India vs South Africa final: ಭಾರತೀಯ ಕ್ರಿಕೆಟ್ ತಂಡವು 17 ವರ್ಷಗಳ ಬಳಿಕ 140 ಕೋಟಿ ಭಾರತೀಯರ ಕನಸು ನೆನಸು ಮಾಡಿದೆ. 9ನೇ ಆವೃತ್ತಿಯ ಟಿ20 ವಿಶ್ವಕಪ್ನ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು 7 ರನ್ಗಳಿಂದ ಸೋಲಿಸುವ ಮೂಲಕ ಟೀಂ ಇಂಡಿಯಾ 2ನೇ ಬಾರಿಗೆ ಟಿ20 ವಿಶ್ವಕಪ್ ಎತ್ತಿಹಿಡಿದಿದೆ.
ವೆಸ್ಟ್‌ಇಂಡೀಸ್‌ನ ಬಾರ್ಬಡೋಸ್ ಮೈದಾನದಲ್ಲಿ ನಡೆದ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಅದ್ಬುತ ಬೌಲಿಂಗ್ ಪ್ರದರ್ಶನ ನೀಡಿ ಭಾರತವು ಚಾಂಪಿಯನ್ ಪಟ್ಟಕ್ಕೇರಿದೆ.
ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದರು. ಮೊದಲ ಓವರ್‌ನಲ್ಲಿ ಮೂರು ಬೌಂಡರಿ ಗಳಿಸಿದ ವಿರಾಟ್ ಕೊಹ್ಲಿ ಉತ್ತಮ ಲಯದಲ್ಲಿ ಕಂಡುಬಂದರು. ಅದರೆ 2 ನೇ ಓವರ್ ನಲ್ಲಿ ನಾಯಕ ರೋಹಿತ್ ಶರ್ಮಾ ಮತ್ತು ರಿಷಬ್ ಪಂತ್ ಎಡಗೈ ಸ್ಪಿನ್ನರ್ ಕೇಶವ್ ಮಹಾರಾಜ್ ಗೆ ವಿಕೆಟ್ ಒಪ್ಪಿಸಿದರು. ವಿರಾಟ್ ಕೊಹ್ಲಿ ಸಮಯೋಚಿತ ಅರ್ಧಶತಕದ (76) ನೆರವಿನಿಂದ ಭಾರತ ತಂಡವು ನಿಗದಿತ 20 ಓವರ್‌ಗಳಲ್ಲಿ ಏಳು ವಿಕೆಟ್ ನಷ್ಟಕ್ಕೆ 176 ರನ್ ಗಳಿಸಿತ್ತು.
ಈ ಸಮಯದಲ್ಲಿ ಅಕ್ಷರ್ ಪಾಟೀಲ್ ವಿರಾಟ ಕೊಹ್ಲಿ ಅವರ ಜೊತೆಗೂಡಿ ತಂಡಕ್ಕೆ ಅಸರೆಯಾದರು. 31 ಎಸತಗಳಲ್ಲಿ (47) ರನ್ ಗಳಿಸುವ ಮೂಲಕ ತಂಡವು ಉತ್ತಮ ರನ್ ಗಳಿಸುವಲ್ಲಿ ಸಹಾಕರಿಸಿದರು. ಶಿವಂ ದುಬೆ (27) ರನ್, ಹಾರ್ದಿಕ್ ಪಾಂಡ್ಯ (5) ಹಾಗೂ ರವೀಂದ್ರ ಜಡೇಜ (2) ರನ್ ಗಳಿಸಿದರು.
ಭಾರತ ನೀಡಿದ್ದ 176 ರನ್‌ಗಳ ಗುರಿ ಬೆನ್ನತ್ತಿದ್ದ ದಕ್ಷಿಣ ಆಫ್ರಿಕಾಕ್ಕೆ ಉತ್ತಮ ಆರಂಭ ಸಿಗಲಿಲ್ಲ. ನಿಗದಿತ ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 168 ರನ್ ಗಳಿಸಲಷ್ಟೇ ಶಕ್ತವಾಯಿತು. ಪಂದ್ಯದ ಎರಡನೇ ಓವರ್‌ನಲ್ಲಿಯೇ ಜಸ್ಪ್ರೀತ್ ಬುಮ್ರಾ ಅವರ ಅಚ್ಚರಿಯ ಔಟ್‌ಸ್ವಿಂಗ್‌ನಲ್ಲಿ ರೀಜಾ ಹೆಂಡ್ರಿಕ್ಸ್ ಬೌಲ್ಡ್ ಆದರು. ದಕ್ಷಿಣ ಆಫ್ರಿಕಾದ ನಾಯಕ ಏಡನ್ ಮಾರ್ಕ್ರಾಮ್ ಕೂಡ ಹೆಚ್ಚು ಹೊತ್ತು ನಿಲ್ಲಲು ಸಾಧ್ಯವಾಗದೆ ಅರ್ಷದೀಪ್ ಸಿಂಗ್ ಬೌಲಿಂಗ್ನಲ್ಲಿ ಪೆವಿಲಿಯನ್ ಸೇರಿಕೊಂಡರು. ನತಂರ ಕ್ವಿಂಟನ್ ಡಿ ಕಾಕ್ ಮತ್ತು ಟ್ರಿಸ್ಟಾನ್ ಸ್ಟಬ್ಸ್ ಪ್ರತಿದಾಳಿ ನಡೆಸಿ ತಂಡವನ್ನು 9 ನೇ ಓವರ್ ಅಂತ್ಯಕ್ಕೆ 70 ರನ್‌ಗಳ ಗಡಿ ದಾಟಿಸಿದರು. ಅದರೆ ಅಕ್ಷರ್ ಪಟೇಲ್, ಸ್ಟಬ್ಸ್ ಅವರ ವಿಕೆಟ್ ತೆಗೆಯುವ ಮೂಲಕ ಮೂರನೇ ಯಶಸ್ಸು ತಂದುಕೊಟ್ಟರು.
ಇದಾದ ಬಳಿಕ ಕ್ಲಾಸನ್ ಮತ್ತು ಡಿ ಕಾಕ್ ಜೊತೆಯಾಟ ನಡೆಸಿ ತಂಡವನ್ನು 100 ರನ್‌ಗಳ ಗಡಿ ದಾಟಿಸಿ ಮೈದಾನದಲ್ಲಿ ರನ್ ಮಳೆಯನ್ನೇ ಹಾರಿಸಿದರು.ಆದರೆ ಅರ್ಷದೀಪ್, ಡಿ ಕಾಕ್ ವಿಕೆಟ್ ಪಡೆಯುವ ಮೂಲಕ ಪಂದ್ಯದ ದಿಕ್ಕನ್ನೇ ಬದಲಿಸಿದರು. ನತಂರ ಸ್ಫೋಟಕ ದಾಂಡಿಕ ಹೆನ್ರಿಚ್ ಕ್ಲಾಸೆನ್ 23 ಎಸೆತಗಳಲ್ಲಿ ಅರ್ಧಶತಕ ಸಿಡಿಸಿದ ಕ್ಲಾಸನ್, ದಕ್ಷಿಣ ಆಫ್ರಿಕಾಕ್ಕೆ ಗೆಲುವು ಖಚಿತ ಎನಿಸುವಂತೆ ಮಾಡಿದರು. ಈ ವೇಳೆ ಹಾರ್ದಿಕ್ 17ನೇ ಓವರ್‌ನ ಮೊದಲ ಎಸೆತದಲ್ಲಿ ಕ್ಲಾಸನ್ ವಿಕೆಟ್ ಪಡೆದು, ಆ ಓವರ್‌ನಲ್ಲಿ ಕೇವಲ 4 ರನ್ ನೀಡುವ ಮೂಲಕ ಆಫ್ರಿಕಾ ತಂಡದ ಸಂಕಷ್ಟ ಹೆಚ್ಚಿಸಿದರು.ಕೊನೆಯ 2 ಓವರ್‌ಗಳಲ್ಲಿ ದಕ್ಷಿಣ ಆಫ್ರಿಕಾಕ್ಕೆ 20 ರನ್ ಅಗತ್ಯವಿತ್ತು. 19ನೇ ಓವರ್ ಬೌಲ್ ಮಾಡಿದ ಅರ್ಷದೀಪ್ ಕೇವಲ 4 ರನ್ ನೀಡಿದರು. ನಂತರ 20ನೇ ಓವರ್ ಬೌಲ್ ಮಾಡುವ ಜವಬ್ದಾರಿ ಹೊತ್ತ ಹಾರ್ದಿಕ್ ಮೊದಲ ಎಸೆತದಲ್ಲಿ ಡೇವಿಡ್ ಮಿಲ್ಲರ್ ಅವರ ವಿಕೆಟ್ ಪಡೆಯುವ ಮೂಲಕ ತಂಡದ ಗೆಲುವಿಗೆ ದಾರಿ ಮಾಡಿದರು. ಈ ಓವರ್‌ನಲ್ಲಿ ಹಾರ್ದಿಕ್ ಕೇವಲ 8 ರನ್ ನೀಡಿ ಟೀಂ ಇಂಡಿಯಾಗೆ ಜಯ ತಂದುಕೊಟ್ಟರು.
ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.