Paris Olympics 2024: 33ನೇ ಆವೃತ್ತಿಯ ಪ್ಯಾರಿಸ್ ಒಲಿಂಪಿಕ್ಸ್​ಗೆ ಅದ್ಧೂರಿ ಚಾಲನೆ

By Aishwarya

Published On:

Follow Us

Paris Olympics 2024: ಜಗತ್ತಿನ ಅತಿ ದೊಡ್ಡ ಹಾಗೂ ಅದ್ಧೂರಿ ಕ್ರೀಡಾಜಾತ್ರೆ ಒಲಿಂಪಿಕ್ಸ್‌ಗೆ ವರ್ಣರಂಜಿತ ಚಾಲನೆ ಸಿಕ್ಕಿದೆ. ಫ್ರಾನ್ಸ್‌ನ ರಾಜಧಾನಿ, ಪ್ರೇಮನಗರಿ ಪ್ಯಾರಿಸ್‌ ನಗರದ​ಲ್ಲಿ 33ನೇ ಆವೃತ್ತಿಯ ಒಲಿಂಪಿಕ್ಸ್‌​ ಉದ್ಘಾಟನೆಗೊಂಡಿದೆ. ಜುಲೈ 26ರ ರಾತ್ರಿ 11 ಗಂಟೆಯಿಂದ ಚತುರ್ವಾರ್ಷಿಕ ಕ್ರೀಡಾಕೂಟ ಆರಂಭವಾಗಿದೆ. ದಾಖಲೆಯ ಮೂರನೇ ಬಾರಿಗೆ ನಗರದಲ್ಲಿ ಒಲಿಂಪಿಕ್ಸ್ ಕ್ರೀಡಾ ಕೂಟ ನಡೆಯುತ್ತಿದ್ದು, ಕ್ರೀಡಾಕೂಟದ ಇತಿಹಾಸದಲ್ಲೇ ಮೊದಲ ಬಾರಿಗೆ ನೀರಿನ ಮೇಲೆ ಆರಂಭೋತ್ಸವ ನಡೆದಿದೆ. 

ಪ್ಯಾರಿಸ್‌ ಜೀವನದಿ ಸೀನ್ ಕ್ರೀಡಾಪಟುಗಳ ಮೆರವಣಿಗೆ ಆಯೋಜಿಸಲಾಗಿತ್ತು ಇಲ್ಲಿ ಪರೇಡ್ ಮೂಲಕ ಅಧಿಕೃತ ಚಾಲನೆ ನೀಡಲಾಯಿತು.

ಈ ಪರೇಡ್​ನಲ್ಲಿ ಭಾರತವನ್ನು ಪಿವಿ ಸಿಂಧು ಹಾಗೂ ಶರತ್ ಕಮಲ್ ಮುನ್ನಡೆಸಿದ್ದರು. ಭಾರತೀಯ ಕ್ರೀಡಾಪಟುಗಳು ದೇಶಿ ಉಡುಗೆಯಲ್ಲಿ ಪಾಲ್ಗೊಂಡು ಗಮನ ಸೆಳೆದರು. ಆಸ್ಟರ್ಲಿಟ್ಜ್ ಸೇತುವೆಯ ಭಾಗದಿಂದ ಶುರುವಾದ ಪರೇಡ್ ಆಫ್ ನೇಷನ್ಸ್ ಮೆರವಣಿಯಲ್ಲಿ 85 ದೋಣಿಗಳು 6,800 ಕ್ಕೂ ಹೆಚ್ಚು ಕ್ರೀಡಾಪಟುಗಳು ಕಾಣಿಸಿಕೊಂಡಿದ್ದರು. ಪ್ರತಿ ದೇಶಗಳ ಕ್ರೀಡಾಪಟುಗಳ ಆಗಮನದ ವೇಳೆ ನೆರೆದಿದ್ದ ಪ್ರೇಕ್ಷಕರಿಂದ ಹರ್ಷೋದ್ಗಾರ ಮೊಳಗಿತು.

ಸುಪ್ರಸಿದ್ಧ ಕಲಾವಿದರಿಂದ ನೃತ್ಯ, ಗಾಯನ ಕಾರ್ಯಕ್ರಮಗಳು ಗಮನ ಸೆಳೆದವು. ಒಲಿಂಪಿಕ್ ಕೂಟದ ಪದಕ ರಚನೆ, ಕ್ರೀಡಾಂಗಣಗಳ ನಿರ್ಮಾಣದ ಕುರಿತ ಸಾಕ್ಷ್ಯಚಿತ್ರಗಳು ರೋಮಾಂಚನಗೊಳಿಸಿದವು. ಫ್ರೆಂಚ್ ಜಾನಪದ ಕಲೆಗಳು, ಪಾರಂಪರಿಕ ಸೊಗಡು, ಸಾಂಸ್ಕೃತಿಕ ಹಿರಿಮೆ ಮತ್ತು ತಂತ್ರಜ್ಞಾನದ ವೈಭವಗಳನ್ನು ತಂಡಗಳು ಪ್ರಸ್ತುತಪಡಿಸಿದವು

11 ಸ್ಪರ್ಧೆಗಳಲ್ಲಿ ಭಾರತೀಯರು ಕಣಕ್ಕೆ

ಪ್ಯಾರಿಸ್ ಒಲಿಂಪಿಕ್ಸ್​ನಲ್ಲಿ ಭಾರತದ 117 ಕ್ರೀಡಾಪಟುಗಳು ಕಾಣಿಸಿಕೊಂಡಿದ್ದಾರೆ. ಈ ಕ್ರೀಡಾಪಟುಗಳು ಒಟ್ಟು 69 ಸ್ಪರ್ಧೆಗಳಲ್ಲಿ ಕಣಕ್ಕಿಳಿಯಲಿದ್ದಾರೆ. ಇವರಲ್ಲಿ 47 ಮಹಿಳಾ ಸ್ಪರ್ಧಿಗಳಿರುವುದು ವಿಶೇಷ. ಈಗಾಗಲೇ ಒಲಿಂಪಿಕ್ಸ್ ಅಭಿಯಾನ ಆರಂಭಿಸಿರುವ ಭಾರತೀಯರು ಇಂದು ಮತ್ತಷ್ಟು ಸ್ಪರ್ಧೆಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ.

About the Author

ನಮಸ್ತೆ, ಐಶ್ವರ್ಯ ಚಟ್ನಹಳ್ಳಿ, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಎಂ.ಎ ಪದವಿ. ಪ್ರಸ್ತುತ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಆಪ್ರೆಂಟಿಸ್ ಆಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಜೊತೆಜೊತೆಗೆ khnewstimes.com ನಲ್ಲಿ ಕಂಟೆಂಟ್ ರೈಟರ್ ಆಗಿ ಕೆಲಸ ಮಾಡುತಿದ್ದೇನೆ.

For Feedback - feedback@khnewstimes.com

Leave a Comment

Follow