Women’s Asia Cup 2024: ಮಹಿಳಾ ಏಷ್ಯಾ ಕಪ್ ಟಿ20 ಕ್ರಿಕೆಟ್ ಟೂರ್ನಿಯಲ್ಲಿ ಭಾರತ ಭರ್ಜರಿ ಪ್ರದರ್ಶನ ನೀಡಿದ್ದು, 82 ರನ್‌ಗಳಿಂದ ನೇಪಾಳ ತಂಡವನ್ನು ಮಣಿಸಿ, ಸೆಮಿಫೈನಲ್ ಪ್ರವೇಶಿಸಿದೆ. ಎ ಗುಂಪಿನಲ್ಲಿ ಆಡಿದ ಮೂರು ಪಂದ್ಯಗಳನ್ನು ಗೆದ್ದ ಭಾರತ ಟೂರ್ನಿಯ ಸೆಮಿಫೈನಲ್ ಹಂತವನ್ನು ಪ್ರವೇಶಿಸಿದೆ.
ಶ್ರೀಲಂಕಾದ ರಂಗಿ ದಂಬುಲ್ಲಾ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ 20 ಓವರ್‌ಗಳಲ್ಲಿ 3 ವಿಕೆಟ್‌ಗೆ 178 ರನ್ ಗಳಿಸಿತು. ತಂಡದ ಪರ ಆರಂಭಿಕ ಆಟಗಾರ್ತಿ ಶೆಫಾಲಿ ವರ್ಮಾ ಸ್ಫೋಟಕ ಇನ್ನಿಂಗ್ಸ್ ಕಟ್ಟಿದರು. ಶೆಫಾಲಿ ವರ್ಮಾ 48 ಎಸೆತಗಳಲ್ಲಿ (81) ರನ್ ಗಳಿಸಿದರು. ಈ ಪಂದ್ಯದಲ್ಲಿ ದಯಾಲನ್ ಹೇಮಲತಾ ಅವರು ಶೆಫಾಲಿ ವರ್ಮಾ ಜೊತೆಗೂಡಿ (47) ರನ್ ಗಳಿಸಿದರು. ಕೊನೆಯಲ್ಲಿ ಜೆಮಿಮಾ ರೋಡ್ರಿಗಸ್ ಅಜೇಯ 28 ರನ್‌ಗಳ ಕೊಡುಗೆ ನೀಡಿದರು.
ಬೌಲಿಂಗ್ ಬಳಿಕ ನೇಪಾಳ ತಂಡ ಬ್ಯಾಟಿಂಗ್‌ನಲ್ಲೂ ಸೋತು ಸುಣ್ಣವಾಯಿತು. 179 ರನ್‌ಗಳ ಗುರಿಗೆ ಉತ್ತರವಾಗಿ ನೇಪಾಳ ತಂಡ 20 ಓವರ್‌ಗಳಲ್ಲಿ 9 ವಿಕೆಟ್‌ಗೆ 96 ರನ್ ಗಳಿಸಲಷ್ಟೇ ಶಕ್ತವಾಯಿತು. ಟೀಮ್ ಇಂಡಿಯಾ ಪರ ದೀಪ್ತಿ ಶರ್ಮಾ 3, ಅರುಂಧತಿ ರೆಡ್ಡಿ ಹಾಗೂ ರಾಧಾ ಯಾದವ್ ತಲಾ ಎರಡು ವಿಕೆಟ್ ಕಬಳಿಸಿದರು.