Ravindra Jadeja Retirement T20: ಐಸಿಸಿ ವಿಶ್ವಕಪ್ ಗೆದ್ದ ಖುಷಿಯಲ್ಲಿರುವ ಕ್ರಿಕೆಟ್ ಪ್ರೇಮಿಗಳಿಗೆ ಈಗಾಗಲೇ ರೋಹಿತ್ ಮತ್ತು ವಿರಾಟ್ ಕೊಹ್ಲಿ ಟಿ20 ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದರು. ಅದರಂತೆಯೇ ಭಾರತೀಯ ಕ್ರಿಕೆಟ್ ತಂಡದ ಆಲ್ ಗ್ರೌಂಡರ್ ರವೀಂದ್ರ ಜಡೇಜಾ ಅಂತರಾಷ್ಟ್ರೀಯ ಟಿ20 ಕ್ರಿಕೆಟ್ ಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ್ದಾರೆ.
ಸತತ 17 ವರ್ಷಗಳ ಬಳಿಕ ಭಾರತ ತಂಡವು ವಿಶ್ವಕಪ್ ಗೆಲ್ಲುವ ಮೂಲಕ ಸಂಭ್ರಮಾಚರಣೆಯಲ್ಲಿ ತೊಡಗಿದ್ದ ಕ್ರಿಕೆಟ್ ಪ್ರೇಮಿಗಳಿಗೆ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ನಿವೃತ್ತಿ ಘೋಷಿಸುವ ಮೂಲಕ ಶಾಕ್ ನೀಡಿದರು ಇದರ ಬೆನ್ನಲ್ಲೇ ರವೀಂದ್ರ ಜಡೇಜಾ ಅವರು ಕೂಡ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ನಿವೃತ್ತಿ ಘೋಷಣೆ ಮಾಡಿದ್ದಾರೆ.
ತಮ್ಮ instagram ಖಾತೆಯಲ್ಲಿ ವಿದಾಯದ ಕುರಿತು ಪೋಸ್ಟ್ ಮಾಡಿರುವ ಭಾರತದ ಆಲ್-ರೌಂಡರ್ ರವೀಂದ್ರ ಜಡೇಜಾ “ಧನ್ಯವಾದ ತುಂಬಿದ ಹೃದಯದಿಂದ ನಾನು ಟಿ 20 ಅಂತರಾಷ್ಟ್ರೀಯ ಪಂದ್ಯಗಳಿಗೆ ವಿದಾಯ ಹೇಳುತ್ತೇನೆ. ಹೆಮ್ಮೆಯಿಂದ ಓಡುವ ದೃಢವಾದ ಕುದುರೆಯಂತೆ ನಾನು ಯಾವಾಗಲೂ ನನ್ನ ದೇಶಕ್ಕೆ ಅತ್ಯುತ್ತಮವಾದನ್ನು ನೀಡಿದ್ದೇನೆ” ಎಂದು ಬರೆದುಕೊಂಡಿದ್ದಾರೆ
ಟಿ20 ವಿಶ್ವಕಪ್ ಗೆಲ್ಲುವುದು ನನ್ನ ಕನಸು ಅದು ಇಂದು ನನಸಾಗಿದೆ ಅಂತರಾಷ್ಟ್ರೀಯ ವೃತ್ತಿ ಜೀವನದ ನೆನಪುಗಳು ಹರ್ಷೋದ್ಗಾರಗಳು ಮತ್ತು ನಿಮ್ಮ ಬೆಂಬಲಕ್ಕೆ ಧನ್ಯವಾದಗಳು ಎಂದು ಕ್ರಿಕೆಟ್ ಪ್ರೇಮಿಗಳ ಕುರಿತು ಬರೆದುಕೊಂಡಿದ್ದಾರೆ. ಅಂತರಾಷ್ಟ್ರೀಯ ಟಿ20 ಪಂದ್ಯಗಳನ್ನು ಹೊರತುಪಡಿಸಿ ಇತರೆ ಎಲ್ಲಾ ಸ್ವರೂಪಗಳಲ್ಲಿ ಮುಂದುವರಿಸುತ್ತೇನೆ ಎಂದು ತಿಳಿಸಿದ್ದಾರೆ.