IND vs SL T20: ಶ್ರೀಲಂಕಾ ವಿರುದ್ಧ ಭಾರತಕ್ಕೆ ಭರ್ಜರಿ ಜಯ

By Aishwarya

Published On:

Follow Us

IND vs SL: ಟಿ20 ಸರಣಿ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ಭಾರತ ತಂಡ 43 ರನ್‌ಗಳ ಭರ್ಜರಿ ಗೆಲುವು ಪಡೆಯಿತು. ಆ ಮೂಲಕ ಟೀಮ್‌ ಇಂಡಿಯಾ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ 1-0 ಮುನ್ನಡೆ ಪಡೆದಿದೆ. 

ಪಲ್ಲೆಕೆಲೆ ಇಂಟರ್‌ನ್ಯಾಷನಲ್‌ ಕ್ರೀಡಾಂಗಣದಲ್ಲಿ ಶನಿವಾರ ನಡೆದಿದ್ದ ಮೊದಲನೇ ಟಿ20 ಪಂದ್ಯದಲ್ಲಿ ಸೋತು ಮೊದಲು ಬ್ಯಾಟ್‌ ಮಾಡುವಂತಾಗಿದ್ದ ಭಾರತ ತಂಡ, ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್‌ ನಷ್ಟಕ್ಕೆ 213 ರನ್‌ಗಳನ್ನು ಕಲೆ ಹಾಕಿತು. ಬಳಿಕ ಗುರಿ ಹಿಂಬಾಲಿಸಿದ ಶ್ರೀಲಂಕಾ ತಂಡ, 19.2 ಓವರ್‌ಗಳಿಗೆ 170 ರನ್‌ಗಳಿಗೆ ಆಲ್‌ಔಟ್‌ ಆಯಿತು.

ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾಕ್ಕೆ ಶುಭ್​ಮನ್ ಗಿಲ್ ಮತ್ತು ಯಶಸ್ವಿ ಜೈಸ್ವಾಲ್ ಉತ್ತಮ ಆರಂಭ ನೀಡಿದರು. ಪವರ್‌ಪ್ಲೇನಲ್ಲಿ ಇಬ್ಬರೂ 74 ರನ್ ಗಳಿಸಿದರು. ಗಿಲ್ (34) ರನ್ ಮತ್ತು ಯಶಸ್ವಿ (40) ರನ್ ಕಲೆಹಾಕಿದರು. ಈ ಇಬ್ಬರೂ ಆಟಗಾರರು ಸತತ ಎರಡು ಎಸೆತಗಳಲ್ಲಿ ವಿಕೆಟ್ ಒಪ್ಪಿಸಿ ಪೆವಿಲಿಯನ್‌ಗೆ ಮರಳಿದರು. ಆದರೆ ನಾಯಕ ಸೂರ್ಯಕುಮಾರ್ ಯಾದವ್ ತಮ್ಮದೇ ಶೈಲಿಯಲ್ಲಿ ಸ್ಫೋಟಕ ಬ್ಯಾಟಿಂಗ್ ಮಾಡುವ ಮೂಲಕ ಶ್ರೀಲಂಕಾ ತಂಡವನ್ನು ಮತ್ತೆ ಒತ್ತಡಕ್ಕೆ ತಳ್ಳಿದರು. ಸೂರ್ಯ, ಕೇವಲ 26 ಎಸೆತಗಳಲ್ಲಿ (58) ರನ್ ಗಳಿಸಿ ಔಟಾದರು.
ಇನ್ನೂ ರಿಷಬ್ ಪಂತ್ (49) ರನ್ ಕೊಡುಗೆ ನೀಡಿದರೆ, ಅಕ್ಷರ್ ಪಟೇಲ್ ಇನಿಂಗ್ಸ್​ನ ಕೊನೆಯ ಎಸೆತದಲ್ಲಿ ಸಿಕ್ಸರ್ ಬಾರಿಸುವ ಮೂಲಕ ತಂಡದ ಸ್ಕೋರನ್ನು 213 ಗಳಿಸುವಲ್ಲಿ ಸಹಕರಿಸಿದರು.

ಶ್ರೀಲಂಕಾ ಪರ ಆರಂಭಿಕ ಆಟಗಾರ ಪತುಂ ನಿಸ್ಸಾಂಕಾ (79) ರನ್ ಗಳಿಸಿದರೆ, ಕುಶಾಲ್ ಮೆಂಡಿಸ್ (45) ರನ್ ಗಳಿಸಿದರು. ಕುಸಾಲ್ ಪೆರೆರಾ (20) ರನ್ ಗಳಿಸಿ ಅಕ್ಸರ್ ಪಟೇಲ್ ಗೆ ವಿಕೆಟ್ ಒಪ್ಪಿಸಿದರೆ, (12) ರನ್ ಗಳಿಸಿದ್ದ ಕಮಿಂಡು ಮೆಂಡಿಸ್ ರಿಯಾನ್ ಪರಾಗ್ ಬೌಲಿಂಗ್ ನಲ್ಲಿ ಔಟಾದರು. ಉಳಿದಂತೆ ಇನ್ನಾವ ಆಟಗಾರನೂ ಎರಡಂಕಿ ದಾಟಲಿಲ್ಲ ಕಾರಣ 19.1ಕ್ಕೆ ಆಲೌಟ್ ಆಯಿತು. 

ಭಾರತದ ಪರ ಬೌಲಿಂಗ್ ಮಾಡಿದ ರಿಯಾನ್ ಪರಾಗ್ 3 ವಿಕೆಟ್ ಪಡೆದರೆ, ಅರ್ಶ್ ದೀಪ್ ಸಿಂಗ್ ಮತ್ತು ಅಕ್ಸರ್ ಪಟೇಲ್ ತಲಾ 2 ವಿಕೆಟ್, ಸಿರಾಜ್ ಮತ್ತು ರವಿ ಬಿಷ್ಣೋಯ್ ತಲಾ 1 ವಿಕೆಟ್ ಪಡೆದರು.

About the Author

ನಮಸ್ತೆ, ಐಶ್ವರ್ಯ ಚಟ್ನಹಳ್ಳಿ, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಎಂ.ಎ ಪದವಿ. ಪ್ರಸ್ತುತ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಆಪ್ರೆಂಟಿಸ್ ಆಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಜೊತೆಜೊತೆಗೆ khnewstimes.com ನಲ್ಲಿ ಕಂಟೆಂಟ್ ರೈಟರ್ ಆಗಿ ಕೆಲಸ ಮಾಡುತಿದ್ದೇನೆ.

For Feedback - feedback@khnewstimes.com

Leave a Comment

Follow