ಹಾಲಿ ಚಾಂಪಿಯನ್ ಭಾರತ ಮುಖಾಮುಖಿಯಾಗಲಿವೆ.
ದಂಬುಲ್ಲಾದ ರಂಗಿರಿ ಇಂಟರ್ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿರುವ ಚಾಂಪಿಯನ್ಸ್ ಪಟ್ಟಕ್ಕಾಗಿ ಎರಡು ತಂಡಗಳು ಸೆನೆಸಾಡಲಿವೆ.
ಮೊದಲ ಸೆಮಿಫೈನಲ್ನಲ್ಲಿ ಬಾಂಗ್ಲಾದೇಶ್ ವಿರುದ್ಧ 10 ವಿಕೆಟ್ಗಳ ಭರ್ಜರಿ ಜಯ ಸಾಧಿಸಿ ಟೀಮ್ ಇಂಡಿಯಾ ಫೈನಲ್ಗೆ ಪ್ರವೇಶಿಸಿದರೆ, ಅತ್ತ ಶ್ರೀಲಂಕಾ ತಂಡವು ಎರಡನೇ ಸೆಮಿಫೈನಲ್ನಲ್ಲಿ ಪಾಕಿಸ್ತಾನ್ ವಿರುದ್ಧ 3 ವಿಕೆಟ್ಗಳ ಗೆಲುವು ದಾಖಲಿಸಿ ಅಂತಿಮ ಹಂತಕ್ಕೇರಿದೆ. ಇಂದು ನಡೆಯಲಿರುವ ಫೈನಲ್ ಪಂದ್ಯದಲ್ಲಿ ಚಾಂಪಿಯನ್ಸ್ ಯಾರಾಗಲಿದ್ದಾರೆ ಎಂಬುದನ್ನು ಅದು ನೋಡಬೇಕಾಗಿದೆ.
ಮಹಿಳಾ ಏಷ್ಯಾಕಪ್ ಶುರುವಾದಾಗಿಂದ ಭಾರತ ತಂಡವು ಪ್ರತಿ ಬಾರಿ ಫೈನಲ್ ಆಡಿದೆ. ಈ ವೇಳೆ 7 ಬಾರಿ ಚಾಂಪಿಯನ್ ಪಟ್ಟ ಅಲಂಕರಿಸುವಲ್ಲಿ ಯಶಸ್ವಿಯಾಗಿದೆ. ಇನ್ನು 2018 ರಲ್ಲಿ ಬಾಂಗ್ಲಾದೇಶ್ ವಿರುದ್ಧ ಮುಗ್ಗರಿಸುವ ಮೂಲಕ ಒಂದು ಬಾರಿ ರನ್ನರ್ ಅಪ್ ಪ್ರಶಸ್ತಿ ಪಡೆದುಕೊಂಡಿದೆ. ಇದೀಗ 9ನೇ ಬಾರಿಗೆ ಪ್ರಶಸ್ತಿ ಸುತ್ತಿಗೆ ಎಂಟ್ರಿ ಕೊಟ್ಟಿರುವ ಟೀಮ್ ಇಂಡಿಯಾ ಈ ಸಲ ಕೂಡ ಟ್ರೋಫಿ ಗೆಲ್ಲುವ ಫೇವರೇಟ್ ತಂಡವಾಗಿ ಗುರುತಿಸಿಕೊಂಡಿದೆ.
ಎದುರಾಳಿ ಶ್ರೀಲಂಕಾವನ್ನು ಕಡೆಗಣಿಸುವಂತಿಲ್ಲ. ಕೂಟದ ಗರಿಷ್ಠ ಸ್ಕೋರರ್ ಎನಿಸಿಕೊಂಡಿರುವ ನಾಯಕಿ ಚಾಮರಿ ಅತಪಟ್ಟು ಪ್ರಚಂಡ ಬ್ಯಾಟಿಂಗ್ ಫಾರ್ಮ್ನಲ್ಲಿದ್ದಾರೆ. ಒಂದು ಶತಕ ಕೂಡ ಬಾರಿಸಿದ್ದಾರೆ. ಆಡಿದ 4 ಪಂದ್ಯಗಳಿಂದ 243 ರನ್ ಕಲೆ ಹಾಕಿದ್ದಾರೆ. ಇವರು ಸಿಡಿದು ನಿಂತರೆ ಪಂದ್ಯದ ಗತಿಯೇ ಬದಲಾಗಬಹುದು. ಹೀಗಾಗಿ ಇವರನ್ನು ಹೆಚ್ಚು ಹೊತ್ತು ಕ್ರೀಸ್ ಆಕ್ರಮಿಸದಂತೆ ಭಾರತೀಯ ಬೌಲರ್ಗಳು ನೋಡಿಕೊಳ್ಳುವ ಅಗತ್ಯವಿದೆ.
ಭಾರತ: ಶಫಾಲಿ ವರ್ಮಾ, ಸ್ಮೃತಿ ಮಂಧಾನ, ಉಮಾ ಚೆಟ್ರಿ, ಹರ್ಮನ್‌ಪ್ರೀತ್ ಕೌರ್ (ನಾಯಕಿ), ಜೆಮಿಮಾ ರಾಡ್ರಿಗಸ್, ರಿಚಾ ಘೋಷ್ (ವಿಕೀ), ದೀಪ್ತಿ ಶರ್ಮಾ, ಪೂಜಾ ವಸ್ತ್ರಾಕರ್, ರಾಧಾ ಯಾದವ್, ತನುಜಾ ಕನ್ವರ್, ರೇಣುಕಾ ಠಾಕೂರ್ ಸಿಂಗ್.
ಶ್ರೀಲಂಕಾ: ವಿಶ್ಮಿ ಗುಣರತ್ನೆ, ಚಾಮರಿ ಅಟಪಟ್ಟು (ನಾಯಕಿ), ಹರ್ಷಿತಾ ಸಮರವಿಕ್ರಮ, ಹಾಸಿನಿ ಪೆರೇರಾ, ಅನುಷ್ಕಾ ಸಂಜೀವನಿ (ವಾಕ್), ಕವಿಶಾ ದಿಲ್ಹಾರಿ, ನೀಲಾಕ್ಷಿ ಡಿ ಸಿಲ್ವಾ, ಇನೋಶಿ ಪ್ರಿಯದರ್ಶನಿ, ಉದೇಶಿಕಾ ಪ್ರಬೋಧನಿ, ಸುಗಂದಿಕಾ ಕುಮಾರಿ, ಅಚಿನಿ ಕುಲಸೂರ್ಯ.