Virat Kohli Retirement T20: ಅಂತರಾಷ್ಟ್ರೀಯ ಟಿ20 ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ವಿರಾಟ್ ಕೊಹ್ಲಿ

By Aishwarya

Published On:

Follow Us

Virat Kohli Retirement T20: ಐಸಿಸಿ ಟಿ20 ವಿಶ್ವಕಪ್‌ನ ಫೈನಲ್‌ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಭಾರತ ತಂಡ 7 ರನ್‌ಗಳ ಐತಿಹಾಸಿಕ ಗೆಲುವು ಸಾಧಿಸಿ ಎರಡನೇ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿತು. ಈ ಗೆಲುವಿನ ನಂತರ ಭಾರತೀಯ ಕ್ರಿಕೆಟ್ ತಂಡದ ಮಾಜಿ‌‌ ನಾಯಕ ವಿರಾಟ್ ಕೊಹ್ಲಿ ಅವರು ಟಿ20 ಕ್ರಿಕೆಟ್‌ಗೆ ಅಧಿಕೃತ ನಿವೃತ್ತಿ ಘೋಷಿಸಿದರು.

ವಿಶ್ವದ ಅತ್ಯುತ್ತಮ ಕ್ರಿಕೆಟ್ ಆಟಗಾರರಲ್ಲಿ ಒಬ್ಬರಾಗಿರುವ ವಿರಾಟ್ ಕೊಹ್ಲಿ‌ ಟಿ20 ವಿಶ್ವಕಪ್ 2024ರ ಫೈನಲ್‌ನ ಪಂದ್ಯಶ್ರೇಷ್ಠ ಅಗಿದರು. ಮುಂದಿನ ಪೀಳಿಗೆಯು ಭಾರತ ತಂಡದ ಜವಾಬ್ದಾರಿ ವಹಿಸಿಕೊಳ್ಳುವ ಸಮಯ ಬಂದಿದೆ ಎಂದು ಹೇಳಿದರು.

ಫೈನಲ್ ಪಂದ್ಯವನ್ನು ಮುಗಿಸಿದ ನಂತರ ‌ಮಾತನಾಡಿದ‌ ಅವರು “ಇದು ನನ್ನ ಕೊನೆಯ ಟಿ20 ವಿಶ್ವಕಪ್ ಆಗಿದ್ದು, ಇದನ್ನು ಗೆಲುವಿನೊಂದಿಗೆ ಅಂತ್ಯಗೊಳಿಸಲು ಬಯಸಿದ್ದೇನೆ” ಎಂದರು.

ಇದು ತನ್ನ ಕೊನೆಯ ಟಿ20 ವಿಶ್ವಕಪ್ ಎಂಬುದು ಬಹಿರಂಗ ರಹಸ್ಯ ಎಂದ ಕೊಹ್ಲಿ, ಇದೀಗ ತಂಡವನ್ನು ಮುನ್ನಡೆಸುವ ಜವಾಬ್ದಾರಿ ಯುವ ಪೀಳಿಗೆಯ ಮೇಲಿದೆ ಎಂದು ಹೇಳಿದರು. ಬಳಿಕ ಈ ಯಶಸ್ಸಿಗೆ ದೇವರಿಗೆ ಕೃತಜ್ಞತೆ ಸಲ್ಲಿಸಿದ ಕೊಹ್ಲಿ, ನಾಯಕ ರೋಹಿತ್ ಶರ್ಮಾ ಅವರನ್ನು ಹೊಗಳಿದರು ಮತ್ತು ಇದು ಅವರ 9 ನೇ ಟಿ20 ವಿಶ್ವಕಪ್ ಮತ್ತು ಅವರು ಅದಕ್ಕೆ ಅರ್ಹರು ಎಂದು ಹೇಳಿದರು.

ಇಡೀ ವಿಶ್ವಕಪ್‌ನಲ್ಲಿ ರನ್ ಗಳಿಸುವಲ್ಲಿ ವಿಫಲವಾಗಿದ್ದ ವಿರಾಟ್ ಕೊಹ್ಲಿ ಫೈನಲ್ ಪಂದ್ಯದಲ್ಲಿ 76 ರನ್ ಗಳಿಸುವ ಮೂಲಕ ಭಾರತ ಪ್ರಶಸ್ತಿ ಗೆಲ್ಲುವಲ್ಲಿ ಪ್ರಮುಖ ಪಾತ್ರ ವಹಿಸಿದರು. ಇನ್ನೂ ಕಿಂಗ್ ಕೂಹ್ಲಿ ಕೇವಲ ಟಿ20 ಮಾತ್ರ ಎಂದು ಹೇಳಿರುವ ಕಾರಣ ಅವರು ಏಕ ದಿನ ಹಾಗೂ ಟೆಸ್ಟ್​ ಪಂದ್ಯಗಳಲ್ಲಿ ಆಡಲಿದ್ದಾರೆ. ಅದೇ ರೀತಿ ಅವರು ಅತಿ ಹೆಚ್ಚು ಆರಾಧಿಸಲ್ಪಡುವ ಐಪಿಎಲ್​ನಲ್ಲಿ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡಕ್ಕೆ ತಮ್ಮ ಸೇವೆ ಮುಂದುವರಿಸಲಿದ್ದಾರೆ.

ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

About the Author

ನಮಸ್ತೆ, ಐಶ್ವರ್ಯ ಚಟ್ನಹಳ್ಳಿ, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಎಂ.ಎ ಪದವಿ. ಪ್ರಸ್ತುತ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಆಪ್ರೆಂಟಿಸ್ ಆಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಜೊತೆಜೊತೆಗೆ khnewstimes.com ನಲ್ಲಿ ಕಂಟೆಂಟ್ ರೈಟರ್ ಆಗಿ ಕೆಲಸ ಮಾಡುತಿದ್ದೇನೆ.

For Feedback - feedback@khnewstimes.com

Leave a Comment

Follow