Paris Olympics 2024: ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ(Paris Olympics) ಭಾರತ ಸ್ವಪ್ನಿಲ್ ಕುಸಾಲೆ ಪುರುಷರ 50 ಮೀ. ರೈಫಲ್ 3 ಪೊಸಿಶನ್‌ನಲ್ಲಿ ಭಾರತಕ್ಕೆ ಕಂಚಿನ ಪದಕ ಗೆದ್ದಿದ್ದಾರೆ. ಈ ಮೂಲಕ ಭಾರತದ ಪದಕ ಸಂಖ್ಯೆ ಮೂರಕ್ಕೇರಿದೆ.
ಏರ್ ಪಿಸ್ತೂಲ್ ಶೂಟಿಂಗ್ನಲ್ಲಿ ಮನು ಭಾಕರ್ ಕಂಚಿನ ಪದಕ ಗೆದ್ದಿದ್ದರು. ಇದರ ಬೆನ್ನಲ್ಲೇ ಮಿಶ್ರ ಏರ್ ಪಿಸ್ತೂಲ್ ಮಿಶ್ರ ಸ್ಪರ್ಧೆಯಲ್ಲಿ ಸರಬ್ಜೋತ್ ಸಿಂಗ್ ಜೊತೆಗೂಡಿ ಮನು ಭಾಕರ್ 2ನೇ ಕಂಚಿನ ಪದಕಕ್ಕೆ ಕೊರೊಳೊಡ್ಡಿದ್ದರು. ಇದೀಗ ಭಾರತದ ಸ್ವಪ್ನಿಲ್ ಕುಸಾಲೆ ದೇಶಕ್ಕೆ ಮೂರನೇ ಪದಕ ತಂದು ಕೊಟ್ಟಿದ್ದಾರೆ.
ಇಂದು ನಡೆದ 50 ಮೀ. ರೈಫಲ್ 3 ಪೊಸಿಶನ್ ಫೈನಲ್ ಪಂದ್ಯದಲ್ಲಿ ಸ್ವಪ್ನಿಲ್ ಅವರು 451.4 ಅಂಕ ಗಳಿಸಿ ಕಂಚಿನ ಪದಕ ತಮ್ಮದಾಗಿಸಿಕೊಂಡರು. ಸ್ವಪ್ನಿಲ್ ಫೈನಲ್ ಪಂದ್ಯದ ಪ್ರೋನ್‌ನಲ್ಲಿ 156.8, ನೀಲಿಂಗ್‌ನಲ್ಲಿ 153.3 ಮತ್ತು ಸ್ಟ್ಯಾಂಡಿಂಗ್‌ನಲ್ಲಿ 195 ಅಂಕಗಳಿಸಿ ಮೂರನೇ ಸ್ಥಾನ ಪಡೆದು ಕಂಚಿನ ಪದಕ್ಕಕೆ ಕೊರಳೊಡ್ಡಿದರು. 463.6 ಅಂಕ ಗಳಿಸಿದ ಚೀನಾದ ಲಿಯು ಯುಕುನ್ ಚಿನ್ನ ಮತ್ತು ಉಕ್ರೇನ್ನ ಕುಲಿಶ್ ಸೆರ್ಹಿ(461.3) ಬೆಳ್ಳಿ ಪದಕ ಗೆದ್ದರು.
ಫೈನಲ್ ಪ್ರವೇಶಿಸಿದ ಬಳಿಕ ಮಾಧ್ಯಮದ ಜತೆ ಮಾತನಾಡಿದ್ದ ಸ್ವಪ್ನಿಲ್, ನನ್ನ ಮತ್ತು ಧೋನಿಯವರ ಜೀವನದಲ್ಲಿ ಹಲವು ಸಾಮ್ಯತೆಗಳು ಇವೆ. ನಾನು ಅವರ ಅಪ್ಪಟ ಅಭಿಮಾನಿ. ಅವರ ಬಯೋಪಿಕ್ ನೋಡಿಯೇ ನಾನು ಶೂಟಿಂಗ್ನಲ್ಲಿ ಏನಾದರೂ ಸಾಧನೆ ಮಾಡಬೇಕು ಎಂದು ನಿರ್ಧರಿಸಿದ್ದು. ಅವರಂತೆಯೇ ನನ್ನದೂ ಕೂಡ ಶಾಂತಚಿತ್ತದ ಸ್ವಾಭಾವ. ನಾನು ಕೂಡ ರೈಲ್ವೆ ಟಿಕೆಟ್ ಕಲೆಕ್ಟರ್ ಆಗಿದ್ದೇನೆ’ ಎಂದು ಹೇಳಿದ್ದರು.