Rohit Sharma Retire T20: ಭಾರತ ತಂಡದ ನಾಯಕ ಹಾಗೂ ಸ್ಟಾರ್ ಬ್ಯಾಟರ್ ರೋಹಿತ್ ಶರ್ಮಾ (Rohit Sharma) ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಘೋಷಿಸಿದ್ದಾರೆ. ಈ ಬಾರಿಯ ಟಿ20 ವಿಶ್ವಕಪ್ ನಲ್ಲಿ ಅದ್ಬುತ ಪ್ರದರ್ಶನ ನೀಡಿದ ರೋಹಿತ್ ಭಾರತೀಯ ಕ್ರಿಕೆಟ್ ತಂಡಕ್ಕೆ 13 ವರ್ಷಗಳ ಬಳಿಕ ವಿಶ್ವಕಪ್ ತರುವಲ್ಲಿ ಪ್ರಮುಖ ನಾಯಕನ ಪಾತ್ರ ವಹಿಸಿದ್ದರು.
ಕೊಹ್ಲಿ ಟಿ20 ವಿಶ್ವಕಪ್ ಫೈನಲ್ ಪಂದ್ಯ ಶ್ರೇಷ್ಠ ಪ್ರಶಸ್ತಿ ಸ್ವೀಕರಿಸುವ ವೇಳೆ ತಮ್ಮ ನಿವೃತ್ತಿಯ ವಿಷಯವನ್ನು ಘೋಷಿಸಿದರೆ ರೋಹಿತ್ ಶರ್ಮಾ ಗೆಲುವಿನ ಬಳಿಕ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು “ಇದು ನನ್ನ ಕೊನೆಯ ಪಂದ್ಯವೂ ಆಗಿತ್ತು. ಪ್ರಾಮಾಣಿಕವಾಗಿ, ನಾನು ಈ ಸ್ವರೂಪವನ್ನು ಆಡಲು ಪ್ರಾರಂಭಿಸಿದ ಸಮಯದಿಂದ ನಾನು ಸಿಕ್ಕಾಪಟ್ಟೆ ಖುಷಿಯಲ್ಲಿದ್ದೆ. ಈ ಸ್ವರೂಪಕ್ಕೆ ವಿದಾಯ ಹೇಳಲು ಇದಕ್ಕಿಂತ ಉತ್ತಮ ಸಮಯವಿಲ್ಲ. ನಾನು ಈ ಮಾದರಿಯ ಪ್ರತಿಯೊಂದು ಕ್ಷಣವನ್ನು ಪ್ರೀತಿಸುತ್ತೇನೆ. ನಾನು ಈ ಸ್ವರೂಪದಲ್ಲಿ ಆಡುವ ಮೂಲಕ ನನ್ನ ಭಾರತ ವೃತ್ತಿಜೀವನವನ್ನು ಪ್ರಾರಂಭಿಸಿದೆ. ನಾನು ಈಗ ಏನು ಮಾಡಿದ್ದೇನೋ ಅದನ್ನೇ ಮಾಡಲು ಬಯಸಿದ್ದೆ. ಕಪ್ ಗೆದ್ದು ವಿದಾಯ ಹೇಳಿದೆ” ಎಂದು ತಿಳಿಸಿದರು.
ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.