India vs England semi final 2024: ಟಿ20 ವಿಶ್ವಕಪ್ ನ ಸಮಿಫೈನಲ್ ನಲ್ಲಿ ಭಾರತ ಹಾಲಿ ಚಾಂಪಿಯನ್ ಇಂಗ್ಲೆಂಡ್ ತಂಡವನ್ನು 68 ರನ್‌ಗಳಿಂದ ಸೋಲಿಸುವ ಮೂಲಕ ಫೈನಲ್‌ಗೆ ಲಗ್ಗೆ ಇಟ್ಟಿತು.
ಗಯಾನಾದ ಪ್ರಾವಿಡೆನ್ಸ್ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಮಳೆಯ ಅಡಚಣೆಯ ನಡುವೆ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಮೊದಲು ಬ್ಯಾಟಿಂಗ್ ಬೀಸಿದ ಭಾರತ ತಂಡವು ರೋಹಿತ್ ಶರ್ಮಾ ಅವರ ಅರ್ಧಶತಕ ಮತ್ತು ಸೂರ್ಯಕುಮಾರ್ ಯಾದವ್ ಅದ್ಬುತ ಬ್ಯಾಟಿಂಗ್ ಪ್ರದರ್ಶನದಿಂದ 7 ವಿಕೆಟ್ ನಷ್ಟಕ್ಕೆ 171 ರನ್ ಗಳಿಸಿತು.
ಈ ಗುರಿ ಬೆನ್ನಟ್ಟಿದ ಇಂಗ್ಲೆಂಡ್ ತಂಡ 16.4 ಓವರ್‌ಗಳಲ್ಲಿ 103 ರನ್‌ಗಳಿಗೆ ಆಲೌಟ್ ಆಯಿತು. ಇದರೊಂದಿಗೆ ಟೀಂ ಇಂಡಿಯಾ ವಿಶ್ವಕಪ್‌ನ ಫೈನಲ್‌ಗೆ ಲಗ್ಗೆ ಇಟ್ಟಿದ್ದು, ಇದರ ಜೊತೆಗೆ ಅಜೇಯ ತಂಡವಾಗಿ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ನಡೆಯಲಿದೆ.
ಬ್ಯಾಟಿಂಗ್ ನಲ್ಲಿ ಅಮೋಘ ಪ್ರದರ್ಶನ ನೀಡಿದ್ದ ಭಾರತ ತಂಡ ಬೌಲಿಂಗ್ ನಲ್ಲೂ ಉತ್ತಮ ಪ್ರದರ್ಶನ ನೀಡಿ ಇಂಗ್ಲೆಂಡ್ ತಂಡವನ್ನು ಕಾಡಿತು. ಆರಂಭದಿಂದಲೂ ಆಕ್ರಮಣಕಾರಿ ಬೌಲಿಂಗ್ ಪ್ರದರ್ಶನ ನೀಡಿದ ಭಾರತ ತಂಡ 26ರನ್ ಗೆ ಇಂಗ್ಲೆಂಡ್ ನ ಮೊದಲ ವಿಕೆಟ್ ಪಡೆಯಿತು.
ಅರಂಭಿಕ ಅಟದಲ್ಲಿ ಭರ್ಜರಿ ಬ್ಯಾಟಿಂಗ್ ನಡೆಸುವ ಸೂಚನೆ ನೀಡಿದ್ದ ಇಂಗ್ಲೆಂಡ್ ನಾಯಕ ಜಾಸ್ ಬಟ್ಲರ್ ರನ್ನು ಅಕ್ಸರ್ ಪಟೇಲ್ ಔಟ್ ಮಾಡಿದರು. ನತಂರ ಇಂಗ್ಲೆಂಡ್ ನ ಒಂದೂದೆ ವಿಕೆಟ್ ಗಳು ಕಳೆದುಕೊಳ್ಳುತ್ತಾ ಸಾಗಿತು. ಮೊಯಿನ್ ಅಲಿ (8) ರನ್ ಗಳಿಸಿದರೆ, ಜಾನಿ ಬೇರ್ ಸ್ಟೋ ಶೂನ್ಯ ಸುತ್ತಿದರು.
ಹ್ಯಾರಿ ಬ್ರೂಕ್ (25) ರನ್, ಲಿವಿಂಗ್ ಸ್ಟೋನ್ (11) ರನ್, ಸ್ಯಾಮ್ ಕರನ್ (2), ಜೋರ್ಡನ್ (1) ರನ್, ಅದಿಲ್ ರಷೀದ್ ಸೂರ್ಯ ಕುಮಾರ್ ಯಾದವ್ ರ ಅಮೋಘ ರನೌಟ್ ಗೆ ಬಲಿಯಾದರು.
ಇಂಗ್ಲೆಂಡ್ ಪರ ಕ್ರೀಸ್ ಜೋರ್ಡನ್ 3 ವಿಕೆಟ್ ಪಡೆದರೆ, ಅದಿಲ್ ರಷೀದ್, ಸ್ಯಾಮ್ ಕರನ್, ಜೋಫ್ರಾ ಆರ್ಚರ್ ಮತ್ತು ಟಾಪ್ಲೆ ತಲಾ 1 ವಿಕೆಟ್ ಪಡೆದರು.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾಗೆ ಎಂದಿನಂತೆ ನಿರೀಕ್ಷಿತ ಆರಂಭ ಸಿಗಲಿಲ್ಲ. ಟೀಂ ಇಂಡಿಯಾ 19 ರನ್ ಗಳಿಸಿದ್ದಾಗ ವಿರಾಟ್ ಕೊಹ್ಲಿ 9 ರನ್ ಗಳಿಸಿ ಔಟಾದರು. ಆ ಬಳಿಕ ರಿಷಬ್ ಪಂತ್ ಕೂಡ 4 ರನ್ ಗಳಿಸಿ ಪೆವಿಲಿಯನ್ಗೆ ಮರಳಿದರು. ಹೀಗಾಗಿ ಟೀಂ ಇಂಡಿಯಾ ಮೊದಲ 6 ಓವರ್‌ಗಳಲ್ಲಿ 40 ರನ್ ಕಲೆಹಾಕುವಷ್ಟರಲ್ಲಿ ಪ್ರಮುಖ 2 ವಿಕೆಟ್ ಕಳೆದುಕೊಂಡಿತು. ಆದರೆ ಆ ನಂತರ ರೋಹಿತ್ ಶರ್ಮಾ ಮತ್ತು ಸೂರ್ಯಕುಮಾರ್ ಯಾದವ್ ಇಬ್ಬರೂ ಟೀಮ್ ಇಂಡಿಯಾದ ಇನ್ನಿಂಗ್ಸ್ ನಿಭಾಯಿಸಿದಲ್ಲದೆ, ಈ ಇಬ್ಬರೂ 73 ರನ್‌ಗಳ ಜೊತೆಯಾಟವನ್ನು ಹಂಚಿಕೊಂಡರು. ನಂತರ ರವೀಂದ್ರ ಜಡೇಜಾ ಔಟಾಗದೆ 17 ರನ್ ಬಾರಿಸಿದರೆ, ಹಾರ್ದಿಕ್ ಪಾಂಡ್ಯ (23) ರನ್, ಅಕ್ಷರ್ ಪಟೇಲ್ (10) ,ಅರ್ಷದೀಪ್ ಸಿಂಗ್ ಅಜೇಯ (1) ರನ್‌ಗಳ ಕಾಣಿಕೆ ನೀಡಿದರು.
ಇನ್ನು ಈ ಪಂದ್ಯದಲ್ಲಿ ಭಾರತದ ಪರ ಭರ್ಜರಿ ಬೌಲಿಂಗ್ ಪ್ರದರ್ಶನ ನೀಡಿದ ಕುಲದೀಪ್ ಯಾದವ್ ಮತ್ತು ಅಕ್ಸರ್ ಪಟೇಲ್ ಜೋಡಿ ತಲಾ 3 ವಿಕೆಟ್ ಪಡೆದು ಭಾರತ ಗೆಲುವಿನಲ್ಲಿ ಮಹತ್ತರ ಪಾತ್ರ ವಹಿಸಿದರು. ಜಸ್ ಪ್ರೀತ್ ಬುಮ್ರಾ 2 ವಿಕೆಟ್ ಪಡೆದರು.
ಇಂದಿನ ಗೆಲುವಿನೊಂದಿಗೆ ಭಾರತ ತಂಡವು 10 ವರ್ಷಗಳ ಬಳಿಕ ಫೈನಲ್ ಗೇರಿದ್ದು, ಬಾರ್ಬೋಡಾಸ್ ನಲ್ಲಿ ನಡೆಯಲಿರುವ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು ಎದುರಿಸಲಿದೆ.